Home
Deal of the day

ಅಮೆಜಾನ್‌ ಸೇಲ್‌ನಲ್ಲಿ 48MP ಪ್ರೈಮೆರಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌!

ಭಾರತದಲ್ಲಿ ಹಬ್ಬಗಳೆಂದರೆ ವಿಶೇಷ ಸ್ಥಾನವಿದೆ. ಹಬ್ಬ ಹರಿದಿನಗಳು ಬಂತೆಂದರೆ ಎಲ್ಲಾ ಮನೆಗಳಲ್ಲೂ ಸಂಭ್ರಮ ಮನೆ ಮಾಡಿರುತ್ತೆ. ಸದ್ಯ ದೇಶದಲ್ಲಿ ನವರಾತ್ರಿ ಮುಗಿದು ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಇನ್ನು ಹಬ್ಬದ ಸಂಭ್ರಮದಲ್ಲಿ ಹೊಸ ಉತ್ಪನ್ನಗಳನ್ನು ಖರೀದಿ ಮಾಡುವವರಿಗೆ ಅಮೆಜಾನ್‌ ಸೇಲ್‌ ವಿಶೇಷ ಸೇಲ್‌ ನಡೆಸುತ್ತಿದೆ. ಸದ್ಯ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ ಆಕ್ಟೋಬರ್‌ 3ರಿಂದಲೇ ಚಾಲ್ತಿಯಲ್ಲಿದೆ. ಈ ಸೇಲ್‌ನಲ್ಲಿ ವಿಶೇಷ ರಿಯಾಯಿತಿಗಳನ್ನು ನೀಡಲಾಗ್ತಿದ್ದು, ಹಬ್ಬದ ಸಂಭ್ರಮವನ್ನು ಇನ್ನಷ್ಟು ರಂಗುಗೊಳಿಸಿದೆ.

ಅಮೆಜಾನ್‌ ಸೇಲ್‌ನಲ್ಲಿ 48MP ಪ್ರೈಮೆರಿ ಕ್ಯಾಮೆರಾ ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌

ಹೌದು, ಹಬ್ಬದ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಲು ಅಮೆಜಾನ್‌ ಗ್ರೇಟ್‌ ಇಂಡಿಯನ್ ಸೇಲ್‌ ನಡೆಸುತ್ತಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಆಯ್ದ ಗ್ಯಾಜೆಟ್ಸ್‌ಗಳ ಮೇಲೆ ವಿಶೇಷ ರಿಯಾಯಿತಿಯನ್ನು ನೀಡಲಾಗ್ತಿದೆ. ಇನ್ನು ನೀವು ಈ ಹಬ್ಬದ ಸಂಭ್ರಮದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸುವ ಆಲೋಚನೆ ಇದ್ದರೆ ಅಮೆಜಾನ್‌ ಸೇಲ್‌ ಉತ್ತಮ ವೇದಿಕೆ ಆಗಿದೆ. ಹಾಗಾದ್ರೆ ಅಮೆಜಾನ್‌ ಸೇಲ್‌ನಲ್ಲಿ 15,000ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಅಮೆಜಾನ್‌ ಸೇಲ್‌ನಲ್ಲಿ 48MP ಪ್ರೈಮೆರಿ ಕ್ಯಾಮೆರಾ ಫೋನ್‌ಗಳಿಗೆ ಬಿಗ್‌ ಡಿಸ್ಕೌಂಟ್‌

ರೆಡ್ಮಿ ನೋಟ್ 10
ಜನಪ್ರಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾದ ರೆಡ್ಮಿ ನೋಟ್ 10 ಸ್ಮಾರ್ಟ್‌ಫೋನ್‌ ಅಮೆಜಾನ್‌ ಸೇಲ್‌ನಲ್ಲಿ 13% ರಿಯಾಯಿತಿ ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಮೂಲಬೆಲೆ 15,999ರೂ. ಆಗಿದ್ದು, ರಿಯಾಯಿತಿ ದರದಲ್ಲಿ ಇದೀಗ 13,999ರೂ.ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌ ಹೆಚ್‌ಡಿ ಸೂಪರ್ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1100 ನಿಟ್ಸ್‌ ಗರಿಷ್ಟ ಭ್ರೈಟ್‌ನೆಸ್‌ ಅನ್ನು ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ರಿಯಲ್‌ಮಿ ನಾರ್ಜೊ 30
ಇನ್ನು ಅಮೆಜಾನ್‌ ಸೇಲ್‌ನಲ್ಲಿ ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ 16% ರಿಯಾಯಿತಿ ಪಡೆದುಕೊಂಡಿದೆ. ಪ್ರಸ್ತುತ ಅಮೆಜಾನ್‌ನಲ್ಲಿ 13,499ರೂ.ಬೆಲೆಗೆ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ ಹೆಲಿಯೊ G95 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್‌ ಕ್ವಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ಚಾರ್ಜಿಂಗ್ ಬೆಂಬಲಿಸಲಿದೆ.

ರೆಡ್ಮಿ 9 ಪವರ್

ರೆಡ್ಮಿ 9 ಪವರ್ ಸ್ಮಾರ್ಟ್‌ಫೋನ್‌ 6.53-ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಪ್ರಸ್ತುತ ಅಮೆಜಾನ್‌ನಲ್ಲಿ 10,999ರೂ.ಬೆಲೆಗೆ ಖರೀದಿಸಬಹುದಾಗಿದೆ.

ಟೆಕ್ನೋ ಸ್ಪಾರ್ಕ್ 7T

ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್‌ ಅಮೆಜಾನ್‌ ಸೇಲ್‌ನಲ್ಲಿ 8,499ರೂ.ಬೆಲೆಗೆ ಲಭ್ಯವಾಗಲಿದೆ. ಈ ಫೋನ್‌ 6.52-ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಹೆಲಿಯೋ G35 ಪ್ರೊಸೆಸರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 48MP AI ಸೆನ್ಸಾರ್‌ ಪ್ರೈಮರಿ ಕ್ಯಾಮೆರಾ ಒಳಗೊಂಡ ಡ್ಯುಯೆಲ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಕೂಡ ಒಳಗೊಂಡಿದೆ.

ನೋಕಿಯಾ G20
ನೋಕಿಯಾ G20 ಸ್ಮಾರ್ಟ್‌ಫೋನ್‌ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಫೆಸ್ಟಿವಲ್‌ ಸೇಲ್‌ನಲ್ಲಿ ಕೇವಲ 13,490ರೂ.ಗಳಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ35 ಪ್ರೊಸೆಸರ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48MP ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5050mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

English summary
Amazon Great Indian Festival has a plethora of smartphone deals on offer. here are the top 48-megapixel cameras phones under Rs 15,000.to know more visit to kannada.gizbot.com.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+