Home
Deal of the day

5G ಫೋನ್‌ ಖರೀದಿಸುವ ಪ್ಲ್ಯಾನ್ ಇದೆಯಾ?..ಹಾಗಿದ್ರೆ ಇಲ್ಲಿದೆ ನೋಡಿ ಬೆಸ್ಟ್‌ ಆಫರ್!

ಪ್ರಸ್ತುತ ಹಬ್ಬಗಳ ಸಂಭ್ರಮದ ವಾತಾವರಣ ಇದ್ದು, ಜನರು ಹೊಸ ಉತ್ಪನ್ನಗಳನ್ನು ಖರೀದಿಸುವ ಆಲೋಚನೆಯಲ್ಲಿರುತ್ತಾರೆ. ಈ ನಿಟ್ಟಿನಲ್ಲಿ ಇ ಕಾಮರ್ಸ್‌ ದೈತ್ಯ ಅಮೆಜಾನ್ ತಾಣವು 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸೇಲ್‌ ಆಯೋಜಿಸಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌, ಸ್ಮಾರ್ಟ್‌ ಟಿವಿ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ ಉತ್ಪನ್ನಗಳಿಗೆ ಭರ್ಜರಿ ರಿಯಾಯಿತಿ ತಿಳಿಸಿದೆ.

5G ಫೋನ್‌ ಖರೀದಿಸುವ ಪ್ಲ್ಯಾನ್ ಇದೆಯಾ?..ಹಾಗಿದ್ರೆ ಇಲ್ಲಿದೆ ನೋಡಿ ಬೆಸ್ಟ್‌ ಆಫರ್!

ಹೌದು, ಅಮೆಜಾನ್ ಇ ಕಾಮರ್ಸ್‌ ತಾಣವು ಇದೇ ಅಕ್ಟೋಬರ್ 3 ರಂದು 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸೇಲ್‌ ಆಯೋಜಿಸಿದೆ. ಈ ಸೇಲ್‌ನಲ್ಲಿ ಬಜೆಟ್‌ ಫೋನ್‌ಗಳಿಂದ ಹಿಡಿದು ಹೈ ಎಂಡ್‌ ಫೋನ್‌ಗಳ ವರೆಗೂ ಆಯ್ದ ಮಾಡೆಲ್‌ಗಳಿಗೆ ಬೆಸ್ಟ್‌ ರಿಯಾಯಿತಿ ನೀಡಿದೆ. ಜೊತೆಗೆ ಟಿವಿಗಳಿಗೆ ಹಾಗೂ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳಿಗೂ ಬೊಂಬಾಟ್ ಕೊಡುಗೆ ತಿಳಿಸಿದೆ. ಹಾಗೆಯೇ ಈ ಸೇಲ್‌ನಲ್ಲಿ 5G ಫೋನ್‌ಗಗಳಿಗೆ ಹೆಚ್ಚಿನ ಆಫರ್ ನೀಡಿದೆ.

5G ಫೋನ್‌ ಖರೀದಿಸುವ ಪ್ಲ್ಯಾನ್ ಇದೆಯಾ?..ಹಾಗಿದ್ರೆ ಇಲ್ಲಿದೆ ನೋಡಿ ಬೆಸ್ಟ್‌ ಆಫರ್!

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ 5G ಫೋನ್‌ ಗಳಿಗೆ ಬಿಗ್ ಕೊಡುಗೆ ನೀಡಿದೆ. ಬಹುತೇಕ ಜನಪ್ರಿಯ ಫೋನ್‌ಗಳು 5G ಆವೃತ್ತಿಯನ್ನು ಒಳಗೊಂಡಿವೆ. ಈ ಸೇಲ್‌ನಲ್ಲಿ ಸ್ಯಾಮ್‌ಸಂಗ್, ರೆಡ್ಮಿ, ಒನ್‌ಪ್ಲಸ್‌, ವಿವೋ ಸೇರಿದಂತೆ ಇತರೆ ಕಂಪನಿಗಳ 5G ಫೋನ್‌ಗಳು ರಿಯಾಯಿತಿ ಪಡೆದಿವೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದ 5G ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಒನ್‌ಪ್ಲಸ್‌ ನಾರ್ಡ್ CE 5G
ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G
ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 8GB RAM + 128GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ.4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಪಡೆದಿದೆ.

English summary
Amazon Great Indian Festival 2021: Best Offers On These 5G Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+