Home
Deal of the day

ಅಮೆಜಾನ್‌ನಲ್ಲಿ ಈ 5G ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ!

ಇ ಕಾಮರ್ಸ್‌ ದೈತ್ಯ ಎಂದೇ ಬಿಂಬಿತವಾಗಿರುವ ಅಮೆಜಾನ್ ಪ್ಲಾಟ್‌ಫಾರ್ಮ್ ಗ್ರಾಹಕರ ಅಚ್ಚು ಮೆಚ್ಚಿನ ತಾಣ ಎನಿಸಿಕೊಂಡಿದೆ. ಅಮೆಜಾನ್ ಪ್ಲಾಟ್‌ಫಾರ್ಮ್ ಸ್ಮಾರ್ಟ್‌ಫೋನ್‌ಗಳಿಗೆ ಒಂದಿಲ್ಲೊಂದು ವಿಶೇಷ ಕೊಡುಗೆ ನೀಡಿ ಮೊಬೈಲ್ ಪ್ರಿಯರನ್ನು ಸೆಳೆಯುವ ಪ್ರಯತ್ನ ಮಾಡುತ್ತಲ್ಲೇ ಮುನ್ನಡೆದಿದೆ. ಹಬ್ಬದ ವಿಶೇಷ ಸೇಲ್ ಇಲ್ಲದ ಸಂದರ್ಭಗಳಲ್ಲಿಯೂ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ.

ಅಮೆಜಾನ್‌ನಲ್ಲಿ ಈ 5G ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ!

ಹೌದು, ಅಮೆಜಾನ್‌ನಲ್ಲಿ ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ. ಸೇಲ್‌ ವೇಳೆ ಅಮೆಜಾನ್ ಅಗ್ಗದ ದರದ ಫೋನ್‌ಗಳಿಂದ ಹಿಡಿದು ದುಬಾರಿ ಬೆಲೆಯ ಮಾಡೆಲ್ ಫೋನ್‌ಗಳ ವರೆಗೂ ಡಿಸ್ಕೌಂಟ್ ನೀಡುತ್ತದೆ. ಹಾಗೆಯೇ ಹೊಸದಾಗಿ ಲಾಂಚ್ ಆದ ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ. ಸದ್ಯ ಜನಪ್ರಿಯವಾಗಿರುವ 5G ಸಪೋರ್ಟ್‌ ಪಡೆದ ಫೋನ್‌ಗಳಿಗೂ ಅಮೆಜಾನ್‌ನಲ್ಲಿ ರಿಯಾಯಿತಿ ತಿಳಿಸಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ 5G ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌
ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,500mAh ಬ್ಯಾಟರಿ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಈ ಫೋನ್ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ವನ್ನು ಒಳಗೊಂಡಿದೆ.

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆ ಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000mAh ಬ್ಯಾಟರಿ ಸಾಮರ್ಥ್ಯ ವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದು ಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್‌
ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಎಕ್ಸಿನೋಸ್ 990 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೇಯೇ 8GB RAM + 128 GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಹಾಗೆಯೇ ಈ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 15W ಫಾಸ್ಟ್ ಚಾರ್ಜಿಂಗ್ ಪಡೆದಿದೆ.

iQOO Z3 5G ಸ್ಮಾರ್ಟ್‌ಫೋನ್‌
iQOO Z3 5G ಸ್ಮಾರ್ಟ್‌ಫೋನ್‌ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌+ ಎಲ್‌ಸಿಡಿ ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ನಲ್ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ಶಿಯೋಮಿ 11 ಲೈಟ್ 5G NE ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

English summary
Amazon Offers Big Discount For These 5G Smartphones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+