Home
Deal of the day

Amazon ಸೇಲ್‌ನಲ್ಲಿ ಇತ್ತೀಚಿಗೆ ಬಿಡುಗಡೆ ಆದ ಈ ಫೋನ್‌ಗಳಿಗೆ ಭಾರೀ ಕೊಡುಗೆ!

ಜನಪ್ರಿಯ ಅಮೆಜಾನ್ ಆಯೋಜಿಸಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸದ್ಯ ಚಾಲ್ತಿ ಇದೆ. ಹಬ್ಬದ ಪ್ರಯುಕ್ತ ಆಯೋಜಿಸಿರುವ ಈ ಸೇಲ್‌ ಮೇಳವು ಭರ್ಜರಿ ಕೊಡುಗೆಗಳ ಮೂಲಕ ಶಾಪಿಂಗ್ ಪ್ರಿಯರನ್ನು ಸೆಳೆದಿದೆ. ಇನ್ನು ಈ ಸೇಲ್‌ನಲ್ಲಿ ಅಮೆಜಾನ್ ಇತ್ತೀಚಿಗೆ ಬಿಡುಗಡೆ ಆದ ಕೆಲವು ಹೊಸ ಸ್ಮಾರ್ಟ್‌ಫೋನ್‌ ಹಾಗೂ ಪ್ರಮುಖ ಕಂಪನಿಗಳ ಜನಪ್ರಿಯ ಮಾಡೆಲ್‌ ಫೋನ್‌ಗಳಿಗೂ ಬೊಂಬಾಟ್ ಆಫರ್ ಘೋಷಿಸಿದೆ.

Amazon ಸೇಲ್‌ನಲ್ಲಿ ಇತ್ತೀಚಿಗೆ ಬಿಡುಗಡೆ ಆದ ಈ ಫೋನ್‌ಗಳಿಗೆ ಭಾರೀ ಕೊಡುಗೆ!

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ದೀಪಾವಳಿ ಹಬ್ಬದ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು ಸೇರಿದಂತೆ ಇತರೆ ಎಲೆಕ್ಟ್ರಾನಿಕ ಉತ್ಪನ್ನಗಳಿಗೆ ಹೆಚ್ಚಿನ ಡಿಸ್ಕೌಂಟ್‌ ತಿಳಿಸಲಾಗಿದೆ. ಆದರೆ ಮುಖ್ಯವಾಗಿ ಇತ್ತೀಚಿಗಷ್ಟೆ ಬಿಡುಗಡೆ ಆಗಿರುವ ಕೆಲವು ಆಯ್ದ ಜನಪ್ರಿಯ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ ತಿಳಿಸಿದೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದ ಇತ್ತೀಚಿಗಷ್ಟೆ ಬಿಡುಗಡೆ ಆದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಮಿ 11X ಪ್ರೊ 5G ಸ್ಮಾರ್ಟ್‌ಫೋನ್
ಮಿ 11X ಪ್ರೊ ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್ ನಲ್ಲಿದೆ.

ಒಪ್ಪೋ A16 ಸ್ಮಾರ್ಟ್‌ಫೋನ್‌
ಒಪ್ಪೋ A16 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ HD + ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G35SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಒಪ್ಪೋ A16 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಐಪಿಎಸ್ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಇದು ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಇದು ಆಂಡ್ರಾಯ್ಡ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB ಮತ್ತು 4GB RAM + 128GB ಹಾಗೂ 6GB RAM ಮತ್ತು 128GB ವರೆಗೆ ಸ್ಟೋರೇಜ್ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸರ್ ಹೊಂದಿದೆ. ಇದಲ್ಲದೆ 5,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

English summary
Amazon Great Indian Festival 2021: Best Offers On These Latest Launch Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+