Home
Deal of the day

ಅಗ್ಗದ ಬೆಲೆಯ 'ಟೆಕ್ನೋ' ಕಂಪನಿಯ ಫೋನ್‌ಗಳು ಈಗ ಮತ್ತಷ್ಟು ಅಗ್ಗ!

ಪ್ರಸ್ತುತ ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸೇಲ್‌ ಆಯೋಜಿಸಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಆಫರ್‌ ಘೋಷಿಸಿ, ಗ್ರಾಹಕರ ಗಮನ ಸೆಳೆದಿದೆ. ಈ ಸೇಲ್‌ನಲ್ಲಿ ಫೋನ್‌ಗಳ ಜೊತೆಗೆ ಇತರೆ ಗ್ಯಾಡ್ಜೆಟ್‌ ಉತ್ಪನ್ನಗಳಿಗೆ ಭಾರೀ ರಿಯಾಯಿತಿ ತಿಳಿಸಿದೆ.

ಅಗ್ಗದ ಬೆಲೆಯ 'ಟೆಕ್ನೋ' ಕಂಪನಿಯ ಫೋನ್‌ಗಳು ಈಗ ಮತ್ತಷ್ಟು ಅಗ್ಗ!

ಹೌದು, ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಇದೇ ಅಕ್ಟೋಬರ್ 3 ರಂದು 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸೇಲ್‌ ಪ್ರಾರಂಭಿಸಿದೆ. ಈ ಹಬ್ಬದ ಸೇಲ್‌ನಲ್ಲಿ ಮುಖ್ಯವಾಗಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು ಹಾಗೂ ಸ್ಮಾರ್ಟ್‌ವಾಚ್‌ಗಳು ಆಫರ್‌ಗಳ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿವೆ. ಹಾಗೆಯೇ ಅಗ್ಗದ ಮತ್ತು ಬಜೆಟ್‌ ಬೆಲೆಯ ಫೋನ್‌ಗಳಿಂದ ಗುರುತಿಸಿಕೊಂಡಿರುವ 'ಟೆಕ್ನೋ' ಕಂಪನಿಯ ಫೋನ್‌ಗಳು ಬೆಸ್ಟ್‌ ಆಫರ್ ನೀಡಿದೆ.

ಅಗ್ಗದ ಬೆಲೆಯ 'ಟೆಕ್ನೋ' ಕಂಪನಿಯ ಫೋನ್‌ಗಳು ಈಗ ಮತ್ತಷ್ಟು ಅಗ್ಗ!

ಹಬ್ಬದ ಅಂಗವಾಗಿ ಅಮೆಜಾನ್ ಆಯೋಜಿಸಿರುವ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಆಯ್ದ ಟೆಕ್ನೋ ಮೊಬೈಲ್‌ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ ಇದೆ. ಟೆಕ್ನೋ ಕಂಪನಿಯ ಬಜೆಟ್‌ ದರದ ಸ್ಮಾರ್ಟ್‌ಫೋನ್‌ ಗಳು ಈ ಸೇಲ್‌ನಲ್ಲಿ ಇನ್ನಷ್ಟು ಡಿಸ್ಕೌಂಟ್‌ನಲ್ಲಿ ಲಭ್ಯ ಆಗಲಿವೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದ ಟೆಕ್ನೋ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3GB RAM ರೂಪಾಂತರವು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸಲಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 6.52 ಹೆಚ್‌ಡಿ+ ಡಾಟ್-ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120-Hz ಟಚ್ ರೆಸ್ಪಾನ್ಸ್‌ ರೇಟ್‌ ಅನ್ನು ಹೊಂದಿದೆ. ಫೋನ್ ಮೀಡಿಯಾ ಟೆಕ್ A25 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್‌ ಎಐ ಡ್ಯುಯಲ್ ಹೈ-ರೆಸಲ್ಯೂಶನ್ ಕ್ಯಾಮೆರಾ ಹೊಂದಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಪೋವಾ ಸ್ಮಾರ್ಟ್‌ಫೋನ್‌
ಟೆಕ್ನೋ ಪೋವಾ ಸ್ಮಾರ್ಟ್‌ಫೋನ್‌ 720 × 1,640 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೊ G 80 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 64GB ಹಾಗೂ 6GB RAM+128GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 18W ಡ್ಯುಯಲ್ ಐಸಿ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಹೊಂದಿದೆ. ಇದರೊಂದಿಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

English summary
Amazon Great Indian Festival 2021: Attractive Deals For Tecno Phones
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+