HONOR ಸಂಸ್ಥೆಯ ಇತ್ತೀಚಿಗಿನ ಈ ಮೊಬೈಲ್‌ಗೆ ಭರ್ಜರಿ ಆಫರ್!..ಬೆಲೆ ಎಷ್ಟು?
ಅಮೆಜಾನ್ ತಾಣದಲ್ಲಿ ಈಗ ಗ್ರೇಟ್ ಇಂಡಿಯನ್ ಫೆಸ್ಟಿವಲ್ 2024 (Amazon Great Indian Festival 2024) ಸೇಲ್ ಅನ್ನು ಪ್ರಾರಂಭ ಮಾಡಿದೆ. ಈ ಸೇಲ್ ಮೇಳದಲ್ಲಿ ಕೆಲವು ಆಯ್ದ ಮೊಬೈಲ್‌ಗಳು ಗ್ರಾಹಕರು ವಾವ್ ಎನ್ನುವಂತಹ ರಿಯಾಯಿತಿ ಬೆಲೆಗಳನ್ನು ಪಡೆದಿದ್ದು, ಈ ಮೂಲಕ ಅಧಿಕ ಗ್ರಾಹಕರನ್ನು ಸೆಳೆಯುತ್ತಿದೆ. ಪ್ರಸ್ತುತ ಅಮೆಜಾನ್ ವೆಬ್‌ಸೈಟ್‌ನಲ್ಲಿ ಹಾನರ್ ಸಂಸ್ಥೆಯ ಹಾನರ್ 200 5G (Honor 200 5G) ಆಕರ್ಷಕ ಆಫರ್ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಹಾನರ್ 200 5G (Honor 200 5G) ಮೊಬೈಲ್ ಶೇ. 38% ರಷ್ಟು ಡಿಸ್ಕೌಂಟ್ ಪಡೆದಿದೆ. ಈ ಫೋನಿನ 8GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 24,998ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಇದರ ಜೊತೆಗೆ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್ ಪಡೆದರೆ, ಇನ್ನಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಸಲು ಅವಕಾಶ ಇದೆ.

ಅಲ್ಲದೇ ಹಾನರ್ 200 5G ಮೊಬೈಲ್ ಬ್ಲ್ಯಾಕ್ ಹಾಗೂ ಮೂನ್‌ಲೈಟ್ ವೈಟ್ ಕಲರ್ ಆಯ್ಕೆ ಪಡೆದಿದ್ದು, 5200mAh ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಸಹ ಪಡೆದಿದೆ. ಅಲ್ಲದೇ ಇದು ಕ್ವಾಡ್ ಕರ್ವ್ಡ್ ಡಿಸ್‌ಪ್ಲೇ ರಚನೆ ಪಡೆದಿರುವುದು ಹೈಲೈಟ್ ಅಂಶ ಎನಿಸಿಕೊಂಡಿದೆ. ಹಾಗಾದರೇ ಹಾನರ್ 200 5G (Honor 200 5G) ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಹಾನರ್ 200 5G ಫೋನ್ - ಫೀಚರ್ಸ್
ಹಾನರ್ 200 5G ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು ಕ್ವಾಡ್ ಕರ್ವ್ಡ್ ಡಿಸ್‌ಪ್ಲೇ ರಚನೆ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇಯು 19.9:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಸಪೋರ್ಟ್ ಮಾಡಲಿದೆ.
ಹಾನರ್ 200 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 3 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡುತ್ತದೆ. ಹಾಗೆಯೇ ಈ ಫೋನ್ MagicOS 8 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM + 256GB ಹಾಗೂ 12GB + 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಇದು ಪಡೆದಿದೆ.
ಹಾನರ್ 200 5G ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸಲ್ ಸೆನ್ಸಾರ್ ಹಾಗೂ ಮೂರನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದುಕೊಂಡಿದೆ. ಇದರೊಂದಿಗೆ ಮುಂಭಾಗದಲ್ಲಿ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಹಾನರ್ 200 5G ಸ್ಮಾರ್ಟ್‌ಫೋನ್ 5,200mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 100W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಗ್ರಾವಿಟಿ ಸೆನ್ಸರ್, ಗೈರೊಸ್ಕೋಪ್, ಕಂಪಾಸ್, ಆಂಬಿಯೆಂಟ್ ಲೈಟ್ ಸೆನ್ಸರ್ ಆಯ್ಕೆಗಳು ಇವೆ.
ಹಾನರ್ 200 5G ಸ್ಮಾರ್ಟ್‌ಫೋನ್ 8GB RAM + 256GB ವೇರಿಯಂಟ್ ಹಾಗೂ 12GB + 512GB ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯ ಇದೆ. ಇನ್ನು ಈ ಮೊಬೈಲ್ ಬ್ಲ್ಯಾಕ್ ಹಾಗೂ ಮೂನ್‌ಲೈಟ್ ವೈಟ್ ಕಲರ್ ಆಯ್ಕೆಗಳಲ್ಲಿ ಗ್ರಾಹಕರ ಖರೀದಿಗೆ ಲಭ್ಯ.


Click it and Unblock the Notifications








