ಅಮೆಜಾನ್‌ನಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ!
ಅಮೆಜಾನ್ ಪ್ಲಾಟ್‌ಫಾರ್ಮ್ ಒಂದಿಲ್ಲೊಂದು ಮಾರಾಟ ಮೇಳ ಆಯೋಜಿಸುತ್ತಲೇ ಮುನ್ನಡೆದಿದೆ. ಅದರಲ್ಲಿಯೂ ಮುಖ್ಯವಾಗಿ ಎಲೆಕ್ಟ್ರಾನಿಕ್ ಉತ್ಪನ್ನಗಳಿಗೆ ಹಾಗೂ ಸ್ಮಾರ್ಟ್ ಗ್ಯಾಡ್ಜೆಟ್ಸ್‌ಗಳಿಗೆ ವಿಶೇಷ ರಿಯಾಯಿತಿ ಸೇಲ್ ಅನ್ನು ಆಯೋಜಿಸಿ ಗ್ರಾಹಕರನ್ನು ಆಕರ್ಷಿಸುತ್ತದೆ. ಅಮೆಜಾನ್ ಇದೀಗ ಫ್ಲಿಪ್‌ಕಾರ್ಟ್ ಮೊಬೈಲ್ ಸೇವಿಂಗ್ಸ್ ಡೇಸ್ 2021 ಸೇಲ್ ಅನ್ನು ಆಯೋಜಿಸಿದೆ. ಈ ವಿಶೇಷ ಮಾರಾಟದಲ್ಲಿ ಆಯ್ದ ಕೆಲವು ಹೊಸ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ರಿಯಾಯಿತಿಗಳನ್ನು ಘೋಷಿಸಿದೆ.

ಹೌದು, ಅಮೆಜಾನ್ ಆಯೋಜಿಸಿರುವ ಮೊಬೈಲ್ ಸೇವಿಂಗ್ಸ್ ಡೇಸ್ 2021 ಸೇಲ್ ಇದೀಗ ಚಾಲ್ತಿ ಆಗಿದೆ. ಈ ವಿಶೇಷ ಮಾರಾಟ ಮೇಳವು ಇದೇ ಡಿಸೆಂಬರ್ 22 ರ ವರೆಗೂ ಇರಲಿದೆ. ಈ ಮಾರಾಟ ಮೇಳದಲ್ಲಿ ಆಯ್ದ ಕಂಪನಿಗಳ ಜನಪ್ರಿಯ ಫೋನ್‌ಗಳು ಹಾಗೂ ಇತ್ತೀಚಿಗೆ ಬಿಡುಗಡೆಗೊಂಡ ಫೋನ್‌ಗಳಿಗೂ ಶೇ. 40% ವರೆಗೂ ಡಿಸ್ಕೌಂಟ್ ಲಭ್ಯ ಆಗಲಿದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯ ಮಾಡಿದೆ. ಹಾಗಾದರೇ ಅಮೆಜಾನ್ ಮೊಬೈಲ್ ಸೇವಿಂಗ್ಸ್ ಡೇಸ್ 2021 ಸೇಲ್‌ನಲ್ಲಿ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡ ಸ್ಮಾರ್ಟ್‌ಫೋನ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರೆಡ್ಮಿ 9A ಸ್ಮಾರ್ಟ್‌ಫೋನ್
ರೆಡ್ಮಿ 9A ಸ್ಮಾರ್ಟ್‌ಫೋನ್ 720 x 1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 19.5:9 ಅನುಪಾತವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G25 ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 2GB RAM + 32GB ಮತ್ತು 3GB RAM + 32GB ವೇರಿಯಂಟ್‌ನ ಎರಡು ಆಂತರಿಕ ಸ್ಟೋರೇಜ್ ಆಯ್ಕೆಯಗಳನ್ನು ಹೊಂದಿದೆ. ಹಾಗೆಯೇ ಈ ಫೋನ್ ಸಿಂಗಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಹಿಂಬದಿಯಲ್ಲಿ ಕ್ಯಾಮೆರಾವು 13ಎಂಪಿ ಸೆನ್ಸಾರ್‌ನಲ್ಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.
ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 7T ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಅನ್ನು ಒನ್‌ಯುಐ 3.1 ನೊಂದಿಗೆ ರನ್ ಮಾಡುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಒನ್‌ಪ್ಲಸ್ 9 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.55 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು 120Hz ಸ್ಕ್ರೀನ್ ರೀಫ್ರೇಶ್ ರೇಟ್ ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್ ಕೂಲ್ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್ ಆಂಡ್ರಾಯ್ಡ್ ಆಕ್ಸಿಜೆನ್ 11 ಓಎಸ್ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ಗಳು ಎರಡು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB/12GB RAM ಮತ್ತು 128GB/256GB ಆಗಿವೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್ ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್ ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್ ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications