ಭಾರೀ ಡಿಸ್ಕೌಂಟ್‌ನಲ್ಲಿ ಶಿಯೋಮಿ ಫೋನ್ ಖರೀದಿಸಲು ಬೊಂಬಾಟ್ ಅವಕಾಶ!
ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಫೇವರೇಟ್ ಶಾಪಿಂಗ್ ಅಡ್ಡಾ ಎನಿಸಿದೆ. ಜನಪ್ರಿಯ ಇ ಕಾಮರ್ಸ್ ದೊಡ್ಡಣ್ಣ ಎಂದೇ ಗುರುತಿಸಿಕೊಂಡಿರುವ ಅಮೆಜಾನ್ ಏನಾದರೊಂದು ಬೊಂಬಾಟ್ ಸೇಲ್ ಆಯೋಜಿಸುವ ಮೂಲಕ ಗ್ರಾಹಕರನ್ನು ಸೆಳೆಯುತ್ತ ಇರುತ್ತದೆ. ಪ್ರಸ್ತುತ ಈ ತಿಂಗಳು ಹಬ್ಬದ ಅಂಗವಾಗಿ ಅಮೆಜಾನ್ ಪ್ಲಾಟ್‌ಫಾರ್ಮ್ ಜನಪ್ರಿಯ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021 ಆಯೋಜಿಸಿದ್ದು, ಭಾರೀ ಸದ್ದು ಮಾಡುತ್ತಿದೆ.

ಹೌದು, ಇದೇ ಅಕ್ಟೋಬರ್ 3 ರಂದು ಅಮೆಜಾನ್ ತಾಣವು ಪ್ರಾರಂಭ ಮಾಡಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಬಿಗ್ ರಿಯಾಯಿತಿಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸೇಲ್‌ನಲ್ಲಿ ಗ್ಯಾಡ್ಜೆಟ್ ಉತ್ಪನ್ನಗಳಿಗೆ ಬೊಂಬಾಟ್ ಆಫರ್ ಲಭ್ಯ ಮಾಡಿದೆ. ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು ಹಾಗೂ ಸ್ಮಾರ್ಟ್‌ವಾಚ್‌ಗಳು ಸೇರಿದಂತೆ ಇತರೆ ಸ್ಮಾರ್ಟ್ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ತಿಳಿಸಿದೆ. ಹಾಗೆಯೇ ಆಯ್ದ ಕೆಲವು ಜನಪ್ರಿಯ ಶಿಯೋಮಿ ರೆಡ್ಮಿ ಮೊಬೈಲ್ ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್ ಲಭ್ಯ ಇದೆ.

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಆಯ್ದ ಶಿಯೋಮಿ ರೆಡ್ಮಿ ಮೊಬೈಲ್ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಘೋಷಿಸಿದೆ. ಶಿಯೋಮಿ ಕಂಪನಿಯು ರೆಡ್ಮಿ ಸರಣಿಯಲ್ಲಿ ಹಲವು ಮೊಬೈಲ್ ಪರಿಚಯಿಸಿದ್ದು, ಅವುಗಳಲ್ಲಿ ಅಗ್ಗದ ಪ್ರೈಸ್‌ನಿಂದ ಹೈ ಎಂಡ್ ಫೋನ್‌ಗಳ ಆಯ್ಕೆ ಸಹ ಇದೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದ ಶಿಯೋಮಿ ರೆಡ್ಮಿ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB, 6GB + 128GB ಮತ್ತು 8GB RAM + 128GB ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.
ರೆಡ್ಮಿ 9
ಈ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB RAM ಸಾಮರ್ಥ್ಯವನ್ನು ಪಡೆದಿದ್ದು, 64GB ಮತ್ತು 128GB ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್ ಆಯ್ಕೆಯಗಳನ್ನು ಹೊಂದಿದೆ. ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದೆ. 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ.
ರೆಡ್ಮಿ ನೋಟ್ 10 ಪ್ರೊ
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರೆಡ್‌ಮಿ ನೋಟ್ 10s
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಪಡೆದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರೆಡ್ಮಿ 9 ಆಕ್ಟಿವ್
ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 20:9 ಅನುಪಾತವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್ ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್ ಆಯ್ಕೆಯಗಳನ್ನು ಹೊಂದಿದೆ. ಹಾಗೆಯೇ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.


Click it and Unblock the Notifications