ಅಮೆಜಾನ್‌ನಲ್ಲಿ ಶಿಯೋಮಿ ಮತ್ತು ರಿಯಲ್‌ಮಿ ಫೋನ್‌ಗಳಿಗೆ ರಿಯಾಯಿತಿ!
ಜನಪ್ರಿಯ ಅಮೆಜಾನ್ ಪ್ಲಾಟ್‌ಫಾರ್ಮ್ ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಆಗಿ ಗುರುತಿಸಿಕೊಂಡಿದೆ. ಮುಖ್ಯವಾಗಿ ಅಮೆಜಾನ್ ಸ್ಮಾರ್ಟ್‌ಫೋನ್‌ಗಳಿಗೆ ಏನಾದರೊಂದು ಬೊಂಬಾಟ್ ಆಫರ್ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ವಿಶೇಷ ದಿನಗಳಂದು ಹೆಚ್ಚಿನ ಡಿಸ್ಕೌಂಟ್ ಸೇಲ್ ಆಯೋಜಿಸುತ್ತದೆ. ಹಾಗೆಯೇ ವಿಶೇಷ ಸೇಲ್ ಹೊರತುಪಡಿಸಿಯೂ ಸಹ ಕೆಲವು ಆಯ್ದ ಫೋನ್‌ಗಳಿಗೆ ರಿಯಾಯಿತಿ ಲಭ್ಯ.

ಹೌದು, ಅಮೆಜಾನ್‌ನಲ್ಲಿ ಎಲ್ಲ ಮಾದರಿಯ ಫೋನ್‌ಗಳಿಗೆ ಬೊಂಬಾಟ್ ಕೊಡುಗೆ ಲಭ್ಯ. ಇತ್ತೀಚಿಗೆ ಬಿಡುಗಡೆ ಆಗಿರುವ ಜನಪ್ರಿಯ ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ಇರುತ್ತದೆ. ಹಾಗೆಯೇ ಶಿಯೋಮಿ ಹಾಗೂ ರಿಯಲ್‌ಮಿ ಕಂಪನಿಯ ಆಯ್ದ ಫೋನ್‌ಗಳಿಗೂ ಉತ್ತಮ ಡಿಸ್ಕೌಂಟ್ ಲಭ್ಯ ಇದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಬೆಸ್ಟ್ ಡಿಸ್ಕೌಂಟ್ ಪಡೆದ ಶಿಯೋಮಿ ಹಾಗೂ ರಿಯಲ್‌ಮಿ ಕಂಪನಿಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್
ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಸ್ಕ್ರೀನ್ ಟು ಬಾಡಿ ಅನುಪಾತ 90.5 ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಪಿಕ್ಸೆಲ್ ಸಾಂದ್ರತೆಯು 405 ಪಿಪಿಐ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್ ಹೊಂದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಪಡೆದುಕೊಂಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಸಿ ಪೋರ್ಟ್ ಮೂಲಕ 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಬ್ಲೂಟೂತ್, ಅನ್ನು ಬೆಂಬಲಿಸಲಿದೆ.
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10s ಸ್ಮಾರ್ಟ್ ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್
ರೆಡ್ಮಿ ನೋಟ್ 10 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದೆ. ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6 GB RAM + 64GB ಮತ್ತು 6GB + 128 GB ಆಗಿವೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ 5,020 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಜೊತೆಗೆ ಡಾರ್ಕ್ ನೈಟ್, ಗ್ಲಾಸಿಲ್ ಬ್ಲೂ ಹಾಗೂ ವಿಂಟೆಜ್ ಬ್ರಾನ್ಜ್ ಬಣ್ಣಗಳ ಆಯ್ಕೆ ಇದೆ.
ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್
ರೆಡ್ಮಿ 9 ಆಕ್ಟೀವ್ ಸ್ಮಾರ್ಟ್ ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 20:9 ಅನುಪಾತವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರ ವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್ ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್ ಆಯ್ಕೆಯಗಳನ್ನು ಹೊಂದಿದೆ. ಇದರೊಂದಿಗೆ ಈ ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್ ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 2 ಎಂಪಿಯ ಸೆನ್ಸಾರ್ ಕ್ಯಾಮೆರಾ ಹೊಂದಿದೆ. ಹಾಗೆಯೇ ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆ ಯನ್ನು ಒಳಗೊಂಡಿದೆ.


Click it and Unblock the Notifications