Home
Deal of the day

ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್: ಕಡಿಮೆ ಬೆಲೆಯ ಫೋನ್‌ಗಳು ಈಗ ಇನ್ನಷ್ಟು ಅಗ್ಗ!

ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್ ಗಣರಾಜ್ಯೋತ್ಸವದ ಪ್ರಯುಕ್ತ ಸದ್ಯ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಅನ್ನು ಆಯೋಜಿಸಿದೆ. ಈ ಮಾರಾಟ ಮೇಳದಲ್ಲಿ ಜನಪ್ರಿಯ ಮೊಬೈಲ್‌ ಫೋನ್‌ಗಳಿಗೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದೆ. ಆ ಪೈಕಿ ಕೆಲವೊಂದು ಫೋನ್‌ಗಳು ಹೆಚ್ಚಿನ ರಿಯಾಯಿತಿ ಪಡೆದಿದ್ದು, ಗ್ರಾಹಕರನ್ನು ಆಕರ್ಷಿಸುತ್ತಿವೆ. ಜೊತೆಗೆ ಇತರೆ ಗ್ಯಾಡ್ಜೆಟ್ಸ್‌ ಉತ್ಪನ್ನಗಳಿಗೂ ಕೊಡುಗೆ ತಿಳಿಸಿದೆ.

ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್: ಕಡಿಮೆ ಬೆಲೆಯ ಫೋನ್‌ಗಳು ಇನ್ನಷ್ಟು ಅಗ್ಗ!

ಹೌದು, ಗಣರಾಜ್ಯೋತ್ಸವದ ಅಂಗವಾಗಿ ಅಮೆಜಾನ್ ತಾಣವು ಗ್ರೇಟ್ ರಿಪಬ್ಲಿಕ್ ಡೇ ಸೇಲ್ ಅನ್ನು ಆಯೋಜಿಸಿದೆ. ಈ ಸೇಲ್ ಜನೆವರಿ 17 ರಿಂದ ಜನೆವರಿ 20ರ ವರೆಗೂ ಇರಲಿದೆ. ಈ ಕೊಡುಗೆಯಲ್ಲಿ ಬಜೆಟ್‌ ದರ ಸ್ಮಾರ್ಟ್‌ಫೋನ್‌ಗಳು ಬೊಂಬಾಟ್ ಡಿಸ್ಕೌಂಟ್‌ ನಲ್ಲಿ ಲಭ್ಯ. ಹಾಗೆಯೇ ಆಕರ್ಷಕ ಎಕ್ಸ್‌ಚೆಂಜ್ ಆಫರ್, ನೋ ಕಾಸ್ಟ್‌ ಇಎಮ್‌ಐ, ಕೊಪನ್‌ ನಂತಹ ಕೊಡುಗೆಗಳು ಸಿಗಲಿವೆ. ಇದರೊಂದಿಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸುವ ಗ್ರಾಹಕರಿಗೆ ಶೇ. 10% ತ್ವರಿತ ರಿಯಾಯಿತಿ ತಿಳಿಸಿದೆ. ಹಾಗಾದರೇ ಅಮೆಜಾನ್‌ನ ಗ್ರೇಟ್ ರಿಪಬ್ಲಿಕ್ ಡೇ ಸೇಲ್ ನಲ್ಲಿ ಆಕರ್ಷಕ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡ ಬಜೆಟ್‌ ದರ ಸ್ಮಾರ್ಟ್‌ಫೋನ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A15s ಸ್ಮಾರ್ಟ್‌ಫೋನ್‌
ಒಪ್ಪೋ A15s ಸ್ಮಾರ್ಟ್‌ಫೋನ್‌ 720 x 1520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.52 ಇಂಚಿನ ಡಿಸ್‌ಪ್ಲೇ ಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್‌ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 19:9 ಆಗಿದ್ದು, 258PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಈ ಫೋನ್ ಮೀಡಿಯಾ ಟೆಕ್‌ ಹಿಲಿಯೋ P35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೇಯೇ 4GB + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಾಗೆಯೇ ಸೆಲ್ಫಿಗಾಗಿ 8 ಎಂಪಿ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,230mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ 9A ಸ್ಮಾರ್ಟ್‌ಫೋನ್‌
ರೆಡ್ಮಿ 9A ಸ್ಮಾರ್ಟ್‌ಫೋನ್ 720 x 1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 19.5:9 ಅನುಪಾತವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 2GB RAM + 32GB ಮತ್ತು 3GB RAM + 32GB ವೇರಿಯಂಟ್‌ನ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಹಾಗೆಯೇ ಈ ಫೋನ್ ಸಿಂಗಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಹಿಂಬದಿಯಲ್ಲಿ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.

iQOO Z3 5G ಸ್ಮಾರ್ಟ್‌ಫೋನ್‌
iQOO Z3 ಸ್ಮಾರ್ಟ್‌ಫೋನ್‌ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,400 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64 GB ಮತ್ತು 6GB RAM + 128 GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

English summary
Amazon Great Republic Day Sale: Attractive Deals On These Popular Budget Price Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+