Home
Deal of the day

64MP ಕ್ಯಾಮೆರಾದ ಸ್ಮಾರ್ಟ್‌ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಭರ್ಜರಿ ಡಿಸ್ಕೌಂಟ್‌!

ಅಮೆಜಾನ್ ಪ್ಲಾಟ್‌ಫಾರ್ಮ್ ಆಯೋಜಿಸಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸದ್ಯ ಚಾಲ್ತಿ ಇದೆ. ದೀಪಾವಳಿ ಹಬ್ಬದ ಅಂಗವಾಗಿ ಆಯೋಜಿಸಿರುವ ಈ ಮಾರಾಟ ಮೇಳವು ಭರ್ಜರಿ ಕೊಡುಗೆಗಳ ಮೂಲಕ ಆನ್‌ಲೈನ್‌ ಶಾಪಿಂಗ್ ಪ್ರಿಯರ ಗಮನ ಸೆಳೆದಿದೆ. ಈ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದ ಫೋನ್‌ಗಳ ಪೈಕಿ ಇತ್ತೀಚಿಗೆ ಬಿಡುಗಡೆ ಆದ ಕೆಲವು ಹೊಸ ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ ಉತ್ಪನ್ನ ಸೇರಿವೆ.

64MP ಕ್ಯಾಮೆರಾದ ಸ್ಮಾರ್ಟ್‌ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಭರ್ಜರಿ ಡಿಸ್ಕೌಂಟ್‌!

ಅಮೆಜಾನ್ ಇ ಕಾಮರ್ಸ್‌ನ ಹಬ್ಬದ ಸೇಲ್‌ನಲ್ಲಿ ಗ್ಯಾಡ್ಜೆಟ್ಸ್‌ ಸೇರಿದಂತೆ ಇತರೆ ಉತ್ಪನ್ನಗಳಿಗೂ ಹೆಚ್ಚಿನ ಡಿಸ್ಕೌಂಟ್‌ ತಿಳಿಸಲಾಗಿದೆ. ಆದರೆ ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ಅದರಲ್ಲಿಯೂ ಇತ್ತೀಚಿಗೆ ಟ್ರೆಂಡ್‌ನಲ್ಲಿರುವ 64 ಮೆಗಾ ಪಿಕ್ಸಲ್ ಮುಖ್ಯ ಕ್ಯಾಮೆರಾ ಸೆನ್ಸಾರ್ ಪಡೆದ ಸ್ಮಾರ್ಟ್‌ಫೋನ್‌ಗಳು ಸಹ ಭರ್ಜರಿ ಕೊಡುಗೆಯ ದರದಲ್ಲಿ ಕಾಣಿಸಿಕೊಂಡಿವೆ.

64MP ಕ್ಯಾಮೆರಾದ ಸ್ಮಾರ್ಟ್‌ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಭರ್ಜರಿ ಡಿಸ್ಕೌಂಟ್‌!

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ 64 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಆಯ್ಕೆ ಪಡೆದ ಸ್ಯಾಮ್‌ಸಂಗ್, ಒನ್‌ಪ್ಲಸ್‌ ಹಾಗೂ ಶಿಯೋಮಿ ಸಂಸ್ಥೆಗಳ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ನೀಡಿದೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದ 64 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 20 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 20 ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ ಸೂಪರ್‌ AMOLED ಡಿಸ್‌ಪ್ಲೇ ಹೊಂದಿದೆ. ಇದು Exynos 990 SoC ಚಿಪ್‌ಸೆಟ್‌ ಸಾಮರ್ಥ್ಯದ ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI 2.0 ಬೆಂಬಲಿತ ಆಂಡ್ರಾಯ್ಡ್‌ 10 ಓಎಸ್‌ ಸಪೋರ್ಟ್ ಇದೆ. ಹಾಗೆಯೇ ಈ ಫೋನ್ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಹಾಗೆಯೇ ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ.

ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಜೊತೆಗೆ ಈ ಫೋನ್‌ 4,250mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಈ ಫೋನ್ 33W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಕಾರ್ಯನಿರ್ವಹಿಸಲಿದೆ. ಈ ಫೊನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌
ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ.

English summary
Amazon Great Indian Festival 2021: Big Deal On These 64MP Camera Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+