ಅಮೆಜಾನ್ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ 51% ವರೆಗೆ ಆಫರ್!
ಇ-ಕಾಮರ್ಸ್ ದೈತ್ಯ ಅಮೆಜಾನ್ ಆನ್‌ಲೈನ್ ಶಾಪಿಂಗ್ ಪ್ರಿಯರಿಗಾಗಿ ವಿಶೇಷ ಸೇಲ್‌ಗಳನ್ನು ಆಯೋಜಿಸುತ್ತಲೇ ಬಂದಿದೆ. ಸದ್ಯ ಸಾಲು ಸಾಲು ಹಬ್ಬಗಳ ಕಾರಣದಿಂದಾಗಿ ಕಳೆದ ತಿಂಗಳಿನಿಂದ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ನಡೆಸುತ್ತಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್, ಸ್ಮಾರ್ಟ್‌ಟಿವಿ ಸೇರಿದಂತೆ ಅನೇಕ ಗ್ಯಾಜೆಟ್ಸ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್ ನೀಡುತ್ತಿದೆ. ಸದ್ಯ ಕಳೆದ ತಿಂಗಳು ಶುರುವಾದ ಈ ವಿಶೇಷ ಸೇಲ್ ನಾಳೆ ಎಂಡ್ ಆಗಲಿದೆ.

ಹೌದು, ಅಮೆಜಾನ್ ಆಕ್ಟೋಬರ್ 3ರಿಂದ ಶುರುವಾದ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ನಾಳೆ ಮುಕ್ತಾಯವಾಗಲಿದೆ. ಈಗಾಗಲೇ ಒಂದು ತಿಂಗಳುಗಳ ಕಾಲ ಹಬ್ಬದ ಸಮಯದಲ್ಲಿ ಆನ್‌ಲೈನ್ ಗ್ರಾಹಕರನ್ನು ಸೆಳೆದಿರುವ ಅಮೆಜಾನ್ ಇಂದು ಕೂಡ ಬಿಗ್ ಡಿಸ್ಕೌಂಟ್ ನೀಡುತ್ತಿದೆ. ಅದರಲ್ಲೂ ಸ್ಮಾರ್ಟ್‌ಫೋನ್‌ಗಳ ಮೇಲೆ 51% ವರೆಗೆ ರಿಯಾಯಿತಿಯನ್ನು ನೀಡುತ್ತಿದೆ. ಸ್ಯಾಮ್‌ಸಂಗ್, ಒಪ್ಪೋ, ರೆಡ್ಮಿ ಸ್ಮಾರ್ಟ್‌ಫೋನ್‌ಗಳ ಮೇಲೆ ಬಿಗ್ ಆಫರ್ ನೀಡಲಾಗಿದೆ. ಹಾಗಾದ್ರೆ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಇಂದು ಸ್ಮಾರ್ಟ್‌ಫೋನ್‌ಗಳ ಮೇಲೆ ಏನೆಲ್ಲಾ ಡಿಸ್ಕೌಂಟ್ ದೊರೆಯಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್ ಅಮೆಜಾನ್ ಸೇಲ್‌ನಲ್ಲಿ 51% ಡಿಸ್ಕೌಂಟ್ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ ಅಮೆಜಾನ್ ಸೇಲ್‌ನಲ್ಲಿ 27% ಡಿಸ್ಕೌಂಟ್ ಪಡೆದಿದೆ. 12,999ರೂ ಬೆಲೆ ಹೊಂದಿರುವ ಈ ಫೋನ್ ಅಮೆಜಾನ್ ನಲ್ಲಿ ಕೇವಲ 9,499ರೂ.ಗಳಿಗೆ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM+64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G
ಅಮೆಜಾನ್ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ 29% ಡಿಸ್ಕೌಂಟ್ ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ರೆಡ್ಮಿ ನೋಟ್ 10 ಲೈಟ್
ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್ ಅಮೆಜಾನ್ ಸೇಲ್‌ನಲ್ಲಿ 17% ಡಿಸ್ಕೌಂಟ್ ಪಡೆದಿದೆ. ಈ ಫೋನ್ 6.67 ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಇದು ಆಂಡ್ರಾಯ್ಡ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. 5,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.
ಒಪ್ಪೋ A74 5G
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.


Click it and Unblock the Notifications