Home
Deal of the day

ಅಮೆಜಾನ್‌ ಸೇಲ್‌ನಲ್ಲಿ ಈ ಲ್ಯಾಪ್‌ಟಾಪ್‌ಗಳ ಮೇಲೆ ಸಿಗಲಿದೆ 40% ಡಿಸ್ಕೌಂಟ್‌!

ಇ-ಕಾಮರ್ಸ್‌ ದೈತ್ಯ ಅಮೆಜಾನ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ತಾಣ ಎನಿಸಿಕೊಂಡಿದೆ. ತನ್ನ ಆನ್‌ಲೈನ್‌ ಗ್ರಾಹಕರಿಗೆ ವಿಶೇಷ ಸೇಲ್‌ಗಳನ್ನು ಕಾಲಕಾಲಕ್ಕೆ ಆಯೋಜಿಸುತ್ತ ಹಬ್ಬ ಹರಿದಿನಗಳು ಮಾತ್ರವಲ್ಲ ವಿಕೆಂಡ್‌ ಮತ್‌ ಎಂಡ್‌ ಸೇಲ್‌ಗಳನ್ನು ಕೂಡ ಆಯೋಜಿಸುವ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ಅಮೆಜಾನ್‌ ಗ್ರೇಟ್‌ ಇಂಡಿಯನ್‌ ಪೆಸ್ಟಿವಲ್‌ ಸೇಲ್‌ ಮೂಲಕ ಮತ್ತೆ ಬಂದಿದೆ. ಇನ್ನು ಈ ಸೇಲ್‌ನಲ್ಲಿ ಭರ್ಜರಿ ರಿಯಯಾತಿಯನ್ನು ನೀಡುವುದಾಗಿ ಘೋಷಿಸಿದೆ.

ಅಮೆಜಾನ್‌ ಸೇಲ್‌ನಲ್ಲಿ ಈ ಲ್ಯಾಪ್‌ಟಾಪ್‌ಗಳ ಮೇಲೆ ಸಿಗಲಿದೆ 40% ಡಿಸ್ಕೌಂಟ್‌!

ಹೌದು, ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ ಇದೇ ಅಕ್ಟೋಬರ್ 3 ರಿಂದ ಆರಂಭವಾಗಲಿದೆ. ಎಂದಿನಂತೆ ಈ ಭಾರಿಯ ಸೇಲ್‌ನಲ್ಲೂ ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌, ಸ್ಮಾರ್ಟ್‌ಟಿವಿ ಸೇರಿದಂತೆ ಹಲವು ಗ್ಯಾಜೆಟ್ಸ್‌ಗಳ ಮೇಲೆ ಹೆಚ್ಚಿನ ರಿಯಾಯಿತಿಯನ್ನು ನೀಡಲಿದೆ. ಇನ್ನು ಈ ಬಾರಿಯ ಅಮೆಜಾನ್‌ ಸೇಲ್‌ನಲ್ಲಿ ಹಲವು ಲ್ಯಾಪ್‌ಟಾಪ್‌ಗಳ ಮೇಲೆ 40% ಡಿಸ್ಕೌಂಟ್‌ ನೀಡುವುದಾಗಿ ಹೇಳಿದೆ. ಹಾಗಾದ್ರೆ ಅಮೆಜಾನ್‌ ಸೇಲ್‌ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಾಗುವ ಅತ್ಯುತ್ತಮ ಲ್ಯಾಪ್‌ಟಾಪ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಹೆಚ್‌ಪಿ 14 (2021)
ಹೆಚ್‌ಪಿ 14 (2021) ಲ್ಯಾಪ್‌ಟಾಪ್‌ ಅಮೆಜಾನ್‌ ಸೇಲ್‌ನಲ್ಲಿ 40% ಡಿಸ್ಕೌಂಟ್‌ ಪಡೆದುಕೊಂಡಿದೆ. ಇನ್ನು ಈ ಲ್ಯಾಪ್‌ಟಾಪ್‌ 11ನೇ ತಲೆಮಾರಿನ ಇಂಟೆಲ್‌ ಕೋರ್‌ i3 ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನು ಈ ಲ್ಯಾಪ್ ಟಾಪ್ ಇಂಟರ್‌ಬಿಲ್ಟ್‌ ಅಲೆಕ್ಸಾ ವಾಯ್ಸ್‌ ಅನ್ನು ಹೊಂದಿದೆ. ಇದು 14 ಇಂಚಿನ ಫುಲ್‌ ಹೆಚ್‌ಡಿ ಐಪಿಎಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 250 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದು ವಿಂಡೋಸ್‌ 10 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 16GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದು Intel UHD ಗ್ರಾಫಿಕ್ಸ್ ಅನ್ನು ಒಳಗೊಂಡಿದೆ. ಅಮೆಜಾನ್‌ನಲ್ಲಿ ಈ ಲ್ಯಾಪ್‌ಟಾಪ್‌ 40,000 ರೂ ಬೆಲೆಗೆ ಲಭ್ಯವಾಗಲಿದೆ.


ಹೆಚ್‌ಪಿ ಪೆವಿಲಿಯನ್‌(2021)
ಹೆಚ್‌ಪಿ ಪೆವಿಲಿಯನ್‌(2021) ಲ್ಯಾಪ್‌ಟಾಪ್‌ 11 ನೇ ತಲೆಮಾರಿನ ಇಂಟೆಲ್‌ ಕೋರ್ i5 ಪ್ರೊಸೆಸರ್‌ ಹೊಂದಿದೆ. ಈ ಲ್ಯಾಪ್‌ಟಾಪ್‌ 14 ಇಂಚಿನ ಫುಲ್‌ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದ್ದು, ಸ್ಕ್ರೀನ್ ತೆಳುವಾದ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಲ್ಯಾಪ್‌ಟಾಪ್‌ 16GB RAM ಮತ್ತು 512GB ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಜೊತೆಗೆ ಐರಿಸ್ Xe ಗ್ರಾಫಿಕ್ಸ್ ಹೊಂದಿದ್ದು, ವಿಂಡೋಸ್‌ 10 ಮೂಲಕ ಕಾರ್ಯನಿರ್ವಹಿಸಲಿದೆ. ಈ ಲ್ಯಾಪ್‌ಟಾಪ್‌ ಇಂಟರ್‌ಬಿಲ್ಟ್‌ ಅಲೆಕ್ಸಾ ಹೊಂದಿದ್ದು, ಬಳಕೆದಾರರಿಗೆ ಉತ್ತಮ ಅನುಭವ ನೀಡಲಿದೆ. ಸದ್ಯ ಅಮೆಜಾನ್‌ನಲ್ಲಿ 67,090ರೂ. ಬೆಲೆಗೆ ಲಭ್ಯವಾಗಲಿದೆ.

ಹೆಚ್‌ಪಿ ಪೆವಿಲಿಯನ್‌ ಗೇಮಿಂಗ್
ಹೆಚ್‌ಪಿ ಪೆವಿಲಿಯನ್‌ ಗೇಮಿಂಗ್‌ ಲ್ಯಾಪ್‌ಟಾಪ್‌ 15.6 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಗೇಮಿಂಗ್ ಲ್ಯಾಪ್ಟಾಪ್ ವಿಂಡೋಸ್‌ 10 ಆಪರೇಟಿಂಗ್‌ ಸಿಸ್ಟಂ ಹೊಂದಿದೆ. ಇದು AMD Ryzen 5 4600H ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ ಈ ಲ್ಯಾಪ್‌ಟಾಪ್‌ NVIDIA ಜಿಪೋರ್ಸ್‌ GTX 1650 ಗ್ರಾಫಿಕ್ಸ್‌ ಅನ್ನು ಹೊಂದಿದೆ. ಈ ಲ್ಯಾಪ್‌ಟಾಪ್‌ ಮೇಲೆ ನೋ ಕಾಸ್ಟ್‌ ಇಎಂಐ ಲಭ್ಯವಿದೆ. ಹಾಗೆಯೇ ಎಕ್ಸಚೇಂಜ್‌ ಆಫರ್‌ನಲ್ಲಿ 18,400ರೂ ನಿಂದ ಖರೀದಿಸಬಹುದಾಗಿದೆ.

ಹೆಚ್‌ಪಿ ಪೆವಿಲಿಯನ್‌ 13(2021)
ಹೆಚ್‌ಪಿ ಪೆವಿಲಿಯನ್‌ 13(2021) ಲ್ಯಾಪ್‌ಟಾಪ್‌ 11 ನೇ ತಲೆಮಾರಿನ ಇಂಟೆಲ್‌ ಕೋರ್‌ i7 ಪ್ರೊಸೆಸರ್‌ ಹೊಂದಿದೆ. ಇನ್ನು ಈ ಲ್ಯಾಪ್‌ಟಾಪ್‌ 13.3 ಇಂಚಿನ ಫುಲ್‌ ಹೆಚ್‌ಡಿ ಸ್ಕ್ರೀನ್‌ ಅನ್ನು ಹೊಂದಿದೆ. ಈ ಲ್ಯಾಪ್‌ಟಾಪ್‌ 16GB RAM ಮತ್ತು 1TB ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇದು ಇಂಟೆಲ್‌ ಐರಿಸ್‌ X ಗ್ರಾಫಿಕ್ಸ್ ಅನ್ನು ಒಳಗೊಂಡಿದೆ. ಈ ಲ್ಯಾಪ್‌ಟಾಪ್‌ Windows 10 Home ಆಪರೇಟಿಂಗ್ ಸಿಸ್ಟಮ್ ಅನ್ನು ಹೊಂದಿದ್ದು, ವಿಂಡೋಸ್‌ 11 ಗೆ ಉಚಿತ ಅಪ್ಗ್ರೇಡ್ ಮಾಡಲಾಗಿದೆ. ಜೊತೆಗೆ ಈ ಲ್ಯಾಪ್‌ಟಾಪ್‌ನಲ್ಲಿ ಇಂಟರ್‌ಬಿಲ್ಟ್‌ Alexaವನ್ನು ನೀಡಲಾಗಿದೆ. ಸದ್ಯ ಈ ಲ್ಯಾಪ್‌ಟಾಪ್‌ 91,990 ರೂ ಬೆಲೆಗೆ ಲಭ್ಯವಿದೆ.

English summary
amazon great indian sale 2021: Upto 40% Off on Laptops.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+