Home
Deal of the day

ಹೊಸದಾಗಿ ರಿಯಲ್‌ಮಿ ಫೋನ್‌ ಖರೀದಿ ಮಾಡ್ತಿರಾ?..ಹಾಗಿದ್ರೆ, ಈ ಕೊಡುಗೆ ಉತ್ತಮ!

ಒಂದಿಲ್ಲೊಂದು ಆಕರ್ಷಕ ಆಫರ್‌ಗಳ ಮೂಲಕ ಗಮನ ಸೆಳೆದಿರುವ ಅಮೆಜಾನ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಮೂಂಚೂಣಿಯಲ್ಲಿ ಕಾಣಿಸಿಕೊಂಡಿದೆ. ಅಮೆಜಾನ್ ಪ್ರಮುಖವಾಗಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಹಾಗೂ ಸ್ಮಾರ್ಟ್‌ ಟಿವಿ ಸೇರಿದಂತೆ ಇತರೆ ಎಲೆಕ್ಟ್ರಾನಿಕ್ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ. ಹೀಗಾಗಿ ಆನ್‌ಲೈನ್ ಶಾಪಿಂಗ್ ಮಾಡುವ ಗ್ರಾಹಕರಿಗೆ ಅಮೆಜಾನ್ ಅತ್ಯುತ್ತಮ ಪ್ಲಾಟ್‌ ಫಾರ್ಮ್ ಎನಿಸಿದೆ. ವಿಶೇಷ ದಿನಗಳ ವೇಳೆ ಹೆಚ್ಚಿನ ರಿಯಾಯಿತಿ ನೀಡುತ್ತದೆ.

ಹೊಸದಾಗಿ ರಿಯಲ್‌ಮಿ ಫೋನ್‌ ಖರೀದಿ ಮಾಡ್ತಿರಾ?..ಹಾಗಿದ್ರೆ, ಈ ಕೊಡುಗೆ ಉತ್ತಮ!

ಹಾಗೆಯೇ ಯಾವುದೇ ವಿಶೇಷ ಸೇಲ್ ಇಲ್ಲದೇ ವೇಳೆಯೂ ಅಮೆಜಾನ್‌ ತಾಣವು ಕೆಲವೊಂದು ಫೋನ್‌ಗಳಿಗೆ ಡಿಸ್ಕೌಂಟ್ ನೀಡುತ್ತದೆ. ಇನ್ನು ಅಮೆಜಾನ್ ಇ ಕಾಮರ್ಸ್‌ ಎಲ್ಲ ಮಾದರಿಯ ಫೋನ್‌ಗಳಿಗೂ ಬೊಂಬಾಟ್ ರಿಯಾಯಿತಿ ಲಭ್ಯ ಮಾಡಿರುತ್ತದೆ. ಜೊತೆಗೆ ನೂತನವಾಗಿ ಬಿಡುಗಡೆ ಆಗಿರುವ ಫೋನ್‌ಗಳಿಗೆ ಉತ್ತಮ ಆಫರ್ ನೀಡಿರುತ್ತದೆ. ಸದ್ಯ ಅಮೆಜಾನ್‌ ರಿಯಲ್‌ಮಿ ಕಂಪನಿಯ ಆಯ್ದ ಕೆಲವು ಸ್ಮಾರ್ಟ್‌ಫೋನ್‌ಗಳಿಗೂ ದೊಡ್ಡ ಡಿಸ್ಕೌಂಟ್‌ ನೀಡಿದೆ. ಹಾಗಾದರೇ ಅಮೆಜಾನ್ ತಾಣ ದಲ್ಲಿ ಆಕರ್ಷಕ ರಿಯಾಯಿತಿ ಪಡೆದ ರಿಯಲ್‌ಮಿ ಕಂಪನಿಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌
ರಿಯಲ್‌ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಸ್ಕ್ರೀನ್ ಟು ಬಾಡಿ ಅನುಪಾತ 90.5 ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಪಿಕ್ಸೆಲ್ ಸಾಂದ್ರತೆಯು 405 ಪಿಪಿಐ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್ ಹೊಂದಿದೆ. ಹಾಗೆಯೇ 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಸಿ ಪೋರ್ಟ್ ಮೂಲಕ 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ 8 ಸ್ಮಾರ್ಟ್‌ಫೋನ್
ರಿಯಲ್‌ಮಿ 8 ಸ್ಮಾರ್ಟ್‌ಫೋನ್ 6.4 AMOLED ಡಿಸ್‌ಪ್ಲೇಯನ್ನು ಹೊಂದಿದ್ದು, ಡಿಸ್‌ಪ್ಲೇಯ ಅನುಪಾತವು 20:9 ಆಗಿದೆ. ಹಾಗೆಯೇ ಡಿಸ್‌ಪ್ಲೇಯು HDR 10+ ಸಫೋರ್ಟ್‌ ಸಹ ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ ಹಿಲಿಯೋ G95 ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ Adreno 618 GPU ಗ್ರಾಫಿಕ್ ಸಪೋರ್ಟ್‌ನ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಪ್ರೊಸೆಸರ್‌ ಇತ್ತೀಚಿನ ಆಂಡ್ರಾಯ್ಡ್‌ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿರಲಿದೆ. ಇನ್ನು ಈ ಫೋನ್‌ 4GB + 128 GB ಮತ್ತು 8GB + 128 GB ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದೆ. ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಈ ಫೋನ್ 5,000mAh ಬ್ಯಾಟರಿ ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, ಇದರೊಂದಿಗೆ 30W Dart ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿರಲಿದೆ.

ರಿಯಲ್‌ಮಿ C25Y ಸ್ಮಾರ್ಟ್‌ಫೋನ್‌
ರಿಯಲ್‌ಮಿ C25Y ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ ಕೋರ್ ಯುನಿಸೋಕ್ T610 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ರಿಯಲ್‌ಮಿ ಆರ್ ಎಡಿಷನ್ ಇಂಟರ್ಫೇಸ್‌ನೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಜೊತೆಗೆ 4GB RAM + 64GB ಮತ್ತು 4GB RAM+ 128 GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 4 GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್‌
ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಈ ಫೋನ್‌ 8 ಮೆಗಾ ಪಿಕ್ಸೆಲ್ AI ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 5 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

English summary
Amazon Sale 2022: Amazing Deals On These Realme Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+