ಅಮೆಜಾನ್ ಹಬ್ಬದ ಕೊಡುಗೆ: ಬಜೆಟ್ ದರದ ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್!
ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ದೀಪಾವಳಿ ಹಬ್ಬದ ಅಂಗವಾಗಿ ಆಯೋಜಿಸಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸದ್ಯ ಚಾಲ್ತಿ ಇದೆ. ಈ ಸೇಲ್‌ನಲ್ಲಿ ಸದ್ಯ ಮಾರುಕಟ್ಟೆಯಲ್ಲಿ ಲೀಡಿಂಗ್‌ನಲ್ಲಿರುವ ಮೊಬೈಲ್ ಬ್ರ್ಯಾಂಡ್‌ಗಳ ಆಯ್ದ ಕೆಲವು ಸ್ಮಾರ್ಟ್‌ಫೋನ್‌ಗಳು ಆಕರ್ಷಕ ರಿಯಾಯಿತಿ ಪಡೆದಿವೆ. ಆ ಪೈಕಿ ಕೆಲವು ಬಜೆಟ್ ದರದ ಸ್ಮಾರ್ಟ್ ಫೋನ್‌ಗಳು ಗ್ರಾಹಕರು ಹುಬ್ಬೇರಿಸುವಂತಹ ರಿಯಾಯಿತಿ ಪಡೆದಿವೆ.

ಅಮೆಜಾನ್ ಇ ಕಾಮರ್ಸ್‌ನ ಹಬ್ಬದ ಸೇಲ್‌ನಲ್ಲಿ ಎಲ್ಲ ಬಗೆಯ ಉತ್ಪನ್ನಗಳು ಒಳಗೊಂಡಂತೆ ಗ್ಯಾಡ್ಜೆಟ್ಸ್ ಉತ್ಪನ್ನಗಳಿಗೂ ಹೆಚ್ಚಿನ ಡಿಸ್ಕೌಂಟ್ ತಿಳಿಸಲಾಗಿದೆ. ಆದರೆ ಮುಖ್ಯವಾಗಿ ಗ್ರಾಹಕರು ಮನಸ್ಸು ಮಾಡುವ ಬಜೆಟ್ ದರದ ಬೆಲೆಯ ಫೋನ್‌ಗಳು ಬೊಂಬಾಟ್ ಡಿಸ್ಕೌಂಟ್ ನೀಡಿದೆ. ಸ್ಯಾಮ್‌ಸಂಗ್, ಒನ್‌ಪ್ಲಸ್, ಶಿಯೋಮಿ ಕಂಪನಿಯ ಫೋನ್‌ಗಳು ಸೇರಿವೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದ ಬಜೆಟ್ ದರದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ ನೋಟ್ 10s
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಪಡೆದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರೆಡ್ಮಿ 9 ಫೋನ್
ರೆಡ್ಮಿ 9 ಸ್ಮಾರ್ಟ್‌ಫೋನ್ 6.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ವಾಟರ್ ಡ್ರಾಪ್ ನಾಚ್ ಮಾದರಿಯಲ್ಲಿದ್ದು, ಸುತ್ತಲೂ ತೆಳುವಾದ ಅಂಚನ್ನು ಹೊಂದಿದೆ. ರೆಡ್ಮಿ 9 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್‌ಅ ನ್ನು ಪಡೆದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB ಮತ್ತು 3GB RAM ಹಾಗೂ 64GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM+64GB ಮತ್ತು 6GB RAM+128GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ರೆಡ್ಮಿ 9A ಸ್ಮಾರ್ಟ್ ಫೋನ್
ರೆಡ್ಮಿ 9A ಸ್ಮಾರ್ಟ್‌ಫೋನ್ 720 x 1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 19.5:9 ಅನುಪಾತವನ್ನು ಪಡೆದಿದೆ. ರೆಡ್ಮಿ 9A ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 2GB RAM + 32GB ಮತ್ತು 3GB RAM + 32GB ವೇರಿಯಂಟ್‌ನ ಎರಡು ಆಂತರಿಕ ಸ್ಟೋರೇಜ್ ಆಯ್ಕೆಯಗಳನ್ನು ಹೊಂದಿದೆ. ರೆಡ್ಮಿ 9A ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.


Click it and Unblock the Notifications