Home
Deal of the day

ಹೈ ಎಂಡ್‌ ಸ್ಮಾರ್ಟ್‌ಫೋನ್‌ಗಳಿಗೂ ಭರ್ಜರಿ ಡಿಸ್ಕೌಂಟ್‌ ನೀಡಿದ ಅಮೆಜಾನ್!

ಆನ್‌ಲೈನ್‌ ಶಾಪಿಂಗ್ ಪ್ರಿಯರ ನೆಚ್ಚಿನ ಅಡ್ಡಾ ಎನಿಸಿಕೊಂಡಿರುವ ಅಮೆಜಾನ್ ಪ್ಲಾಟ್‌ಫಾರ್ಮ್ ದೀಪಾವಳಿ ಹಬ್ಬದ ಪ್ರಯಕ್ತ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021 ಆಯೋಜಿಸಿದೆ. ಈ ಹಬ್ಬದ ಸೇಲ್‌ನಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ ಉತ್ಪನ್ನಗಳಿಗೆ ಭರ್ಜರಿ ರಿಯಾಯಿತಿಗಳನ್ನು ಘೋಷಿಸಿದೆ.

ಹೈ ಎಂಡ್‌ ಸ್ಮಾರ್ಟ್‌ಫೋನ್‌ಗಳಿಗೂ ಭರ್ಜರಿ ಡಿಸ್ಕೌಂಟ್‌ ನೀಡಿದ ಅಮೆಜಾನ್!

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ಆಯೋಜಿಸಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸದ್ಯ ಲೈವ್‌ ಇದೆ. ಈ ಸೇಲ್‌ನಲ್ಲಿ ಎಲ್ಲ ಉತ್ಪನ್ನಗಳಿಗೂ ಆಕರ್ಷಕ ರಿಯಾಯಿತಿ ತಿಳಿಸಲಾಗಿದೆ. ಆದರೆ ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ಡಿಸ್ಕೌಂಟ್‌ ನೀಡಲಾಗಿದೆ. ಈ ಹಬ್ಬದ ಮಾರಾಟದಲ್ಲಿ ಅಮೆಜಾನ್ ಬಜೆಟ್‌ ದರದ ಫೋನ್‌ಗಳಿಂದ ಹೈ ಎಂಡ್‌ ಮಾಡೆಲ್‌ನ ಫೋನ್‌ಗಳಿಗೂ ಬೊಂಬಾಟ್‌ ಕೊಡುಗೆ ನೀಡಿದೆ.

ಹೈ ಎಂಡ್‌ ಸ್ಮಾರ್ಟ್‌ಫೋನ್‌ಗಳಿಗೂ ಭರ್ಜರಿ ಡಿಸ್ಕೌಂಟ್‌ ನೀಡಿದ ಅಮೆಜಾನ್!

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಆಯ್ದ ಸ್ಯಾಮ್‌ಸಂಗ್, ಆಪಲ್, ಒನ್‌ಪ್ಲಸ್‌ ಹಾಗೂ ಮಿ ಕಂಪನಿಯ ಹೈ ಎಂಡ್‌ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ನೀಡಿದೆ. ಸ್ಯಾಮ್‌ಸಂಗ್, ಆಪಲ್, ಒನ್‌ಪ್ಲಸ್‌ ಹಾಗೂ ಮಿ ಕಂಪನಿಗಳ ಮೊಬೈಲ್ ಸರಣಿಯಲ್ಲಿ ಹಲವು ಮಾದರಿಗಳನ್ನು ಪರಿಚಯಿಸಿದ್ದು, ಆ ಪೈಕಿ ಹೈ ಎಂಡ್ ಫೋನ್‌ಗಳ ಗ್ರಾಹಕರ ಗಮನ ಸೆಳೆದಿವೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದ ಹೈ ಎಂಡ್‌ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 12 ಪ್ರೊ ಫೋನ್‌
ಐಫೋನ್ 12 ಪ್ರೊ ಫೋನ್‌ 6.1-ಇಂಚಿನ ಇಂಚಿನ ಸೂಪರ್ ರೇಟಿನಾ XDR ಮಾದರಿಯ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್‌ ನಲ್ಲಿ ಒಎಲ್ಇಡಿ ಡಿಸ್‌ಪ್ಲೇ ಸುಮಾರು 3.5 ಮಿಲಿಯನ್ ಪಿಕ್ಸೆಲ್‌ಗಳನ್ನು ಹೊಂದಿದೆ ಮತ್ತು ಗರಿಷ್ಠ ಬ್ರೈಟ್‌ನೆಶ್‌ ಮಟ್ಟ 1200 ನಿಟ್‌ಗಳವರೆಗೆ ಹೊಂದಿದೆ. ಹಾಗೆಯೇ ಈ ಫೋನ್ ಐಪಿ 68 ರೇಟಿಂಗ್ ಆಗಿದೆ. ಇದರೊಂದಿಗೆ ಎ 14 ಬಯೋನಿಕ್ ಸಿಸ್ಟಮ್-ಆನ್-ಚಿಪ್‌ಸೆಟ್‌ ಪ್ರೊಸೆಸರ್‌ ಕಾರ್ಯನಿರ್ವಹಿಸಲಿವೆ. ಐಫೋನ್ 12 ಪ್ರೊ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿವೆ. ಇದರಲ್ಲಿ ಐಫೋನ್ 12 ಪ್ರೊ ಎರಡು ವೈಡ್ ಆಂಗಲ್ ಸೆನ್ಸಾರ್‌ಅನ್ನು ಹೊಂದಿದೆ ಮತ್ತು 4x ಆಪ್ಟಿಕಲ್ ಜೂಮ್‌ಗಾಗಿ 52 ಎಂಎಂ ಫೋಕಲ್ ಲೆಂಗ್ತ್ ಟೆಲಿಫೋಟೋ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌
ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಒನ್‌ಪ್ಲಸ್‌ 9 ಪ್ರೊ 5G ಸ್ಮಾರ್ಟ್‌ಫೋನ್
1,440x3,216 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 19.8:9 ಆಗಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇದು ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಹಾಗೆಯೇ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಸಹ 65T Warp ಚಾರ್ಜ್‌ ಸಪೋರ್ಟ್‌ ಪಡೆದಿದೆ.

English summary
Amazon Great Indian Festival 2021: Best Discount On These High End Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+