Home
Deal of the day

ಇನ್ನೇಕೆ ತಡ!..ಡಿಸ್ಕೌಂಟ್‌ನಲ್ಲಿ ಖರೀದಿಸಿ ಪವರ್‌ಫುಲ್‌ ಪ್ರೊಸೆಸರ್ ಫೋನ್‌!

ಅಮೆಜಾನ್ ಪ್ಲಾಟ್‌ಫಾರ್ಮ್ ಒಂದಿಲ್ಲೊಂದು ಆಫರ್‌ ಮೂಲಕ ಗ್ರಾಹಕರನ್ನು ಸೆಳೆದಿದೆ. ಇದೀಗ ದೀಪಾವಳಿ ಹಬ್ಬದ ಅಂಗವಾಗಿ ಆಯೋಜಿಸಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ರಲ್ಲಿ ಬೊಂಬಾಟ್‌ ಕೊಡುಗೆಗಳ ಮೂಲಕ ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ಆಕರ್ಷಿಸಿದೆ. ಈ ಸೇಲ್‌ನಲ್ಲಿ ಪ್ರತಿಷ್ಠಿತ ಮೊಬೈಲ್‌ ಬ್ರ್ಯಾಂಡ್‌ಗಳ ಆಯ್ದ ಪವರ್‌ಫುಲ್‌ ಪ್ರೊಸೆಸರ್‌ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳಿಗೆ ದೊಡ್ಡ ರಿಯಾಯಿತಿ ತಿಳಿಸಿದೆ.

ಇನ್ನೇಕೆ ತಡ!..ಡಿಸ್ಕೌಂಟ್‌ನಲ್ಲಿ ಖರೀದಿಸಿ ಪವರ್‌ಫುಲ್‌ ಪ್ರೊಸೆಸರ್ ಫೋನ್‌!

ಅಮೆಜಾನ್ ಇ ಕಾಮರ್ಸ್‌ನ ಹಬ್ಬದ ಸೇಲ್‌ನಲ್ಲಿ ಮೊಬೈಲ್‌ಗಳಿಗೆ ನೀಡಿರುವ ಡಿಸ್ಕೌಂಟ್‌ ಗಮನ ಸೆಳೆದಿದೆ. ಹೊಸ ಫೋನ್‌ ಖರೀದಿಸುವವರಿಗೆ ಇದೊಂದು ಅತ್ಯುತ್ತಮ ಪ್ಲಾಟ್‌ಫಾರ್ಮ್ ಎನಿಸಿದೆ. ಅಮೆಜಾನ್ ಸ್ಯಾಮ್‌ಸಂಗ್, ಒನ್‌ಪ್ಲಸ್‌, ಶಿಯೋಮಿ ಕಂಪನಿಯ ಫೋನ್‌ಗಳ ಪವರ್‌ಫುಲ್‌ ಪ್ರೊಸೆಸರ್‌ ಫೋನ್‌ಗಳಿಗೆ ಆಕರ್ಷಕ ಕೊಡುಗೆ ತಿಳಿಸಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಇತರೆ ಹೆಚ್ಚುವರಿ ರಿಯಾಯಿತಿ ಸಹ ಲಭ್ಯ ವಾಗಲಿದೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದ ಪವರ್‌ಫುಲ್‌ ಪ್ರೊಸೆಸರ್‌ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 865 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಒನ್‌ಪ್ಲಸ್‌ 9 ಪ್ರೊ 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್‌ 9 ಪ್ರೊ 5G ಸ್ಮಾರ್ಟ್‌ಫೋನ್ 1,440x3,216 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 19.8:9 ಆಗಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇದು ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಹಾಗೆಯೇ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಸಹ 65T Warp ಚಾರ್ಜ್‌ ಸಪೋರ್ಟ್‌ ಪಡೆದಿದೆ.

ಮಿ 11 ಲೈಟ್ 5G NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಒನ್‌ಪ್ಲಸ್ 8T 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್ 8T 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದ್ದು, 6.55-ಇಂಚಿನ ಫುಲ್‌ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 12GB RAM ಮತ್ತು 256GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX586 ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

English summary
Amazon Great Indian Festival 2021: Great Discount On These Fastest Processor Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+