ಹಬ್ಬದ ಪ್ರಯುಕ್ತ 'ಒನ್‌ಪ್ಲಸ್' ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ!
ಪ್ರಸ್ತುತ ಸಾಲು ಸಾಲು ಹಬ್ಬಗಳು ಬಂದಿವೆ. ಈ ನಿಟ್ಟಿನಲ್ಲಿ ಇ ಕಾಮರ್ಸ್ ತಾಣಗಳು ಭಾರೀ ರಿಯಾಯಿತಿ ಸೇಲ್ ಮೇಳ ಆಯೋಜಿಸುವ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ. ಆ ಪೈಕಿ ಇ ಕಾಮರ್ಸ್ ದೈತ್ಯ ಅಮೆಜಾನ್ ತಾಣವು 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸೇಲ್ ಆಯೋಜಿಸಿದೆ. ಈ ಸೇಲ್‌ನಲ್ಲಿ ಭರ್ಜರಿ ಆಫರ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸೇಲ್‌ನಲ್ಲಿ ಗ್ಯಾಡ್ಜೆಟ್ ಉತ್ಪನ್ನಗಳಿಗೆ ಭಾರೀ ರಿಯಾಯಿತಿ ತಿಳಿಸಿದೆ.

ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಇದೇ ಅಕ್ಟೋಬರ್ 3 ರಂದು 'ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2021' ಸೇಲ್ ಪ್ರಾರಂಭಿಸಿದೆ. ಈ ಹಬ್ಬದ ಸೇಲ್‌ನಲ್ಲಿ ಗ್ಯಾಡ್ಜೆಟ್ ಮತ್ತು ಎಲೆಕ್ಟ್ರಾನಿಕ್ಸ್ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ತಿಳಿಸಿದೆ. ಮುಖ್ಯವಾಗಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು ಹಾಗೂ ಸ್ಮಾರ್ಟ್‌ವಾಚ್‌ಗಳು ಆಫರ್‌ಗಳ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿವೆ. ಇವುಗಳಲ್ಲಿ ಒನ್‌ಪ್ಲಸ್ (OnePlus) ಕಂಪನಿಯ ಫೋನ್‌ಗಳು ಬೊಂಬಾಟ್ ಕೊಡುಗೆ ಘೋಷಿಸಿದೆ.

ಹಬ್ಬದ ಅಂಗವಾಗಿ ಅಮೆಜಾನ್ ಆಯೋಜಿಸಿರುವ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ನಲ್ಲಿ ಆಯ್ದ ಒನ್‌ಪ್ಲಸ್ (OnePlus) ಮೊಬೈಲ್ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ ಇದೆ. ಒನ್‌ಪ್ಲಸ್ ಕಂಪನಿಯ ಸ್ಮಾರ್ಟ್‌ಫೋನ್ ಶ್ರೇಣಿಯಲ್ಲಿ ಕೆಲವು ಆಯ್ದ ಮಾಡೆಲ್‌ಗಳು ಡಿಸ್ಕೌಂಟ್ ದರದಲ್ಲಿ ಸಿಗಲಿದೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದ ಒನ್‌ಪ್ಲಸ್ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒನ್‌ಪ್ಲಸ್ ನಾರ್ಡ್ 2 5G
ಒನ್‌ಪ್ಲಸ್ ನಾರ್ಡ್ 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಒನ್‌ಪ್ಲಸ್ ನಾರ್ಡ್ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್ ಆಕ್ಸಿಜೆನ್ 11.3 ಓಎಸ್ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.
ಒನ್‌ಪ್ಲಸ್ ನಾರ್ಡ್ CE 5G
ಒನ್‌ಪ್ಲಸ್ ನಾರ್ಡ್ CE 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43-ಇಂಚಿನ ಫುಲ್-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್-ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 750G SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256GB ಇಂಟರ್ ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 30W Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.
ಒನ್‌ಪ್ಲಸ್ 9R 5G
ಒನ್‌ಪ್ಲಸ್ 9R 5G ಫೋನ್ 6.55-ಇಂಚಿನ ಫ್ಲೂಯಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 870 ಪ್ರೊಸೆಸರ್ ಬಲ ಹೊಂದಿದ್ದು, 8 ಜಿಬಿ + 128 ಜಿಬಿ ಮತ್ತು 12 ಜಿಬಿ + 256 ಜಿಬಿ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಕ್ವಾಡ್-ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48 ಎಂಪಿ ಸೋನಿ ಐಎಂಎಕ್ಸ್ 586 ಸೆನ್ಸಾರ್ ಹೊಂದಿದೆ. ಹಾಗೆಯೇ 65W ವಾರ್ಪ್ ಚಾರ್ಜ್ ತಂತ್ರಜ್ಞಾನವನ್ನು ಪಡೆದಿದೆ. ಈ ಫೋನ್ ಕಾರ್ಬನ್ ಬ್ಲ್ಯಾಕ್ ಮತ್ತು ಲೇಕ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯ.
ಒನ್‌ಪ್ಲಸ್ 9 ಪ್ರೊ 5G
ಒನ್‌ಪ್ಲಸ್ 9 ಪ್ರೊ 5G ಸ್ಮಾರ್ಟ್‌ಫೋನ್ 1,440x3,216 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್ ಕೂಲ್ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಈ ಫೋನ್ 8GB/12GB RAM ಮತ್ತು 128GB/256GB ಆಗಿವೆ. ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಇದು 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ.


Click it and Unblock the Notifications