Home
Deal of the day

10,000ರೂ. ಒಳಗೆ ಫೋನ್‌ ಖರೀದಿ ಮಾಡುವ ಗ್ರಾಹಕರೇ, ಈ ಆಫರ್ ಒಮ್ಮೆ ಗಮನಿಸಿ!

ಹಬ್ಬಗಳು ಬಂದರೇ ಸಾಕು ಇ ಕಾಮರ್ಸ್‌ ತಾಣಗಳು ಕೊಡುಗೆಗಳನ್ನು ಘೋಷಿಸಿ, ಗ್ರಾಹಕರನ್ನು ಸೆಳೆಯುತ್ತವೆ. ಈ ನಿಟ್ಟಿನಲ್ಲಿ ಆನ್‌ಲೈನ್‌ ಶಾಪಿಂಗ್ ಪ್ರಿಯರ ನೆಚ್ಚಿನ ಪ್ಲಾಟ್‌ಫಾರ್ಮ್ ಎನಿಸಿಕೊಂಡಿರುವ ಅಮೆಜಾನ್ ದೀಪಾವಳಿ ಹಬ್ಬದ ಪ್ರಯುಕ್ತ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸೇಲ್‌ ಆಯೋಜಿಸಿದೆ. ಈ ವಿಶೇಷ ಮಾರಾಟ ಮೇಳದಲ್ಲಿ ಜನಪ್ರಿಯ ಹಾಗೂ ಹೊಸ ಮಾಡೆಲ್‌ ಸ್ಮಾರ್ಟ್‌ಫೋನ್ ಗಳಿಗೆ ಆಕರ್ಷಕ ರಿಯಾಯಿತಿ ಘೋಷಿಸಿದೆ.

10,000ರೂ. ಒಳಗೆ ಫೋನ್‌ ಖರೀದಿ ಮಾಡುವ ಗ್ರಾಹಕರೇ, ಈ ಆಫರ್ ಒಮ್ಮೆ ಗಮನಿಸಿ!

ಹೌದು, ಅಮೆಜಾನ್ ಇ ಕಾಮರ್ಸ್‌ ತಾಣವು ಆಯೋಜಿಸಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸೇಲ್‌ ಇದೀಗ ಲೈವ್‌ ಇದೆ. ಈ ಸೇಲ್‌ನಲ್ಲಿ ಅಗ್ಗದ ದರದ ಫೋನ್‌ಗಳಿಂದ, ದುಬಾರಿ ಬೆಲೆಯ ಫ್ಲ್ಯಾಗ್‌ಶಿಫ್‌ ಫೋನ್‌ಗಳ ವರೆಗೂ ಆಯ್ದ ಕೆಲವು ಮಾಡೆಲ್‌ಗಳಿಗೆ ದೊಡ್ಡ ಡಿಸ್ಕೌಂಟ್‌ ನೀಡಲಾಗಿದೆ. ಇದರೊಂದಿಗೆ 5G ಫೋನ್‌ಗಳು, ಅಧಿಕ ಬ್ಯಾಟರಿ ಬ್ಯಾಕ್‌ಅಪ್‌ ಫೋನ್‌ಗಳು, ಕ್ವಾಡ್‌ ಕ್ಯಾಮೆರಾ ಫೋನ್‌ಗಳಿಗೂ ಹೆಚ್ಚಿನ ರಿಯಾಯಿತಿ ನೀಡಿದೆ.

10,000ರೂ. ಒಳಗೆ ಫೋನ್‌ ಖರೀದಿ ಮಾಡುವ ಗ್ರಾಹಕರೇ, ಈ ಆಫರ್ ಒಮ್ಮೆ ಗಮನಿಸಿ!

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಕೆಲವು ಜನಪ್ರಿಯ ಫೋನ್‌ಗಳು 10,000ರೂ. ಬೆಲೆಗಿಂತಲೂ ಕಡಿಮೆ ದರದಲ್ಲಿ ಲಭ್ಯವಾಗುತ್ತವೆ. ಮುಖ್ಯವಾಗಿ ಸ್ಯಾಮ್‌ಸಂಗ್, ರೆಡ್ಮಿ, ಟೆಕ್ನೋ ಸಂಸ್ಥೆಗಳ ಫೋನ್‌ಗಳು ಡಿಸ್ಕೌಂಟ್‌ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ 10,000ರೂ. ಬೆಲೆಗಿಂತಲೂ ಕಡಿಮೆ ದರದಲ್ಲಿ ಲಭ್ಯ ಇರುವ ಜನಪ್ರಿಯ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ 9 ಸ್ಮಾರ್ಟ್‌ಫೋನ್
ರೆಡ್ಮಿ 9 ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM ಜೊತೆಗೆ 64GB ಮತ್ತು 128GB ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದೆ. 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ.

ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ 9 ಪ್ರೈಮ್‌ ಸ್ಮಾರ್ಟ್‌ಫೋನ್
ರೆಡ್ಮಿ 9 ಪ್ರೈಮ್‌ ಸ್ಮಾರ್ಟ್‌ಫೋನ್‌ 1080x2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ 13 ಮೆಗಾಪಿಕ್ಸೆಲ್ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

English summary
Amazon Great Indian Festival 2021: Amazing Discount On These Budget Price Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+