Home
Deal of the day

ಅಮೆಜಾನ್‌ನಲ್ಲಿ ಒನ್‌ಪ್ಲಸ್ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್!

ಪ್ರಸ್ತುತ ಇ ಕಾಮರ್ಸ್ ತಾಣ ಗಳು ಕೊಡುಗೆಗಳ ಮೂಲಕ ಗ್ರಾಹಕರನ್ನು ಆಕರ್ಷಿಸಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಅಮೆಜಾನ್ ಪ್ಲಾಟ್‌ಫಾರ್ಮ್ ಇ ಕಾಮರ್ಸ್‌ ದೈತ್ಯ ಕಂಪನಿ ಆಗಿ ಗುರುತಿಸಿಕೊಂಡಿದ್ದು, ಆನ್‌ಲೈನ್ ಖರೀದಿದಾರರ ನೆಚ್ಚಿನ ಅಡ್ಡಾ ಆಗಿದೆ. ಮುಖ್ಯವಾಗಿ ಅಮೆಜಾನ್ ಸ್ಮಾರ್ಟ್‌ಫೋನ್‌ಗಳಿಗೆ ಏನಾದರೊಂದು ಭಾರೀ ಆಫರ್ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ವಿಶೇಷ ದಿನಗಳಂದು ಹೆಚ್ಚಿನ ಡಿಸ್ಕೌಂಟ್ ಸೇಲ್ ಆಯೋಜಿಸುತ್ತದೆ. ಹಾಗೆಯೇ ವಿಶೇಷ ಸೇಲ್ ಹೊರತು ಪಡಿಸಿಯೂ ಸಹ ಕೆಲವು ಆಯ್ದ ಫೋನ್‌ಗಳಿಗೆ ರಿಯಾಯಿತಿ ಲಭ್ಯ.

ಅಮೆಜಾನ್‌ನಲ್ಲಿ ಒನ್‌ಪ್ಲಸ್ ಸ್ಮಾರ್ಟ್‌ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್!

ಅಮೆಜಾನ್‌ ಪ್ಲಾಟ್‌ಫಾರ್ಮ್ ಕಡಿಮೆ ಬೆಲೆಯ ಫೋನ್‌ಗಳಿಂದ, ದುಬಾರಿ ಬೆಲೆಯ ಫೋನ್‌ಗಳಿಗೂ ಆಕರ್ಷಕ ಆಫರ್ ಸಿಗುತ್ತದೆ. ಸದ್ಯ ಅಮೆಜಾನ್‌ನಲ್ಲಿ ಒನ್‌ಪ್ಲಸ್‌ ಕಂಪನಿಯ ಆಯ್ದ ಫೋನ್‌ಗಳಿಗೂ ಭರ್ಜರಿ ಡಿಸ್ಕೌಂಟ್‌ ನೀಡಿವೆ. ಇದರೊಂದಿಗೆ ಐಸಿಐಸಿಐ ಬ್ಯಾಂಕ್‌ ಕಾರ್ಡ್‌ಗಳಿಂದ ಡಿಸ್ಕೌಂಟ್‌ ಸಹ ಲಭ್ಯ ಹಾಗೂ ಆಕರ್ಷಕ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯ. ಹಾಗಾದರೇ ಅಮೆಜಾನ್ ತಾಣದಲ್ಲಿ ಅತ್ಯುತ್ತಮ ರಿಯಾಯಿತಿ ಪಡೆದ ಒನ್‌ಪ್ಲಸ್‌ ಕಂಪನಿಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ 9R 5G ಫೋನ್
ಒನ್‌ಪ್ಲಸ್‌ 9R 5G ಫೋನ್ 6.55-ಇಂಚಿನ ಫ್ಲೂಯಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 870 ಪ್ರೊಸೆಸರ್ ಬಲ ಹೊಂದಿದ್ದು, 8 ಜಿಬಿ + 128 ಜಿಬಿ ಮತ್ತು 12 ಜಿಬಿ + 256 ಜಿಬಿ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಕ್ವಾಡ್-ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 48 ಎಂಪಿ ಸೋನಿ ಐಎಂಎಕ್ಸ್ 586 ಸೆನ್ಸಾರ್‌ ಹೊಂದಿದೆ. ಹಾಗೆಯೇ 65W ವಾರ್ಪ್ ಚಾರ್ಜ್ ತಂತ್ರಜ್ಞಾನವನ್ನು ಪಡೆದಿದೆ. ಈ ಫೋನ್ ಕಾರ್ಬನ್ ಬ್ಲ್ಯಾಕ್ ಮತ್ತು ಲೇಕ್ ಬ್ಲೂ ಕಲರ್ ಆಯ್ಕೆಗಳಲ್ಲಿ ಲಭ್ಯ.

ಒನ್‌ಪ್ಲಸ್‌ ನಾರ್ಡ್‌ 2 5G ಫೋನ್
ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.43 ಇಂಚಿನ Fluid AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಒನ್‌ಪ್ಲಸ್‌ ನಾರ್ಡ್‌ 2 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 1200 ಚಿಪ್‌ಸೆಟ್ ಪ್ರೊಸೆಸರ್‌ ಅನ್ನು ಹೊಂದಿದೆ. ಅದರೊಂದಿಗೆ ಆಂಡ್ರಾಯ್ಡ್‌ ಆಕ್ಸಿಜೆನ್ 11.3 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 12GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಪಡೆದಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 65W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಒನ್‌ಪ್ಲಸ್‌ ನಾರ್ಡ್ CE 5G ಫೋನ್
ಒನ್‌ಪ್ಲಸ್‌ ನಾರ್ಡ್ CE 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್‌-ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 750G SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB, 8GB RAM ಮತ್ತು 128GB ಹಾಗೂ 12GB RAM + 256GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 30W Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್
ಒನ್‌ಪ್ಲಸ್ 8T ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಹೊಂದಿದ್ದು, 6.55 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಆಕ್ಸಿಜನ್ ಒಎಸ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 12GB RAM ಮತ್ತು 256GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX586 ಸೆನ್ಸಾರ್‌, ಎರಡನೇ ಕ್ಯಾಮೆರಾ 16 ಮೆಗಾ ಪಿಕ್ಸೆಲ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 65 ಡಬ್ಲ್ಯೂ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಒನ್‌ಪ್ಲಸ್‌ 9 ಪ್ರೊ 5G ಫೋನ್
ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 1,440x3,216 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 19.8:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಜೊತೆಗೆ LTPO ತಂತ್ರಜ್ಞಾನ ಪಡೆದಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 8GB/12GB RAM ಮತ್ತು 128GB/256GB ಎರಡು ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದ್ದು ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

English summary
Amazon Sale 2021: Best Discount On OnePlus 9 Pro 5G and More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+