ಇತ್ತೀಚಿಗಷ್ಟೆ ಲಾಂಚ್‌ ಆದ ಸ್ಮಾರ್ಟ್‌ಫೋನ್‌ಗಳಿಗೆ ಜಬರ್ದಸ್ತ್ ರಿಯಾಯಿತಿ!

|

ಇ ಕಾಮರ್ಸ್‌ ತಾಣಗಳು ಇತ್ತೀಚಿಗೆ ಪ್ರಮುಖ ಶಾಪಿಂಗ್ ಅಡ್ಡಾಗಳಾಗಿ ಕಾಣಿಸಿಕೊಳ್ಳುತ್ತವೆ. ಆ ಪೈಕಿ ಅಮೆಜಾನ್ ಪ್ಲಾಟ್‌ಫಾರ್ಮ್ ಆನ್‌ಲೈನ್‌ ಶಾಪಿಂಗ್ ಪ್ರಿಯರ ಅಚ್ಚುಮೆಚ್ಚಿನ ತಾಣ ಎನಿಸಿಕೊಂಡಿದೆ. ಮುಖ್ಯವಾಗಿ ವಿಶೇಷ ಸೇಲ್‌ ದಿನಗಳನ್ನು ಹೊರತು ಪಡಿಸಿ ಅಮೆಜಾನ್ ತಾಣವು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ಗಳಿಗೆ ಆಕರ್ಷಕ ರಿಯಾಯಿತಿ ನೀಡಿರುತ್ತವೆ.

ಇತ್ತೀಚಿಗಷ್ಟೆ ಲಾಂಚ್‌ ಆದ ಸ್ಮಾರ್ಟ್‌ಫೋನ್‌ಗಳಿಗೆ ಜಬರ್ದಸ್ತ್ ರಿಯಾಯಿತಿ!

ಡಿಸ್ಕೌಂಟ್‌ ಸ್ಮಾರ್ಟ್‌ಫೋನ್‌ ಖರೀದಿ ಮಾಡ ಬಯಸುವ ಗ್ರಾಹಕರಿಗೆ ಅಮೆಜಾನ್ ಇ ಕಾಮರ್ಸ್ ಸೂಕ್ತ ತಾಣ ಎನಿಸಿದೆ. ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಸ್ಯಾಮ್‌ಸಂಗ್, ಒನ್‌ಪ್ಲಸ್‌, ಶಿಯೋಮಿ, ವಿವೋ ಸೇರಿದಂತೆ ಇತರೆ ಬ್ರ್ಯಾಂಡ್‌ ಫೋನ್‌ಗಳು ಖರೀದಿಗೆ ಲಭ್ಯ. ಕೆಲವು ಆಯ್ದ ಫೋನ್‌ಗಳು ಹೆಚ್ಚಿನ ರಿಯಾಯಿತಿಯಲ್ಲಿ ಸಿಗಲಿವೆ. ಹಾಗೆಯೇ ಬ್ಯಾಂಕ್‌ ರಿಯಾಯಿತಿ ಸಹ ಲಭ್ಯ ಆಗಲಿದೆ. ಹಾಗಾದರೇ ಅಮೆಜಾನ್‌ನಲ್ಲಿ ಆಕರ್ಷಕ ದರದಲ್ಲಿ ಕಾಣಿಸಿಕೊಂಡ ಜನಪ್ರಿಯ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ನೋಕಿಯಾ G20 ಸ್ಮಾರ್ಟ್‌ಫೋನ್‌
ನೋಕಿಯಾ G20 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ 5050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಕ್ಯಾಮನ್ 17 ಪ್ರೊ ಸ್ಮಾರ್ಟ್‌ಫೋನ್‌
ಟೆಕ್ನೋ ಕ್ಯಾಮನ್ 17 ಪ್ರೊ ಸ್ಮಾರ್ಟ್‌ಫೋನ್‌ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8-ಇಂಚಿನ ಫುಲ್‌ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಈ ಫೋನ್ ಕ್ವಾಡ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000WAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಒಪ್ಪೋ A16 ಸ್ಮಾರ್ಟ್‌ಫೋನ್‌
ಒಪ್ಪೋ A16 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ HD + ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G35SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದರೊಂದಿಗೆ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಫುಲ್‌ ಹೆಚ್‌ಡಿ+ ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ ಈ ಫೋನ್ 5,000mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯ ವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128 GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಈ ಫೋನ್ ಒಳಗೊಂಡಿದೆ.

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌
ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್ ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಈ ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಅದಕ್ಕೆ ಪೂರಕವಾಗಿ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

Best Mobiles in India

English summary
Amazon Offers: Amazing Offer For Latest Launched Smartphones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X