Home
Deal of the day

ಅಮೆಜಾನ್‌ನಲ್ಲಿ iQoo ಮತ್ತು Mi ಸ್ಮಾರ್ಟ್‌ಫೋನ್‌‌ಗಳಿಗೆ ಆಕರ್ಷಕ ರಿಯಾಯಿತಿ!

ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಏನಾದರೊಂದು ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ಗ್ರಾಹಕರ ಗಮನ ಸೆಳೆಯುತ್ತದೆ. ಪ್ರಸ್ತುತ ದೀಪಾವಳಿ ಹಬ್ಬದ ಅಂಗವಾಗಿ ಅಮೆಜಾನ್ ಪ್ಲಾಟ್‌ಫಾರ್ಮ್ ತನ್ನ ಜನಪ್ರಿಯ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021 ಆಯೋಜಿಸಿದೆ. ಈ ಹಬ್ಬದ ವಿಶೇಷ ಸೇಲ್‌ನಲ್ಲಿ ಹೊಸ ಮತ್ತು ಜನಪ್ರಿಯ ಫೋನ್‌ಗಳಿಗೆ ದೊಡ್ಡ ರಿಯಾಯಿತಿ ತಿಳಿಸಿದೆ.

ಅಮೆಜಾನ್‌ನಲ್ಲಿ iQoo ಮತ್ತು Mi ಸ್ಮಾರ್ಟ್‌ಫೋನ್‌‌ಗಳಿಗೆ ಆಕರ್ಷಕ ರಿಯಾಯಿತಿ!

ಹೌದು, ಅಮೆಜಾನ್ ತಾಣವು ಆಯೋಜಿಸಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಈಗ ಚಾಲ್ತಿ ಇದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು ಹಾಗೂ ಸ್ಮಾರ್ಟ್‌ವಾಚ್‌ಗಳು ಸೇರಿದಂತೆ ಇತರೆ ಸ್ಮಾರ್ಟ್‌ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ತಿಳಿಸಿದೆ. ಹಾಗೆಯೇ ಆಯ್ದ ಕೆಲವು ಜನಪ್ರಿಯ iQOO ಮತ್ತು Mi (ಐಕ್ಯೂ ಮತ್ತು ಮಿ) ಕಂಪನಿಯ ಸ್ಮಾರ್ಟ್‌ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ.

ಅಮೆಜಾನ್‌ನಲ್ಲಿ iQoo ಮತ್ತು Mi ಸ್ಮಾರ್ಟ್‌ಫೋನ್‌‌ಗಳಿಗೆ ಆಕರ್ಷಕ ರಿಯಾಯಿತಿ!

ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಆಯ್ದ iQOO ಮತ್ತು Mi ಕಂಪನಿಯ ಮೊಬೈಲ್‌ ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್‌ ನೀಡಿದೆ. iQOO ಮತ್ತು Mi ಕಂಪನಿಗಳ ಮೊಬೈಲ್ ಸರಣಿಯಲ್ಲಿ ಹಲವು ಮಾದರಿಗಳನ್ನು ಪರಿಚಯಿಸಿದ್ದು, ಆ ಪೈಕಿ ಬಜೆಟ್‌ ಬೆಲೆಯಿಂದ, ಹೈ ಎಂಡ್ ಫೋನ್‌ಗಳ ಆಯ್ಕೆ ಸಹ ಗ್ರಾಹಕರಿಗೆ ಲಭ್ಯ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದ ರಿಯಲ್‌ಮಿ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

iQOO Z3 ಸ್ಮಾರ್ಟ್‌ಫೋನ್‌
ಐಕ್ಯೂಒ Z3 2408x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌+ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

iQOO 7 5G ಲೆಜೆಂಡ್ ಸ್ಮಾರ್ಟ್‌ಫೋನ್‌
iQOO 7 ಲೆಜೆಂಡ್ ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 598 ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಹಾಗೆಯೇ ಈ ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಮಿ 10i 5G ಸ್ಮಾರ್ಟ್‌ಫೋನ್‌
ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G ಪ್ರೊಸೆಸರ್‌ ಹೊಂದಿದೆ. ಈ ಫೋನ್ ಮೂರು ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ 6GB RAM+64GB, 6GB RAM+128GB ಮತ್ತು 8GB RAM+128GB ಆಗಿವೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ನಲ್ಲಿರುವುದು ಪ್ರಮುಖ ಹೈಲೈಟ್‌ ಆಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಮಿ 11X 5G ಸ್ಮಾರ್ಟ್‌ಫೋನ್‌
ಶಿಯೋಮಿ ಮಿ 11X ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

English summary
Amazon Great Indian Festival 2021: Mind Blowing Deals On These iQoo And Mi Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+