Home
Deal of the day

ಅಮೆಜಾನ್ ಸೇಲ್‌ 2021: ಈ ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ಅಗ್ಗದ ಬೆಲೆಗೆ ಲಭ್ಯ!

ಇ-ಕಾಮರ್ಸ್ ದೈತ್ಯ ಎನಿಸಿಕೊಂಡಿರುವ ಅಮೆಜಾನ್ ತಾಣವು ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ನೆಚ್ಚಿನ ಅಡ್ಡಾ ಆಗಿದೆ. ಅಮೆಜಾನ್ ಪ್ಲಾಟ್‌ಫಾರ್ಮ್ ಒಂದಿಲ್ಲೊಂದು ಭರ್ಜರಿ ಸೇಲ್‌ ಮೇಳ ಆಯೋಜಿಸುವ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತದೆ. ಮುಖ್ಯವಾಗಿ ಹಬ್ಬದ ದಿನಗಳಂದು ಹಾಗೂ ವಿಶೇಷ ದಿನಗಳಂದು ಹೆಚ್ಚಿನ ರಿಯಾಯಿತಿ ಕೊಡುಗೆಗಳನ್ನು ನೀಡುತ್ತದೆ. ಅದರಲ್ಲಿಯೂ ಗ್ಯಾಡ್ಜೆಟ್ಸ್‌ ಉತ್ಪನ್ನಗಳಿಗೆ ಬಂಪರ್ ಆಫರ್ ಇದ್ದೆ ಇರುತ್ತದೆ. ಸದ್ಯ ಅಮೆಜಾನ್ ತಾಣವು ಆಯೋಜಿಸಿರುವ ಗ್ರೇಟ್ ಇಂಡಿಯನ್ ಸೇಲ್ 2021 ಚಾಲ್ತಿ ಇದೆ.

ಅಮೆಜಾನ್ ಸೇಲ್‌ 2021: ಈ ಜನಪ್ರಿಯ ಸ್ಮಾರ್ಟ್‌ಫೋನ್‌ಗಳು ಅಗ್ಗದ ಬೆಲೆಗೆ ಲಭ್ಯ!

ಹೌದು, ಇದೇ ಅಕ್ಟೋಬರ್ 3 ರಂದು ಅಮೆಜಾನ್ ತಾಣವು ಪ್ರಾರಂಭ ಮಾಡಿರುವ 'ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್ 2021' ಬಿಗ್ ರಿಯಾಯಿತಿಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಸೇಲ್‌ನಲ್ಲಿ ಗ್ಯಾಡ್ಜೆಟ್‌ ಉತ್ಪ್ನಗಳಿಗೆ ಸ್ಪೆಷಲ್ ಕೊಡುಗೆಗಳು, ರಿಯಾಯಿತಿಗಳು ಲಭ್ಯ ಇವೆ. ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು ಹಾಗೂ ಸ್ಮಾರ್ಟ್‌ವಾಚ್‌ಗಳು ಸೇರಿದಂತೆ ಇತರೆ ಕೆಲವು ಸ್ಮಾರ್ಟ್‌ ಡಿವೈಸ್‌ಗಳಿಗೂ ಆಕ್ಷಕ ಆಫರ್ ನೀಡಲಾಗಿದೆ. ಮುಖ್ಯವಾಗಿ ಪ್ರತಿಷ್ಠಿತ ಬ್ರ್ಯಾಂಡ್‌ಗಳ ಇತ್ತೀಚಿಗಿನ ಸ್ಮಾರ್ಟ್‌ಫೋನ್‌ ಹಾಗೂ ಜನಪ್ರಿಯ ಮೊಬೈಲ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌ ತಿಳಿಸಿದೆ.

ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಸುಮಾರು 40% ವರೆಗೂ ರಿಯಾಯಿತಿ ತಿಳಿಸಲಾಗಿದೆ. ಶಿಯೋಮಿ, ಸ್ಯಾಮ್‌ಸಂಗ್, ರಿಯಲ್‌ಮಿ, ಒನ್‌ಪ್ಲಸ್‌, ಆಪಲ್ ಸೇರಿದಂತೆ ಇತರೆ ಕಂಪನಿಯ ಸ್ಮಾರ್ಟ್‌ಫೋನ್‌ ಗಳು ಬೊಂಬಾಟ್ ರಿಯಾಯಿತಿ ಪ್ರೈಸ್‌ನಲ್ಲಿ ಕಾಣಿಸಿಕೊಂಡಿವೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದಲೂ ಇನ್‌ಸ್ಟಂಟ್ ರಿಯಾಯಿತಿ ಸಿಗಲಿದೆ. ಹಾಗಾದರೇ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM+64GB ಮತ್ತು 6GB RAM+128GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್‌ಮಿ ನೋಟ್ 10s
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್
ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 20:9 ಅನುಪಾತವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್ ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಹಾಗೆಯೇ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಕ್ವಾಡ್-ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದ್ದು, ಹಾಗೆಯೇ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ.

ಒಪ್ಪೊ A31 ಸ್ಮಾರ್ಟ್‌ಫೋನ್
ಒಪ್ಪೊ A31 ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯು ವಾಟರ್‌ಡ್ರಾಪ್ ನಾಚ್ ಮಾದರಿಯನ್ನು ಪಡೆದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 9 ಪೈ ಓಎಸ್‌ ಹಾಗೂ ಕಲರ್ ಓಎಸ್ 6 ಸಪೋರ್ಟ್‌ ಪಡೆದಿದೆ. ಹಾಗೆಯೇ 4GB+64GB ವೇರಿಯಂಟ್ ಮತ್ತು 6GB+128GB ವೇರಿಯಂಟ್ ಆಯ್ಕೆ ಹೊಂದಿದೆ. ಹಾಗೆಯೇ ತ್ರಿವಳಿ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿದೆ. ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 4,230 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದ್ದು, ಉತ್ತಮ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒದಗಿಸಲಿದೆ.

English summary
Amazon Great Indian Sale 2021: Upto 40 Off On These Smartphones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+