ಹೊಸ ಫೋನ್ ಖರೀದಿಸುವವರು ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಆಫರ್ ಒಮ್ಮೆ ನೋಡಿ!
ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಅಮೆಜಾನ್ ಏನಾದರೊಂದು ಆಫರ್ ಮೂಲಕ ಗ್ರಾಹಕರ ಗಮನ ಸೆಳೆಯುತ್ತ ಮುನ್ನಡೆದಿದೆ. ಮುಖ್ಯವಾಗಿ ಸ್ಮಾರ್ಟ್‌ಫೋನ್ ಸೇರಿದಂತೆ ಗ್ಯಾಜೆಟ್ಸ್‌ಗಳಿಗೆ ಅಧಿಕ ರಿಯಾಯಿತಿ ಲಭ್ಯ ಮಾಡುತ್ತದೆ. ಇನ್ನು ಕೆಲವೊಮ್ಮೆ ಸ್ಪೆಷಲ್ ಸೇಲ್ ಇದ್ದಾಗ ಮತ್ತಷ್ಟು ಹೆಚ್ಚಿನ ರಿಯಾಯಿತಿ ನೀಡುತ್ತದೆ ಹಾಗೂ ಯಾವುದೇ ಮಾರಾಟ ಇಲ್ಲದ ಸಂದರ್ಭದಲ್ಲಿಯೂ ಆಯ್ದ ಫೋನ್‌ಗಳಿಗೆ ಆಕರ್ಷಕ ಕೊಡುಗೆ ನೀಡಿರುತ್ತೆ.

ಹೌದು, ಅಮೆಜಾನ್ ತಾಣವು ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಅಂಗವಾಗಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಶೇ. 40% ರಿಯಾಯಿತಿ ಲಭ್ಯ ಮಾಡಿದೆ. ಹಾಗೆಯೇ ಈ ಕೊಡುಗೆಯಲ್ಲಿ ಆಕರ್ಷಕ ಎಕ್ಸ್‌ಚೆಂಜ್ ಆಫರ್, ನೋ ಕಾಸ್ಟ್ ಇಎಮ್‌ಐ, ಕೊಪನ್ ನಂತಹ ಕೊಡುಗೆಗಳು ಸಿಗಲಿವೆ. ಇದರೊಂದಿಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸುವ ಗ್ರಾಹಕರಿಗೆ ಶೇ. 10% ತ್ವರಿತ ರಿಯಾಯಿತಿ ತಿಳಿಸಿದೆ. ಹಾಗಾದರೇ ಸದ್ಯ ಅಮೆಜಾನ್‌ನಲ್ಲಿ ಅತ್ಯುತ್ತಮ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ + ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4 GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000 mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್ ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್ ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್ ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 64GB , 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಪಡೆದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications