ಅಮೆಜಾನ್ ತಾಣದಲ್ಲಿ ವಿವೋ ಕಂಪೆನಿಯ ಈ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಆಫರ್!
ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಅಮೆಜಾನ್ ನೆಚ್ಚಿನ ತಾಣ ಎನಿಸಿಕೊಂಡಿದೆ. ಅಮೆಜಾನ್ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ನೀಡುವ ವಿಶೇಷ ಡಿಸ್ಕೌಂಟ್‌ಗಳು ಗ್ರಾಹಕರನ್ನು ಆಕರ್ಷಿಸುತ್ತಲೇ ಬಂದಿದೆ. ಅಲ್ಲದೆ ಆನ್‌ಲೈನ್ ಶಾಪಿಂಗ್ ಪ್ರಿಯರಿಗಾಗಿ ವಿಶೇಷ ಡಿಸ್ಕೌಂಟ್ ಮೇಳಗಳನ್ನು ನಡೆಸುತ್ತಲೇ ಬಂದಿದೆ. ಹಬ್ಬ ಹರಿದಿನಗಳಲ್ಲಿ ಹೆಚ್ಚಿನ ಡಿಸ್ಕೌಂಟ್ ಜೊತೆಗೆ ಭರ್ಜರಿ ಕ್ಯಾಶ್‌ಬ್ಯಾಕ್ ಆಫರ್ ಕೂಡ ನೀಡಲಿದೆ. ಇದಲ್ಲದೆ ಸಾಮಾನ್ಯ ದಿನಗಳಲ್ಲಿಯೂ ಕೂಡ ಅಮೆಜಾನ್ ಅನೇಕ ಗ್ಯಾಜೆಟ್ಸ್‌ಗಳ ಮೇಲೆ ಭರ್ಜರಿ ರಿಯಾಯಿತಿ ನೀಡುತ್ತಿದೆ.

ಹೌದು, ಅಮೆಜಾನ್ ತಾಣ ತನ್ನ ಗ್ರಾಹಕರಿಗೆ ವಿಶೇಷ ರಿಯಾಯಿತಿ ನೀಡುತ್ತಲೇ ಬಂದಿದೆ. ವಿಶೇಷ ದಿನಗಳಲ್ಲದೆ ಸಾಮಾನ್ಯ ದಿನಗಳಲ್ಲಿಯೂ ಹೆಚ್ಚಿನ ರಿಯಾಯಿತಿ ನೀಡಲಿದೆ. ಅದರಲ್ಲೂ ಸ್ಮಾರ್ಟ್‌ಫೋನ್‌ಗಳು, ಸ್ಮಾರ್ಟ್‌ಟಿವಿಗಳು, ಲ್ಯಾಪ್‌ಟಾಪ್‌ಗಳ ಮೇಲೆ ಡಿಸ್ಕೌಂಟ್ ನೀಡಲಿದೆ. ಸದ್ಯ ಇದೀಗ ಅಮೆಜಾನ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳ ಮೇಲೆ ಡಿಸ್ಕೌಂಟ್ ನೀಡುತ್ತಿದೆ. ಹಾಗಾದ್ರೆ ಅಮೆಜಾನ್ ತಾಣದಲ್ಲಿ ವಿವೋ ಕಂಪೆನಿಯ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ಡಿಸ್ಕೌಂಟ್ ಪಡೆದಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಿವೋ v21e
ವಿವೋ v21e ಸ್ಮಾರ್ಟ್‌ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 64MP ಸಾಮರ್ಥ್ಯದ ಪ್ರೈಮೆರಿ ಕ್ಯಾಮೆರಾ ಹೊಂದಿದೆ. ಅಲ್ಲದೆ 32MP ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ವಿವೋ V21 5G
ವಿವೋ V21 5G ಸ್ಮಾರ್ಟ್‌ಫೋನ್ 6.44-ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 800U MT6853V ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 44 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಜೊತೆಗೆ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಅನ್ನು ಬೆಂಬಲಿಸಲಿದೆ.
ವಿವೋ Y33s
ವಿವೋ Y33s ಸ್ಮಾರ್ಟ್‌ಫೋನ್ 2,408 x 1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿರಲಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಕ್ಕೆ ಬೆಂಬಲವಾಗಿ ಫನ್‌ಟಚ್ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಇದೆ. ಈ ಸ್ಮಾರ್ಟ್‌ಫೋನ್ 8GB RAM ಸಾಮರ್ಥ್ಯ ಮತ್ತು 128GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ಮೆಮೊರಿ ಹೆಚ್ಚಿಸಲು ಅವಕಾಶ ಇದೆ. ಇನ್ನು ಈ ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್ ಇದೆ. ಸೆಕೆಂಡರಿ ಕ್ಯಾಮೆರಾವು 2 ಎಂಪಿ ಸೆನ್ಸಾರ್‌ನಲ್ಲಿದ್ದು, ತೃತೀಯ ಕ್ಯಾಮೆರಾವು 2 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 16 ಎಂಪಿಯ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇದರೊಂದಿಗೆ 4G LTE, ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ v5 ಮತ್ತು USB OTG ಆಯ್ಕೆ ನೀಡಲಾಗಿದೆ. ಇದು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿದೆ.
ವಿವೋ X60
ವಿವೋ X60 ಫೋನ್ 1,080x2,376 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.8:9 ಆಗಿದ್ದು, 120Hz ರೀಫ್ರೇಶ್ ರೇಟ್ ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM + 256GB ಆಯ್ಕೆಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48MP ಸೆನ್ಸಾರ್ ಹೊಂದಿದೆ. ಇದಲ್ಲದೆ 32MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫ್ಲಾಶ್ ಚಾರ್ಜಿಂಗ್ ಬೆಂಬಲಿಸಲಿದೆ.
ವಿವೋ Y73
ವಿವೋ Y73 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 408 ಪಿಪಿ ಪಿಕ್ಸೆಲ್ ಸಾಂದ್ರತೆ, 90.3% ಸ್ಕ್ರೀನ್-ಟು -ಬಾಡಿ ಅನುಪಾತ, ಮತ್ತು ಎಚ್‌ಡಿಆರ್ 10 ಬೆಂಬಲವನ್ನು ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ ಹಿಲಿಯೊ G95SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫೋನ್ ಫಂಟೌಚ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಬಳಸಿ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್ ಹೊಂದಿದೆ. ಎರಡು ಮತ್ತು ಮೂರನೇ ಕ್ಯಾಮೆರಾ 2MP ಸೆನ್ಸಾರ್ ಪಡೆದಿವೆ. ಇದಲ್ಲದೆ 16MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 33W ಫ್ಲಾಶ್ ಚಾರ್ಜಿಂಗ್ ಬೆಂಬಲಿಸಲಿದೆ.


Click it and Unblock the Notifications