ಅಮೆಜಾನ್ ಮೊಬೈಲ್ ಸೇವಿಂಗ್ಸ್ ಡೇಸ್: ಹೊಸ ಫೋನ್‌ಗಳಿಗೆ ಭಾರೀ ಕೊಡುಗೆ!
ಜನಪ್ರಿಯ ಇ ಕಾಮರ್ಸ್ ದೈತ್ಯ ಅಮೆಜಾನ್ ಪ್ಲಾಟ್‌ಫಾರ್ಮ್ ಏನಾದರೊಂದು ವಿಶೇಷ ಸೇಲ್ ಆಯೋಜಿಸುತ್ತಲೇ ಸಾಗಿದೆ. ಮುಖ್ಯವಾಗಿ ಎಲೆಕ್ಟ್ರಾನಿಕ್ ಹಾಗೂ ಗ್ಯಾಡ್ಜೆಟ್ಸ್‌ಗಳಿಗೆ ವಿಶೇಷ ರಿಯಾಯಿತಿ ಸೇಲ್ ಅನ್ನು ಆಯೋಜಿಸಿ ಗಮನ ಸೆಳೆಯುತ್ತದೆ. ಅಮೆಜಾನ್ ಇದೀಗ ಫ್ಲಿಪ್‌ಕಾರ್ಟ್ ಮೊಬೈಲ್ ಸೇವಿಂಗ್ಸ್ ಡೇಸ್ 2021 ಸೇಲ್ ಅನ್ನು ಆಯೋಜಿಸಿದೆ. ಈ ವಿಶೇಷ ಸೇಲ್‌ನಲ್ಲಿ ಆಯ್ದ ಕೆಲವು ನೂತನ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿಗಳನ್ನು ಘೋಷಿಸಿದೆ.

ಹೌದು, ಅಮೆಜಾನ್ ಆಯೋಜಿಸಿರುವ ಮೊಬೈಲ್ ಸೇವಿಂಗ್ಸ್ ಡೇಸ್ 2021 ಸೇಲ್ ಇದೀಗ ಲೈವ್ ಆಗಿದೆ. ಇನ್ನು ಈ ಮಾರಾಟ ಮೇಳವು ಇದೇ ಡಿಸೆಂಬರ್ 22 ರ ವರೆಗೂ ಚಾಲ್ತಿ ಇರಲಿದೆ. ಈ ಮಾರಾಟ ಮೇಳದಲ್ಲಿ ಜನಪ್ರಿಯ ಮೊಬೈಲ್ ಹಾಗೂ ಇತ್ತೀಚಿಗೆ ಬಿಡುಗಡೆಗೊಂಡ ಫೋನ್‌ಗಳಿಗೂ ಶೇ. 40% ವರೆಗೂ ರಿಯಾಯಿತಿಯನ್ನು ತಿಳಿಸಿದೆ. ಹಾಗೆಯೇ ನೋ ಕಾಸ್ಟ್ ಇಎಮ್‌ಐ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯ ಮಾಡಿದೆ. ಹಾಗಾದರೇ ಅಮೆಜಾನ್ ಮೊಬೈಲ್ ಸೇವಿಂಗ್ಸ್ ಡೇಸ್ 2021 ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ದರದಲ್ಲಿ ಲಭ್ಯವಿರುವ ಸ್ಮಾರ್ಟ್‌ಫೋನ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್ ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್ ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್ ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.
ಒನ್‌ಪ್ಲಸ್ ನಾರ್ಡ್ 2 5G ಸ್ಮಾರ್ಟ್‌ಫೋನ್
ಒನ್‌ಪ್ಲಸ್ ನಾರ್ಡ್ 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಒನ್‌ಪ್ಲಸ್ ನಾರ್ಡ್ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್ ಆಕ್ಸಿಜೆನ್ 11.3 ಓಎಸ್ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್ 12GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಪಡೆದಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ ಫುಲ್ ಹೆಚ್‌ಡಿ+ ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10s ಸ್ಮಾರ್ಟ್ ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications