Home
Deal of the day

ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್: ಈ ಫೋನ್‌ಗಳಿಗೆ ಬೆಸ್ಟ್‌ ರಿಯಾಯಿತಿ!

ಸದಾ ಏನಾದರೊಂದು ಆಫರ್‌ ಮೂಲಕ ಶಾಪಿಂಗ್ ಪ್ರಿಯರನ್ನು ಸೆಳೆಯುವ ಇ ಕಾಮರ್ಸ್‌ ದೈತ್ಯ ಅಮೆಜಾನ್ ಇದೀಗ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಅನ್ನು ಆಯೋಜಿಸಿದೆ. ಈ ಮಾರಾಟ ಮೇಳದಲ್ಲಿ ಪ್ರಮುಖ ಮೊಬೈಲ್‌ ಕಂಪನಿಗಳ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ತಿಳಿಸಿದೆ. ಇದರೊಂದಿಗೆ ಇತರೆ ಎಲೆಕ್ಟ್ರಾನಿಕ್ ಉತ್ಪನ್ನಗಳಿಗೂ ಆಕರ್ಷಕ ಕೊಡುಗೆ ತಿಳಿಸಿದೆ. ಹೀಗಾಗಿ ಆನ್‌ಲೈನ್‌ ಖರೀದಿ ಪ್ರಿಯರನ್ನು ಅಮೆಜಾನ್ ಆಕರ್ಷಿಸುತ್ತಿದೆ.

ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್: ಈ ಫೋನ್‌ಗಳಿಗೆ ಬೆಸ್ಟ್‌ ರಿಯಾಯಿತಿ!

ಹೌದು, ಗಣರಾಜ್ಯೋತ್ಸವದ ಪ್ರಯುಕ್ತ ಅಮೆಜಾನ್ ತಾಣವು ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಅನ್ನು ಆಯೋಜಿಸಿದೆ. ಈ ಸೇಲ್ ಇದೇ ಜನೆವರಿ 17 ರಿಂದ ಪ್ರಾರಂಭವಾಗಿದ್ದು, (ಇಂದು) ಜನೆವರಿ 20ರ ವರೆಗೂ ನಡೆಯಲಿದೆ. ಇನ್ನು ಈ ಮಾರಾಟ ಮೇಳದಲ್ಲಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಸಿಗಲಿದೆ. ಹಾಗೆಯೇ ಈ ಕೊಡುಗೆಯಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡಿವೆ. ಹಾಗೆಯೇ ಆಕರ್ಷಕ ಎಕ್ಸ್‌ಚೆಂಜ್ ಆಫರ್, ನೋ ಕಾಸ್ಟ್‌ ಇಎಮ್‌ಐ, ಕೊಪನ್‌ ನಂತಹ ಕೊಡುಗೆಗಳು ಸಿಗಲಿವೆ. ಇದರೊಂದಿಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸುವ ಗ್ರಾಹಕರಿಗೆ ಶೇ. 10% ತ್ವರಿತ ರಿಯಾಯಿತಿ ತಿಳಿಸಿದೆ. ಹಾಗಾದರೇ ಅಮೆಜಾನ್‌ನ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ನಲ್ಲಿ ಆಕರ್ಷಕ ರಿಯಾಯಿತಿಯಲ್ಲಿ ಕಾಣಿಸಿಕೊಂಡ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಪಾಪ್‌ 5 LTE ಸ್ಮಾರ್ಟ್‌ಫೋನ್‌
ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌ 720 x 1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD+ IPS LCD ಡಿಸ್‌ಪ್ಲೇ ಹೊಂದಿದೆ. ಈ ಫೋನ್‌ ಆಕ್ಟಾ-ಕೋರ್ Unisoc SC9863 SoC ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದೆ. ಇದು ಆಂಡ್ರಾಯ್ಡ್‌ 11 Go-ಆಧಾರಿತ HiOS 7.6 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ f/2.4 ಲೆನ್ಸ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB ಮತ್ತು 6GB + 128GB ಆಗಿವೆ.‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11.3 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 12GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ 4,500 mAh ಬ್ಯಾಟರಿ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

English summary
Amazon Great Republic Day Sale 2022: Best Discount on These Smartphones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+