ಅಮೆಜಾನ್‌ನಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿರುವ ಟಾಪ್‌ 5 ಬಜೆಟ್‌ ಫೋನ್‌ಗಳು!

ಬಹುತೇಕ ಆನ್‌ಲೈನ್‌ ಶಾಪಿಂಗ್ ಪ್ರಿಯರಿಗೆ ಮೊದಲು ನೆನಪಾಗುವ ಇ ಕಾಮರ್ಸ್‌ ತಾಣವೆಂದರೇ ಅದು ಅಮೆಜಾನ್ ಆಗಿದೆ. ಅಮೆಜಾನ್ ತಾಣವು ಗ್ರಾಹಕರನ್ನು ಸೆಳೆಯಲು ಒಂದಿಲ್ಲೊಂದು ಆಫರ್ ಘೋಷಿಸುತ್ತದೆ. ಇನ್ನು ಹಬ್ಬ ಅಥವಾ ವಿಶೇಷ ಸಂದರ್ಭಗಳಲ್ಲಿ ಹೆಚ್ಚಿನ ರಿಯಾಯಿತಿ ಲಭ್ಯ ಮಾಡುತ್ತದೆ. ಕೆಲವೊಮ್ಮೆ ಯಾವುದೇ ವಿಶೇಷ ಮಾರಾಟ ಇಲ್ಲದಿದ್ದರೂ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಬೊಂಬಾಟ್ ಆಫರ್ ನೀಡುತ್ತದೆ.

ಅಮೆಜಾನ್‌ನಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದಿರುವ ಟಾಪ್‌ 5 ಬಜೆಟ್‌ ಫೋನ್‌ಗಳು!

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ ಪ್ರಮುಖ ಮೊಬೈಲ್‌ ಕಂಪನಿಗಳು ಹೊಸದಾಗಿ ಬಿಡುಗಡೆ ಮಾಡಿರುವ ಹಾಗೂ ಕೆಲವು ಜನಪ್ರಿಯ ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ. ಕೊಡುಗೆಯಲ್ಲಿ ಅಲ್ಲದೇ ಅತ್ಯುತ್ತಮ ಡಿಸ್‌ಪ್ಲೇ, ಬಿಗ್ ಬ್ಯಾಟರಿ ಬ್ಯಾಕ್‌ಅಪ್‌, 5G ಫೋನ್‌ಗಳು, ಬೆಸ್ಟ್‌ ಕ್ಯಾಮೆರಾ ಫೋನ್‌ಗಳಿಗೂ ದೊಡ್ಡ ಕೊಡುಗೆ ಲಭ್ಯ ಇರುತ್ತದೆ. ಹಾಗೆಯೇ ಬಜೆಟ್‌ ಬೆಲೆಯ ಫೋನ್‌ಗಳಿಗೂ ಆಕರ್ಷಕ ರಿಯಾಯಿತಿ ತಿಳಿಸಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ರಿಯಾಯಿತಿ ಪಡೆದ ಕೆಲವು ಬಜೆಟ್‌ ಬೆಲೆಯ ಫೋನ್‌ಗಳ ಬಗ್ಗೆ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ ಫೋನ್ 2400 x 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ ನೋಟ್ 10S ಫೋನ್
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ ನಾರ್ಜೊ 50A ಫೋನ್
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿ ಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X