Home
Deal of the day

ಅಮೆಜಾನ್‌ ಸೇಲ್‌ನಲ್ಲಿ ಈ ಹೊಸ ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ಡಿಸ್ಕೌಂಟ್‌!

ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ನೆಚ್ಚಿನ ಅಡ್ಡಾ ಎಂದೆನಿಸಿಕೊಂಡಿರುವ ಅಮೆಜಾನ್‌ ಇ ಕಾಮರ್ಸ್‌ ತಾಣವು ಭರ್ಜರಿ ಡಿಸ್ಕೌಂಟ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಈ ದೈತ್ಯ ತಾಣವು ಒಂದಿಲ್ಲೊಂದು ಭರ್ಜರಿ ಸೇಲ್‌ ಮೇಳ ಆಯೋಜಿಸುವ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತದೆ. ಮುಖ್ಯವಾಗಿ ಹಬ್ಬದ ದಿನಗಳಂದು ಹಾಗೂ ವಿಶೇಷ ದಿನಗಳಂದು ಹೆಚ್ಚಿನ ರಿಯಾಯಿತಿ ಕೊಡುಗೆಗಳನ್ನು ನೀಡುತ್ತದೆ. ಅದರಲ್ಲಿಯೂ ಗ್ಯಾಡ್ಜೆಟ್ಸ್‌ ಉತ್ಪನ್ನಗಳಿಗೆ ಬಂಪರ್ ಆಫರ್ ಇದ್ದೆ ಇರುತ್ತದೆ. ಸದ್ಯ ಅಮೆಜಾನ್ ತಾಣವು ಆಯೋಜಿಸಿರುವ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021 ಚಾಲ್ತಿ ಇದೆ.

ಅಮೆಜಾನ್‌ ಸೇಲ್‌ನಲ್ಲಿ ಈ ಹೊಸ ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ಡಿಸ್ಕೌಂಟ್‌!

ಹೌದು, ಇದೇ ಅಕ್ಟೋಬರ್ 3 ರಂದು ಅಮೆಜಾನ್ ತಾಣವು ಪ್ರಾರಂಭ ಮಾಡಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಬಿಗ್ ರಿಯಾಯಿತಿಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸೇಲ್‌ನಲ್ಲಿ ಗ್ಯಾಡ್ಜೆಟ್‌ ಉತ್ಪ್ನಗಳಿಗೆ ಸ್ಪೆಷಲ್ ಕೊಡುಗೆಗಳು, ರಿಯಾಯಿತಿಗಳು ಲಭ್ಯ ಇವೆ. ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು ಹಾಗೂ ಸ್ಮಾರ್ಟ್‌ವಾಚ್‌ಗಳು ಸೇರಿದಂತೆ ಇತರೆ ಕೆಲವು ಸ್ಮಾರ್ಟ್‌ ಡಿವೈಸ್‌ಗಳಿಗೂ ಆಕ್ಷಕ ಆಫರ್ ನೀಡಲಾಗಿದೆ. ಮುಖ್ಯವಾಗಿ ಇತ್ತೀಚಿಗಿನ ಕೆಲವು ಮೀಡ್‌ರೇಂಜ್‌ ಸ್ಮಾರ್ಟ್‌ಫೋನ್‌ ಹಾಗೂ ಜನಪ್ರಿಯ ಮೊಬೈಲ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌ ತಿಳಿಸಿದೆ.

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ತಿಳಿಸಲಾಗಿದೆ. ಶಿಯೋಮಿ, ಸ್ಯಾಮ್‌ಸಂಗ್, ರಿಯಲ್‌ಮಿ, ಒನ್‌ಪ್ಲಸ್‌, ಆಪಲ್ ಸೇರಿದಂತೆ ಇತರೆ ಕಂಪನಿಯ ಸ್ಮಾರ್ಟ್‌ಫೋನ್‌ ಗಳು ಬೊಂಬಾಟ್ ರಿಯಾಯಿತಿ ಪ್ರೈಸ್‌ನಲ್ಲಿ ಕಾಣಿಸಿಕೊಂಡಿವೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದಲೂ ಇನ್‌ಸ್ಟಂಟ್ ರಿಯಾಯಿತಿ ಸಿಗಲಿದೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮಿ 11X ಪ್ರೊ 5G ಸ್ಮಾರ್ಟ್‌ಫೋನ್
ಮಿ 11X ಪ್ರೊ ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್ ನಲ್ಲಿದೆ.

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ 90Hz ಸ್ಕ್ರೀನ್‌ ರೀಫ್ರೇಶ್‌ ರೇಟ್ ಹೊಂದಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11.3 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ.‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 20 ಸ್ಮಾರ್ಟ್‌ಫೋನ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 20 ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ ಸೂಪರ್‌ AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಡಿಸ್‌ಪ್ಲೇಯ ರೀಫ್ರೇಶ್‌ ರೇಟ್‌ 60Hz ಸಾಮರ್ಥ್ಯದಲ್ಲಿದೆ. Exynos 990 SoC ಚಿಪ್‌ಸೆಟ್‌ ಸಾಮರ್ಥ್ಯದ ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI 2.0 ಬೆಂಬಲಿತ ಆಂಡ್ರಾಯ್ಡ್‌ 10 ಓಎಸ್‌ ಸಪೋರ್ಟ್ ಇದೆ. ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ ಹೊಂದಿದೆ. 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಹಾಗೆಯೇ ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ.

English summary
Amazon Great Indian Festival 2021: Big Deal On These New Smartphones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+