Home
Deal of the day

ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್: ಅಗ್ಗದ ಈ ಐಟೆಲ್‌ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ!

ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ ಇದೀಗ ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್ 2024 ಪ್ರಾರಂಭ ಮಾಡಿದೆ. ಈ ಮಾರಾಟದಲ್ಲಿ ಪ್ರಮುಖ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ರಿಯಾಯಿತಿಗಳನ್ನು ಘೋಷಿಸಿದೆ. ಹಾಗೆಯೇ ಐಟೆಲ್‌ ಮೊಬೈಲ್‌ ಸಂಸ್ಥೆಯ ಫೋನ್‌ಗಳಿಗೂ ಸಖತ್‌ ರಿಯಾಯಿತಿ ತಿಳಿಸಿದ್ದು, ಗ್ರಾಹಕರನ್ನು ಆಕರ್ಷಿಸಿದೆ.

ಹೌದು, ಅಮೆಜಾನ್‌ ತಾಣದಲ್ಲಿ ಸದ್ಯ ಗ್ರೇಟ್‌ ಸಮ್ಮರ್ ಸೇಲ್‌ ಶುರುವಾಗಿದೆ. ಈ ಮಾರಾಟವು ಇದೇ ಮೇ 7 ರ ವರೆಗೂ ಲೈವ್‌ ಇರಲಿದೆ. ಈ ಸೇಲ್‌ನಲ್ಲಿ ಐಟೆಲ್‌ ಸಂಸ್ಥೆಯ ಕೆಲವು ಜನಪ್ರಿಯ ಮೊಬೈಲ್‌ಗಳು ಬೊಂಬಾಟ್‌ ರಿಯಾಯಿತಿ ಪ್ರೈಸ್‌ಟ್ಯಾಗ್‌ ಪಡೆದಿವೆ. ಹಾಗೆಯೇ ಆಯ್ದ ಬ್ಯಾಂಕ್‌ ಡಿಸ್ಕೌಂಟ್‌ ಸಹ ಲಭ್ಯವಾಗಲಿದೆ. ಹಾಗಾದರೇ ಆಫರ್‌ನಲ್ಲಿ ಲಭ್ಯ ಇರುವ ಐಟೆಲ್‌ ಫೋನ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್: ಅಗ್ಗದ ಈ ಐಟೆಲ್‌ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ!

ಐಟೆಲ್‌ A70 ಸ್ಮಾರ್ಟ್‌ಫೋನ್‌

ಐಟೆಲ್‌ A70 ಮೊಬೈಲ್‌ 6.6 ಇಂಚಿನ HD+ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1,612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು ಆಕ್ಟಾ ಕೋರ್ Unisoc T603 ಚಿಪ್‌ಸೆಟ್‌ ಹೊಂದಿದ್ದು, ಇದು ಆಂಡ್ರಾಯ್ಡ್‌ 13 ಗೋ ಆವೃತ್ತಿ ಆಧಾರಿತ ಐಟೆಲ್‌ ಓಎಸ್‌ 13 ನಲ್ಲಿ ರನ್‌ ಆಗಲಿದೆ.

ಹಾಗೆಯೇ ಇದು ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದರೊಂದಿಗೆ ಈ ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಅಮೆಜಾನ್‌ ತಾಣದಲ್ಲಿ ಎಲ್ಲ ಕೊಡುಗೆ ಸೇರಿ ಈ ಫೋನ್‌ ಅನ್ನು 5,999ರೂ. ಗಳಿಗೆ ಖರೀದಿಸಬಹುದಾಗಿದೆ.

ಅಮೆಜಾನ್ ಗ್ರೇಟ್ ಸಮ್ಮರ್ ಸೇಲ್: ಅಗ್ಗದ ಈ ಐಟೆಲ್‌ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ!

ಐಟೆಲ್‌ P55 ಪ್ಲಸ್‌ ಸ್ಮಾರ್ಟ್‌ಫೋನ್‌

ಐಟೆಲ್‌ P55 ಪ್ಲಸ್‌ ಸ್ಮಾರ್ಟ್‌ಫೋನ್‌ 6.6 ಇಂಚಿನ ಪಂಚ್ ಹೋಲ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಜೊತೆಗೆ ಆಕ್ಟಾ ಕೋರ್ Unisoc T606 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 13 OS ನಲ್ಲಿ ಕೆಲಸ ಮಾಡಲಿದೆ.

ಹಾಗೆಯೇ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೌಲಭ್ಯ ಸಹ ಪಡೆದಿದೆ. ಇದರೊಂದಿಗೆ ಈ ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಜೊತೆಗೆ 45W ಹೈಪರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಅಮೆಜಾನ್‌ ತಾಣದಲ್ಲಿ ಎಲ್ಲ ಕೊಡುಗೆ ಸೇರಿ ಈ ಫೋನ್‌ ಅನ್ನು 8,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

ಐಟೆಲ್ S24 ಸ್ಮಾರ್ಟ್‌ಫೋನ್‌

ಐಟೆಲ್ S24 ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಆಯ್ಕೆ ಜೊತೆಗೆ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, ಇದು ಪಂಚ್-ಹೋಲ್ ಶೈಲಿ ಪಡೆದಿದೆ. ಹಾಗೆಯೇ ಇದು ಮೀಡಿಯಾ ಟೆಕ್‌ ಹಿಲಿಯೋ G91 ಆಕ್ಟಾ ಕೋರ್ ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್ 108 ಮೆಗಾ ಪಿಕ್ಸೆಲ್‌ ಸ್ಯಾಮ್‌ಸಂಗ್‌ ISOCELL HM6 ಪ್ರಾಥಮಿಕ ಕ್ಯಾಮೆರಾ ಸೆನ್ಸರ್‌ ಹೊಂದಿದ್ದು, ಇದರ ಜೊತೆಗೆ 18W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ನೊಂದಿಗೆ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದೆ. ಅಮೆಜಾನ್‌ ತಾಣದಲ್ಲಿ ಎಲ್ಲ ಕೊಡುಗೆ ಸೇರಿ ಈ ಫೋನ್‌ ಅನ್ನು 9,999ರೂ. ಗಳಿಗೆ ಖರೀದಿ ಮಾಡಬಹುದಾಗಿದೆ.

Best Mobiles in India

English summary
Amazon Great Summer Sale 2024: Best Discounts on itel A70, itel S24 and more. check price and other details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+