Home
Deal of the day

ಅಗ್ಗದ ಬೆಲೆಯಲ್ಲಿ ಹೊಸ 5G ಮೊಬೈಲ್‌ ಖರೀದಿಸುವ ಗ್ರಾಹಕರಿಗೆ ಈ ಆಫರ್‌ ಬೆಸ್ಟ್‌!

ಅಮೆಜಾನ್‌ ಇ ಕಾಮರ್ಸ್‌ ಒಂದಿಲ್ಲೊಂದು ಮಾರಾಟ ಮೇಳಗಳನ್ನು ಆಯೋಜಿಸುವ ಮೂಲಕ ಗ್ರಾಹಕರನ್ನು ಸೆಳೆಯುತ್ತ ಸಾಗಿದೆ. ಸದ್ಯ ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ಗ್ರೇಟ್‌ ಇಂಡಿಯನ್‌ ಫ್ರಿಡಂ ಫೆಸ್ಟಿವಲ್‌ (Amazon Great Indian Freedom Sale) ಸೇಲ್‌ ಲೈವ್‌ ಇದೆ. ಈ ಮಾರಾಟ ಮೇಳದಲ್ಲಿ ಆಯ್ದ ಮೊಬೈಲ್‌ಗಳು ಭರ್ಜರಿ ಡಿಸ್ಕೌಂಟ್‌ ಪಡೆದುಕೊಂಡಿವೆ. ಅಂದಹಾಗೆ ರೆಡ್ಮಿಯ ಅಗ್ಗದ ರೆಡ್ಮಿ 12 5G (Redmi 12 5G) ಮೊಬೈಲ್‌ ಸಹ ಸಖತ್‌ ಡಿಸ್ಕೌಂಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.

ಹೌದು, ಅಮೆಜಾನ್‌ ತಾಣದಲ್ಲಿ ಗ್ರೇಟ್‌ ಇಂಡಿಯನ್‌ ಫ್ರಿಡಂ ಫೆಸ್ಟಿವಲ್‌ ಸೇಲ್‌ ಚಾಲ್ತಿ ಇದ್ದು, ರೆಡ್ಮಿ 12 5G ಮೊಬೈಲ್‌ ಶೇ. 30% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನ್‌ 8GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಇದೀಗ 13,999ರೂ. ಗಳ ಭರ್ಜರಿ ಡಿಸ್ಕೌಂಟ್‌ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಬ್ಯಾಂಕ್‌ ಕೊಡುಗೆ ಸೇರಿದಂತೆ ಇತರೆ ಕೆಲವು ರಿಯಾಯಿತಿಗಳು ಸಹ ಲಭ್ಯವಾಗಲಿವೆ.

ಅಗ್ಗದ ಬೆಲೆಯಲ್ಲಿ ಹೊಸ 5G ಮೊಬೈಲ್‌ ಖರೀದಿಸುವ ಗ್ರಾಹಕರಿಗೆ ಈ ಆಫರ್‌ ಬೆಸ್ಟ್‌!

ಹಾಗೆಯೇ ಈ ಅಗ್ಗ್ದ 5Gಫೋನ್‌ 4GB + 128GB, 6GB + 128GB ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದ್ದು, 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದಿದೆ. ಹಾಗಾದರೆ ರೆಡ್ಮಿ 12 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 12 5G ಫೋನ್‌ - ಫೀಚರ್ಸ್‌

ರೆಡ್ಮಿ 12 5G ಸ್ಮಾರ್ಟ್‌ಫೋನ್‌ 6.79 ಇಂಚಿನ FHD ಡಿಸ್‌ಪ್ಲೇ ಪಡೆದಿದ್ದು, 90 Hz ನ ರಿಫ್ರೆಶ್ ರೇಟ್ ಸೌಲಭ್ಯವನ್ನು ಸಹ ಒಳಗೊಂಡಿದೆ. ಇದರೊಂದಿಗೆ 1080 X 2400 ಪಿಕ್ಸೆಲ್‌ನ ಸ್ಕ್ರೀನ್ ರೆಸಲ್ಯೂಶನ್‌ ಹಾಗೂ 240Hz ಟಚ್‌ ಮಾದರಿ ರೇಟ್‌ ಆಯ್ಕೆ ಯಾವುದೇ ವಿಡಿಯೋ ವೀಕ್ಷಣೆ ಹಾಗೂ ಗೇಮಿಂಗ್‌ ಸಂದರ್ಭದಲ್ಲಿ ಬಳಕೆದಾರರಿಗೆ ಉತ್ತಮ ಅನುಭವ ನೀಡಲಿದೆ.

ರೆಡ್ಮಿ 12 5G ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 4 ಜನ್ 2 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಸಹ ಪಡೆದಿದೆ. ಹಾಗೆಯೇ ಈ ಫೋನ್‌ ಮೂರು ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಅವು ಕ್ರಮವಾಗಿ 4GB + 128GB, 6GB + 128GB ಹಾಗೂ 8GB + 256GB ಆಗಿವೆ. ಅಲ್ಲದೇ 8GB RAM ನೊಂದಿಗೆ 8 GB ವರ್ಚುವಲ್ RAM ಆಯ್ಕೆ ಸಹ ಇದೆ.

ರೆಡ್ಮಿ 12 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಎರಡನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಆಯ್ಕೆ ಪಡೆದಿದೆ. ಇದರ ಜೊತೆಗೆ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ ಈ ಮೊಬೈಲ್‌ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್‌ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.

ರೆಡ್ಮಿ 12 5G ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಆಯ್ಕೆ ಅನ್ನು ಪಡೆದುಕೊಂಡಿದ್ದು, ಇದಕ್ಕೆ ಪೂರಕವಾಗಿ 18W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಅನ್ನು ಪಡೆದಿದೆ. ಇದರ ಜೊತೆಗೆ ಈ ಫೋನ್‌ ಆಂಡ್ರಾಯ್ಡ್ 13 ಅನ್ನು ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, IP53 ರೇಟಿಂಗ್‌ ಪಡೆದುಕೊಂಡಿದ್ದು, ಧೂಳು ನಿರೋಧಕವಾಗಿದೆ. ಇನ್ನು ಗ್ರಾಹಕರು ಈ ಫೋನ್‌ ಅನ್ನು ಸಿಲ್ವರ್, ಬ್ಲ್ಯಾಕ್‌ ಹಾಗೂ ಬ್ಲೂ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದು.

Best Mobiles in India

English summary
Amazon Great Indian Freedom Sale 2024: Ultimate deal on Redmi 12 5G Phone. check more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+