ಅಮೆಜಾನ್‌ ಸೇಲ್‌ನಲ್ಲಿ ಈ ಫೋನ್‌ಗಳಿಗೆ ಲಭ್ಯವಿರುವ ಡಿಸ್ಕೌಂಟ್‌ಗೆ ಗ್ರಾಹಕರು ಫಿದಾ!

|

ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ನೆಚ್ಚಿನ ಅಡ್ಡಾ ಎಂದೆನಿಸಿಕೊಂಡಿರುವ ಅಮೆಜಾನ್‌ ಇ ಕಾಮರ್ಸ್‌ ತಾಣವು ಭರ್ಜರಿ ಕೊಡುಗೆಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಮುಖ್ಯವಾಗಿ ಹಬ್ಬದ ದಿನಗಳಂದು ಹಾಗೂ ವಿಶೇಷ ದಿನಗಳಂದು ಹೆಚ್ಚಿನ ರಿಯಾಯಿತಿ ಕೊಡುಗೆಗಳನ್ನು ನೀಡುತ್ತದೆ. ಅದರಲ್ಲಿಯೂ ಗ್ಯಾಡ್ಜೆಟ್ಸ್‌ ಉತ್ಪನ್ನಗಳಿಗೆ ಆಕರ್ಷಕ ಆಫರ್ ಇದ್ದೆ ಇರುತ್ತದೆ. ಇದೀಗ ಅಮೆಜಾನ್ ತಾಣವು ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಗ್ರಾಹಕರ ಗಮನ ಸೆಳೆದಿದೆ.

ಅಮೆಜಾನ್‌ ಸೇಲ್‌ನಲ್ಲಿ ಈ ಫೋನ್‌ಗಳಿಗೆ ಲಭ್ಯವಿರುವ ಡಿಸ್ಕೌಂಟ್‌ಗೆ ಗ್ರಾಹಕರು ಫಿದಾ!

ಹೌದು, ಅಮೆಜಾನ್ ತಾಣವು ಇದೀಗ ಕಿಕ್‌ಸ್ಟಾರ್ಟರ್ ಡೀಲ್‌ (Kickstarter) ಮಾರಾಟ ಮೇಳವನ್ನು ಆಯೋಜಸಿದ್ದು, ಈ ಮಾರಾಟವು ಈಗ ಚಾಲ್ತಿ ಇದೆ. ಈ ಸೇಲ್‌ನಲ್ಲಿ ಗ್ಯಾಡ್ಜೆಟ್‌ ಉತ್ಪನ್ನಗಳಿಗೆ ಅತ್ಯುತ್ತಮ ಕೊಡುಗೆಗಳು, ರಿಯಾಯಿತಿಗಳು ಲಭ್ಯ ಇವೆ. ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು ಹಾಗೂ ಸ್ಮಾರ್ಟ್‌ವಾಚ್‌ಗಳು ಸೇರಿದಂತೆ ಇತರೆ ಕೆಲವು ಸ್ಮಾರ್ಟ್‌ ಡಿವೈಸ್‌ಗಳಿಗೂ ಗಮನ ಸೆಳೆವ ಆಫರ್ ನೀಡಲಾಗಿದೆ. ಮುಖ್ಯವಾಗಿ ಇತ್ತೀಚಿಗಿನ ಕೆಲವು ಮೀಡ್‌ರೇಂಜ್‌ ಸ್ಮಾರ್ಟ್‌ಫೋನ್‌ ಹಾಗೂ ಜನಪ್ರಿಯ ಮೊಬೈಲ್‌ಗಳಿಗೆ ಆಕರ್ಷಕ ಡಿಸ್ಕೌಂಟ್‌ ತಿಳಿಸಿದೆ. ಹಾಗಾದರೆ ಸೇಲ್‌ ಅತ್ಯುತ್ತಮ ಆಫರ್‌ ಪಡೆದ ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೊ 50i
ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್‌ 8 ಮೆಗಾಪಿಕ್ಸೆಲ್ AI ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 43 ದಿನಗಳ ಸ್ಟ್ಯಾಂಡ್‌ಬೈ ಟೈಂ ಅನ್ನು ಹೊಂದಿರಲಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಅನ್ನು ಸಹ ಹೊಂದಿದೆ.

ರೆಡ್ಮಿ 10 ಪ್ರೈಮ್‌ ಸ್ಮಾರ್ಟ್‌ಫೋನ್‌
ರೆಡ್ಮಿ 10 ಪ್ರೈಮ್‌ ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಇದು 6,000mAh ಬ್ಯಾಟರಿ ಹೊಂದಿದ್ದು, ಇದು 10W ಫಾಸ್ಟ್ ಚಾರ್ಜಿಂಗ್ ಅನ್ನು 22.5W ಚಾರ್ಜರ್ ಮತ್ತು 9W ವರೆಗೆ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್‌ 9 ಸ್ಮಾರ್ಟ್‌ಫೋನ್‌ 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು, 266 ppi ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ. ಈ ಫೋನ್ ಮೀಡಿಯಾಟೆಕ್‌ ಹಿಲಿಯೋ G37 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗಯೇ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

ಒಪ್ಪೋ A15s ಸ್ಮಾರ್ಟ್‌ಫೋನ್‌
ಒಪ್ಪೋ A15s ಸ್ಮಾರ್ಟ್‌ಫೋನ್‌ 720 x 1520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.52 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್‌ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 19:9 ಆಗಿದ್ದು, 258PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ.ಇದು ಮೀಡಿಯಾ ಟೆಕ್‌ ಹಿಲಿಯೋ P35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಹಾಗೇಯೇ 4GB + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, 4,230mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಉತ್ತಮ ಚಾರ್ಜಿಂಗ್‌ ವ್ಯವಸ್ಥೆ ನೀಡಲಾಗಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್‌ ಅನ್ನು ಹೊಂದಿದೆ. ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 64GB, 6GB + 128GB ಮತ್ತು 8GB RAM + 128GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ. ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

Best Mobiles in India

English summary
Amazon Kickstarter Deals: Top offers on These Budget Price Phones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X