ಅಮೆಜಾನ್ ಸೇಲ್: ಈ ಜನಪ್ರಿಯ ಸ್ಮಾರ್ಟ್‌ಫೋನ್‌ಗಳಿಗೆ ಜಬರ್ದಸ್ತ್ ರಿಯಾಯಿತಿ!
ಜನಪ್ರಿಯ ಅಮೆಜಾನ್ ಪ್ಲಾಟ್‌ಫಾರ್ಮ್ ಏನಾದರೊಂದು ವಿಶೇಷ ಸೇಲ್ ಆಯೋಜಿಸುತ್ತಲೇ ಮುನ್ನಡೆದಿದೆ. ಮುಖ್ಯವಾಗಿ ಎಲೆಕ್ಟ್ರಾನಿಕ್ ಹಾಗೂ ಗ್ಯಾಡ್ಜೆಟ್ಸ್‌ಗಳಿಗೆ ವಿಶೇಷ ರಿಯಾಯಿತಿ ಸೇಲ್ ಅನ್ನು ಆಯೋಜಿಸಿ ಗಮನ ಸೆಳೆಯುತ್ತದೆ. ಅಮೆಜಾನ್ ಇದೀಗ ಫ್ಲಿಪ್‌ಕಾರ್ಟ್ ಮೊಬೈಲ್ ಸೇವಿಂಗ್ಸ್ ಡೇಸ್ 2022 ಸೇಲ್ ಅನ್ನು ಆಯೋಜಿಸಿದೆ. ಈ ಮಾರಾಟ ಸೇಲ್‌ನಲ್ಲಿ ಆಯ್ದ ಕೆಲವು ನೂತನ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿಗಳನ್ನು ಘೋಷಿಸಿದೆ.

ಹೌದು, ಅಮೆಜಾನ್ ಇ ಕಾಮರ್ಸ್ ತಾಣವು ಆಯೋಜಿಸಿರುವ ಮೊಬೈಲ್ ಸೇವಿಂಗ್ಸ್ ಡೇಸ್ 2022 ಸೇಲ್ ಇದೀಗ ಲೈವ್ ಆಗಿದೆ. ಇನ್ನು ಈ ಸೇಲ್ ಮೇಳವು ಇದೇ ಜನೆವರಿ 31 ರಂದು ಮುಕ್ತಾಯವಾಗಲಿದೆ. ಈ ಮಾರಾಟ ಮೇಳದಲ್ಲಿ ಜನಪ್ರಿಯ ಮೊಬೈಲ್ ಹಾಗೂ ಇತ್ತೀಚಿಗೆ ಬಿಡುಗಡೆಗೊಂಡ ಫೋನ್‌ಗಳಿಗೂ ಶೇ. 40% ವರೆಗೂ ರಿಯಾಯಿತಿಯನ್ನು ತಿಳಿಸಿದೆ. ಹಾಗೆಯೇ ನೋ ಕಾಸ್ಟ್ ಇಎಮ್‌ಐ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯ ಮಾಡಿದೆ. ಹಾಗಾದರೇ ಅಮೆಜಾನ್ ಮೊಬೈಲ್ ಸೇವಿಂಗ್ಸ್ ಡೇಸ್ 2022 ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಲಭ್ಯವಿರುವ ಸ್ಮಾರ್ಟ್‌ಫೋನ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.
ಒನ್‌ಪ್ಲಸ್ ನಾರ್ಡ್ 2 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್ ನಾರ್ಡ್ 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಒನ್‌ಪ್ಲಸ್ ನಾರ್ಡ್ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್ ಆಕ್ಸಿಜೆನ್ 11.3 ಓಎಸ್ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.
ಒಪ್ಪೋ A15s ಸ್ಮಾರ್ಟ್‌ಫೋನ್
ಒಪ್ಪೋ A15s ಸ್ಮಾರ್ಟ್‌ಫೋನ್ 720 x 1520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 6.52 ಇಂಚಿನ ಡಿಸ್‌ಪ್ಲೇ ಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 19:9 ಆಗಿದ್ದು, 258PPI ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೋ P35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೇಯೇ 4GB + 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ ಸೆಲ್ಫಿಗಾಗಿ 8 ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4,230mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ.
ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್
ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಹಾಗೆಯೇ 8GB + 128GB, 8GB + 256GB ಮತ್ತು 12GB + 256GB ಸಾಮರ್ಥ್ಯದ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10s ಸ್ಮಾರ್ಟ್ ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications