Home
Deal of the day

ಆಫರ್ ಮುಗಿಯಲು ಇನ್ನು ಕೆಲವೇ ದಿನ ಬಾಕಿ; ಫೋನ್‌ ಖರೀದಿಗೆ ಇದುವೇ ಬೆಸ್ಟ್‌ ಟೈಮ್‌!

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಅ ಕಾಮರ್ಸ್‌ ದೈತ್ಯ ಅಮೆಜಾನ್ ಆಯೋಜಿಸಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸದ್ಯ ಚಾಲ್ತಿ ಇದೆ. ಸೇಲ್‌ನಲ್ಲಿ ಬಜೆಟ್‌ ದರದ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದೆ. ಅಂದಹಾಗೇ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2021 ಸೇಲ್ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಹೀಗಾಗಿ ಹೊಸ ಫೋನ್ ಖರೀದಿ ಮಾಡುವವರಿಗೆ ಇದುವೇ ರೈಟ್ ಟೈಮ್ ಎನಿಸಿದೆ.

ಆಫರ್ ಮುಗಿಯಲು ಇನ್ನು ಕೆಲವೇ ದಿನ ಬಾಕಿ; ಫೋನ್‌ ಖರೀದಿಗೆ ಇದುವೇ ಬೆಸ್ಟ್‌ ಟೈಮ್‌!

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ಆಯೋಜಿಸಿರುವ ದೀಪಾವಳಿ ಹಬ್ಬದ ಸೇಲ್‌ ಇದೇ ನವೆಂಬರ್ 2 ರಂದು ಮುಕ್ತಾಯವಾಗಲಿದೆ. ಈ ಸೇಲ್‌ನಲ್ಲಿ ಬಜೆಟ್‌ ದರದ ಫೋನ್‌ಗಳಿಗೆ ಬೊಂಬಾಟ್‌ ಡಿಸ್ಕೌಂಟ್‌ ನೀಡಿದ್ದು, ಗ್ರಾಹಕರು ಇನ್ನಷ್ಟು ಅಗ್ಗದ ಬೆಲೆಗೆ ಫೋನ್‌ ಖರೀದಿಸಬಹುದಾಗಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳ ಕೊಡುಗೆಗಳು ಸಹ ಲಭ್ಯ ಆಗಲಿವೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದ ಬಜೆಟ್‌ ದರದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A03s ಸ್ಮಾರ್ಟ್‌ಫೋನ್ 720x1,600 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ V TFT ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 3GB RAM + 32GB ಮತ್ತು 4GB + 64GB ಸ್ಟೋರೇಜ್‌ ವೇರಿಯಂಟ್‌ ಅನ್ನು ಹೊಂದಿವೆ. ಹಾಗೆಯೇ ಈ ಫೋನ್ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 13 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3GB RAM ರೂಪಾಂತರವು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌
ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್ ಗೋ 2021 ಫೋನ್‌
ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಹೊಂದಿದೆ. ಇದರೊಂದಿಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

English summary
Amazon Great Indian Festival Sale 2021: Amazing Deals On Budget Smartphones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+