ಅಮೆಜಾನ್ ಹಬ್ಬದ ಸೇಲ್‌ನಲ್ಲಿ ಈ ದುಬಾರಿ ಫೋನ್‌ಗಳಿಗೂ ಭಾರೀ ಡಿಸ್ಕೌಂಟ್!
ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ದೀಪಾವಳಿ ಹಬ್ಬದ ಅಂಗವಾಗಿ ಆಯೋಜಿಸಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸದ್ಯ ಚಾಲ್ತಿ ಇದೆ. ಈ ಸೇಲ್‌ನಲ್ಲಿ ಪ್ರತಿಷ್ಠಿತ ಮೊಬೈಲ್ ಬ್ರ್ಯಾಂಡ್‌ಗಳ ಆಯ್ದ ಹೈ ಎಂಡ್ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ರಿಯಾಯಿತಿ ಪಡೆದಿವೆ. ಆ ಪೈಕಿ, ಅಧಿಕ ಸೆನ್ಸಾರ್ ಕ್ಯಾಮೆರಾ, ವೇಗದ ಪ್ರೊಸೆಸರ್ ನಂತಹ ಫೀಚರ್ಸ್ ಒಳಗೊಂಡ ದುಬಾರಿ ಬೆಲೆಯ ಫ್ಲ್ಯಾಗ್‌ಶಿಪ್ ಮಾಡೆಲ್ ಫೋನ್‌ಗಳು ಆಫರ್‌ನಲ್ಲಿ ಕಾಣಿಸಿಕೊಂಡಿವೆ.

ಅಮೆಜಾನ್ ಇ ಕಾಮರ್ಸ್‌ನ ಹಬ್ಬದ ಸೇಲ್‌ನಲ್ಲಿ ಗ್ಯಾಡ್ಜೆಟ್ಸ್ ಸೇರಿದಂತೆ ಇತರೆ ಉತ್ಪನ್ನಗಳಿಗೂ ಹೆಚ್ಚಿನ ಡಿಸ್ಕೌಂಟ್ ತಿಳಿಸಲಾಗಿದೆ. ಆದರೆ ಮುಖ್ಯವಾಗಿ ದುಬಾರಿ ಬೆಲೆಯ ಫ್ಲ್ಯಾಗ್‌ಶಿಪ್ ಮಾದರಿಯ ಫೋನ್‌ಗಳು ಭಾರೀ ಡಿಸ್ಕೌಂಟ್ ಬೆಲೆಯನ್ನು ಪಡೆದಿವೆ. ಇದರಲ್ಲಿ ಸ್ಯಾಮ್‌ಸಂಗ್, ಒನ್‌ಪ್ಲಸ್, ಶಿಯೋಮಿ ಕಂಪನಿಯ ಫೋನ್‌ಗಳು ಸೇರಿವೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದ ದುಬಾರಿ ಬೆಲೆಯ ಫ್ಲ್ಯಾಗ್‌ಶಿಪ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 5G ಸ್ಮಾರ್ಟ್‌ಫೋನ್ 6.20 ಇಂಚಿನ ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 421PPI ಆಗಿದೆ. ಈ ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಪಡೆದಿದ್ದು, ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿವೆ. ಹಾಗೆಯೇ ಈ ಫೋನ್ 8GB + 128GB ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಫೋನ್ 4000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಪಡೆದಿದೆ.
ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್
ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಅನ್ನು ಹೊಂದಿದ್ದು, 6.55-ಇಂಚಿನ ಫುಲ್‌ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 12GB RAM ಮತ್ತು 256GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಹೊಂದಿದೆ. ಹಾಗೆಯೇ ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 65 ಡಬ್ಲ್ಯೂ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ವಿವೋ X60 ಫೋನ್
ವಿವೋ X60 ಫೋನ್ 1,080x2,376 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ದೊಂದಿಗೆ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್ ಹೊಂದಿದ್ದು, 12GB RAM + 256GB ಆಯ್ಕೆಯನ್ನು ಒಳಗೊಂಡಿದೆ. ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ವಿವೋ X60 ಫೋನ್ 4,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A52s 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೆ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಬಲವನ್ನು ಹೊಂದಿದೆ. ಜೊತೆಗೆ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದುದು 25W ಸೂಪರ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.


Click it and Unblock the Notifications