ಅಮೆಜಾನ್ ತಾಣದಲ್ಲಿ ಈ ಸ್ಮಾರ್ಟ್‌ಫೋನ್‌ಗಳಿಗೆ 27% ಡಿಸ್ಕೌಂಟ್ ಲಭ್ಯ!
ಆನ್‌ಲೈನ್ ಶಾಪಿಂಗ್ ಪ್ರಿಯರ ಪಾಲಿಗೆ ಅಮೆಜಾನ್ ನೆಚ್ಚಿನ ತಾಣವಾಗಿದೆ. ಅಮೆಜಾನ್ ವಿಶೇಷ ದಿನಗಳಲ್ಲಿ ಮಾತ್ರವಲ್ಲದೆ ಪ್ರತಿನಿತ್ಯವೂ ಒಂದಲ್ಲ ಒಂದು ಆಫರ್ ನೀಡುತ್ತಲೇ ಬಂದಿದೆ. ಅದರಲ್ಲೂ ಅಮೆಜಾನ್ ಪ್ಲಾಟ್‌ಫಾರ್ಮ್‌ನಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ವಿಶೇಷ ಡಿಸ್ಕೌಂಟ್ ದೊರೆಯುತ್ತಲೇ ಇರುತ್ತದೆ. ಸದ್ಯ ಅಮೆಜಾನ್ ತನ್ ಪ್ಲಾಟ್‌ಫಾರ್ಮ್‌ನಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳ ಮೇಲೆ ವಿಶೇಷ ರಿಯಾಯಿತಿ ನೀಡುತ್ತಿದೆ. ಇವುಗಳಲ್ಲಿ ಟೆಕ್ನೋ ಪಾಪ್ 5 LTE, ರೆಡ್ಮಿ 9A ಸ್ಪೋರ್ಟ್ ಸ್ಮಾರ್ಟ್‌ಫೋನ್‌ಗಳು ಸೇರಿವೆ.
ಹೌದು, ಅಮೆಜಾನ್ ತಾಣದಲ್ಲಿ ಸ್ಮಾರ್ಟ್‌ಫೋನ್‌ಗಳ ಮೇಲೆ ವಿಶೇಷ ಡಿಸ್ಕೌಂಟ್ ದೊರೆಯುತ್ತಿದೆ. ಅಗ್ಗದ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಇದು ಸೂಕ್ತ ಸಮಯ ಎಂದೇ ಹೇಳಬಹುದಾಗಿದೆ. ಕೈ ಗೆಟಕುವ ಬೆಲೆಯಲ್ಲಿ ಆಕರ್ಷಕ ಫೀಚರ್ಸ್ ಒಳಗೊಂಡಿರುವ ಸ್ಮಾರ್ಟ್‌ಫೋನ್‌ಗಳನ್ನು ಪಡೆದುಕೊಳ್ಳಬಹುದಾಗಿದೆ. ಇವುಗಳಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು 27% ಡಿಸ್ಕೌಂಟ್ ಪಡೆದುಕೊಂಡಿವೆ. ಹಾಗಾದ್ರೆ ಅಮೆಜಾನ್ ತಾಣದಲ್ಲಿ ರಿಯಾಯಿತಿ ಪಡೆದಿರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಪಾಪ್ 5 LTE
ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್ 720x1,560 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ HD+ IPS LCD ಡಿಸ್ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಡಾಟ್ ನಾಚ್ ಡಿಸ್‌ಪ್ಲೇ ಆಗಿದ್ದು, 480 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ. ಈ ಫೋನ್ 2GB RAM ಮತ್ತು 32GB ಇಂಟರ್ ಸ್ಟೋರೇಜ್ ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ f/2.2 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ f/2.4 ಲೆನ್ಸ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ f/2.0 ಲೆನ್ಸ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಮೈಕ್ರೋ ಸ್ಲಿಟ್ ಫ್ಲ್ಯಾಶ್‌ಲೈಟ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v4.2, GPS, FM ರೇಡಿಯೋ, 3.5mm ಹೆಡ್‌ಫೋನ್ ಜ್ಯಾಕ್, ಮೈಕ್ರೋ-USB ಪೋರ್ಟ್, Wi-Fi 802.11 b/g/n, GPRS, 4G LTE ಯನ್ನು ಬೆಂಬಲಿಸಲಿದೆ.
ರೆಡ್ಮಿ 9A ಸ್ಪೋರ್ಟ್
ರೆಡ್ಮಿ 9A ಸ್ಪೋರ್ಟ್ ಫೋನ್ 6.53-ಇಂಚಿನ HD+ LCD ಡಿಸ್ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್-ಶೈಲಿಯ ನಾಚ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್ ಶಕ್ತಿಯನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ MIUI 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಈ 13 ಮೆಗಾಪಿಕ್ಸೆಲ್ ಸೆನ್ಸಾರ್ ಫೋನ್ ಸಾಮರ್ಥ್ಯದ ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದೆ. ಜೊತೆಗೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಇದು 5,000mAh ಬ್ಯಾಟರಿಯನ್ನು ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ AI ಫೇಸ್ ಅನ್ಲಾಕ್ ಅನ್ನು ಸಹ ಬೆಂಬಲಿಸುತ್ತದೆ.
ಒನ್‌ಪ್ಲಸ್ ನಾರ್ಡ್ CE 2 5G
ಒನ್‌ಪ್ಲಸ್ ನಾರ್ಡ್ CE 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 409ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಂಪನಿಯ OxygenOS 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ 119-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಈ ಎರಡೂ ಕ್ಯಾಮೆರಾಗಳು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಬೆಂಬಲದೊಂದಿಗೆ ಬರುತ್ತವೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಒನ್‌ಪ್ಲಸ್ ನಾರ್ಡ್ CE 2 5G ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಮೂಲಕ 65W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ರಿಯಲ್‌ಮಿ ನಾರ್ಜೊ 50A
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11. ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 53 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ.
ಟೆಕ್ನೋ ಸ್ಪಾರ್ಕ್ 8 ಪ್ರೊ
ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್ 1,080x2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಪಡೆದುಕೊಂಡಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ವಿಟ್ HiOS v7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ f/1.79 ಲೆನ್ಸ್ , ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ ಸೆನ್ಸರ್ ಮತ್ತು AI ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಡ್ಯುಯಲ್-LED ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.


Click it and Unblock the Notifications