ಸ್ಯಾಮ್‌ಸಂಗ್‌ನ ಈ ಅತ್ಯುತ್ತಮ ಕ್ಯಾಮೆರಾ ಫೋನ್ ಬೆಲೆಯಲ್ಲಿ ಸದ್ಯ ಭಾರೀ ಇಳಿಕೆ!
ಜನಪ್ರಿಯ ಅಮೆಜಾನ್ ಪ್ಲಾಟ್‌ಫಾರ್ಮ್ ಈಗ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2024 (Amazon Great Indian Festival 2024) ಸೇಲ್ ಅನ್ನು ಪ್ರಾರಂಭ ಮಾಡಿದೆ. ಈ ಸೇಲ್ ಮೇಳದಲ್ಲಿ ಕೆಲವು ಆಯ್ದ ಮೊಬೈಲ್‌ಗಳು ಗ್ರಾಹಕರು OMG ಎನ್ನುವಂತಹ ಬೊಂಬಾಟ್ ರಿಯಾಯಿತಿ ಬೆಲೆಗಳನ್ನು ಪಡೆದಿದ್ದು, ಈ ಮೂಲಕ ಅಧಿಕ ಗ್ರಾಹಕರನ್ನು ಸೆಳೆಯುತ್ತಿದೆ. ಸದ್ಯ ಅಮೆಜಾನ್ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್ ಸಂಸ್ಥೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G (Samsung Galaxy A35 5G) ಅತ್ಯುತ್ತಮ ಕೊಡುಗೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G (Samsung Galaxy A35 5G) ಮೊಬೈಲ್ ಶೇ. 9% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 8GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 30,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರ ಜೊತೆಗೆ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್ ಪಡೆದರೆ, ಇದನ್ನು 25,999ರೂ. ಗಳಿಗೆ ಖರೀದಿಸಲು ಅವಕಾಶ ಇದೆ.

ಅಂದಹಾಗೆ ಈ ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯ ಪಡೆದುಕೊಂಡಿದೆ. ಇದರ ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿ ಇದೆ. ಅಲ್ಲದೇ ಇದು 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G - ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಫೋನ್ 1080 × 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಸೂಪರ್ ಅಮೊಲೆಡ್ ಡಿಸ್‌ಪ್ಲೇ ಅನ್ನು ಪಡೆದಿದೆ. ಇದರ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 389 PPI ಆಗಿದ್ದು, 120 Hz ರಿಫ್ರೆಶ್ ರೇಟ್ ಸೌಲಭ್ಯ ಸಹ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಫೋನ್ Exynos 1380 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಅನ್ನು ಒಳಗೊಂಡಿದ್ದು, ಇದರ ಜೊತೆಗೆ ಮಾಲಿ G68 GPU ಸಪೋರ್ಟ್ ಅನ್ನು ಹೊಂದಿದೆ. ಹಾಗೆಯೇ ಇದು ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಕೂಡಾ ಒಳಗೊಂಡಿದೆ. ಅಲ್ಲದೇ ಇದು 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೌಲಭ್ಯದಲ್ಲಿ ಇದೆ ಹಾಗೂ ತೃತೀಯ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿವೆ. ಇನ್ನು ಸೆಲ್ಫಿ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿ ಇದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 25W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಒಳಗೊಂಡಿದೆ. ಇನ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸೌಲಭ್ಯ ಸಹ ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A35 5G ಫೋನ್ 8 GB + 128 GB ಸ್ಟೋರೇಜ್ ವೇರಿಯಂಟ್ ಹಾಗೂ 8 GB + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆ ಗಳನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ ಆಸ್ಸಮ್ ಐಸ್ ಬ್ಲೂ, ಆಸ್ಸಮ್ ಲೈಲಾಕ್ ಹಾಗೂ ಆಸ್ಸಮ್ ನಾವಿ ಕಲರ್ ಆಯ್ಕೆಗಳಲ್ಲಿ ಖರೀದಿ ಮಾಡಬಹುದು.


Click it and Unblock the Notifications








