ಅಮೆಜಾನ್ ಈ 'ಬಿಗ್ ಬ್ಯಾಟರಿ' ಫೋನ್‌ಗಳಿಗೆ ನೀಡಿರುವ ಡಿಸ್ಕೌಂಟ್ ಎಷ್ಟು ಗೊತ್ತಾ?
ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ಆಯೋಜಿಸಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸದ್ಯ ಲೈವ್ ಇದೆ. ದೀಪಾವಳಿ ಹಬ್ಬದ ಅಂಗವಾಗಿ ಆಯೋಜಿಸಿರುವ ಈ ಸೇಲ್ ಮೇಳವು ಆಕರ್ಷಕ ಕೊಡುಗೆಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಇನ್ನು ಈ ಸೇಲ್‌ನಲ್ಲಿ ಇತ್ತೀಚಿಗೆ ಬಿಡುಗಡೆ ಆದ ಕೆಲವು ಹೊಸ ಸ್ಮಾರ್ಟ್‌ಫೋನ್ ಹಾಗೂ ಪ್ರತಿಷ್ಠಿತ ಬ್ರ್ಯಾಂಡ್‌ಗಳ ಜನಪ್ರಿಯ ಮಾಡೆಲ್ ಫೋನ್‌ಗಳಿಗೂ ಬೊಂಬಾಟ್ ಆಫರ್ ನೀಡಿದೆ.

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ದೀಪಾವಳಿ ಈ ವಿಶೇಷ ಸೇಲ್‌ನಲ್ಲಿ ಫೋನ್‌ಗಳು ಸೇರಿದಂತೆ ಇತರೆ ಎಲೆಕ್ಟ್ರಾನಿಕ ಉತ್ಪನ್ನಗಳಿಗೆ ಹೆಚ್ಚಿನ ಡಿಸ್ಕೌಂಟ್ ತಿಳಿಸಲಾಗಿದೆ. ಆದರೆ ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ನೀಡಲಾಗಿದೆ. ಅದರಲ್ಲಿಯೂ ಇತ್ತೀಚಿಗೆ ಲೀಡಿಂಗ್‌ನಲ್ಲಿರುವ 5,000mAh ಮತ್ತು 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಸ್ಮಾರ್ಟ್‌ಫೋನ್‌ಗಳು ಸಹ ಭರ್ಜರಿ ಕೊಡುಗೆಯ ದರದಲ್ಲಿ ಕಾಣಿಸಿಕೊಂಡಿವೆ.

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಆಯ್ಕೆ ಪಡೆದ ಸ್ಯಾಮ್‌ಸಂಗ್, ಒಪ್ಪೊ ಹಾಗೂ ಶಿಯೋಮಿ ಸಂಸ್ಥೆಗಳ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ನೀಡಿದೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಭರ್ಜರಿ ಡಿಸ್ಕೌಂಟ್ ಪಡೆದ 5,000mAh ಮತ್ತು 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಕಾರ್ಯನಿರ್ವಹಿಸಲಿದೆ. ಈ ಫೊನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications