ಹೊಸ ಮೊಬೈಲ್ ಖರೀದಿಸುವ ಗ್ರಾಹಕರೆ, ಈ ಆಫರ್ ಮಿಸ್ ಮಾಡ್ಕೋಬೇಡಿ!
ಜನಪ್ರಿಯ ಅಮೆಜಾನ್ ಇ ಕಾಮರ್ಸ್ ತಾಣವು ಆನ್‌ಲೈನ್ ಶಾಪಿಂಗ್ ಗ್ರಾಹಕರ ನೆಚ್ಚಿನ ಅಡ್ಡಾ ಆಗಿ ಕಾಣಿಸಿಕೊಂಡಿದೆ. ಅಮೆಜಾನ್ ತಾಣವು ಏನಾದರೊಂದು ಆಫರ್ ಆಯೋಜಿಸುತ್ತಲೆ ಇರುತ್ತದೆ. ಆ ಪೈಕಿ ಅಮೆಜಾನ್ ತಾಣವು ಸ್ಮಾರ್ಟ್‌ಫೋನ್‌ಗಳಿಗೆ ವಿಶೇಷ ರಿಯಾಯಿತಿ ನೀಡುತ್ತ ಸಾಗಿದೆ. ಒಂದಿಲ್ಲೊಂದು ಮಾರಾಟ ವೇಳ ಆಯೋಜಿಸುವ ಮೂಲಕ ಫೋನ್‌ಗಳಿಗೆ ಆಕರ್ಷಕ ಕೊಡುಗೆ ನೀಡುತ್ತದೆ. ಅದಾಗ್ಯೂ ವಿಶೇಷ ಸೇಲ್ ಇಲ್ಲದ ಸಂದರ್ಭದಲ್ಲಿಯೂ ಆಯ್ದ ಮೊಬೈಲ್‌ಗಳು ರಿಯಾಯಿತಿ ಬೆಲೆಯಲ್ಲಿ ಲಭ್ಯ.

ಅಮೆಜಾನ್ ತಾಣವು ಕೆಲವು ಆಯ್ದ ಮೊಬೈಲ್‌ಗಳಿಗೆ ಭರ್ಜರಿ ರಿಯಾಯಿತಿ ಲಭ್ಯ ಮಾಡಿದೆ. ಸದ್ಯ ಜನಪ್ರಿಯ ಮೊಬೈಲ್ ಸಂಸ್ಥೆ ಸ್ಯಾಮ್‌ಸಂಗ್ ಕಂಪನಿಯ ಭಿನ್ನ ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳ ಆಯ್ಕೆ ಹೊಂದಿದೆ. ಸ್ಯಾಮ್‌ಸಂಗ್ ಕಂಪನಿಯ ಕೆಲವು ಹೈ ಎಂಡ್ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್‌ಗಳು ಅಮೆಜಾನ್‌ನಲ್ಲಿ ವಿಶೇಷ ದರ ಪಟ್ಟಿಯಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಅಮೆಜಾನ್‌ನಲ್ಲಿ ಆಕರ್ಷಕ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡ ಜನಪ್ರಿಯ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A22 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್-ಹೆಚ್‌ಡಿ + ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ ಕೋರ್ 3.1 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 6GB RAM + 128GB ಮತ್ತು 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಯನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನಿನ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 20 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 20 ಸ್ಮಾರ್ಟ್‌ಫೋನ್ 1080 x 2400 ಪಿಕ್ಸಲ್ ಸಾಮರ್ಥ್ಯದೊಂದಿಗೆ 6.7 ಇಂಚಿನ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇದು Exynos 990 SoC ಚಿಪ್‌ಸೆಟ್ ಸಾಮರ್ಥ್ಯದ ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI 2.0 ಬೆಂಬಲಿತ ಆಂಡ್ರಾಯ್ಡ್ 10 ಓಎಸ್ ಸಪೋರ್ಟ್ ಇದೆ. ಒಟ್ಟು ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಹೊಂದಿದೆ. ಇನ್ನು ಸೆಕೆಂಡರಿ ಮತ್ತು ತೃತೀಯ ಕ್ಯಾಮೆರಾಗಳೆರಡು ಸಹ ಕ್ರಮವಾಗಿ 12 ಎಂಪಿಯ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಹಾಗೆಯೇ ಈ ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಹಾಗೆಯೇ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.2 ಇಂಚಿನ ಫ್ಲಾಟ್ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ ಕೋರ್ ಎಕ್ಸಿನೋಸ್ 2100 SoC ಪ್ರೊಸೆಸರ್ ಅನ್ನು ಹೊಂದಿದ್ದು,ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್‌ನೊಂದಿಗೆ 120 ಡಿಗ್ರಿಗಳಷ್ಟು ಫೀಲ್ಡ್-ಆಫ್-ವ್ಯೂ ಹೊಂದಿದೆ. ಇದು 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು USB PD 3.0 ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒಂದು ಯುಐ ಕೋರ್ 2.5 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಈ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರೊಂದಿಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G LTE, ವೈ-ಫೈ, ಬ್ಲೂಟೂತ್, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ exynos 9611 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್ ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್ ಫೋನ್ ಆಕ್ಟಾ ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್ ಆಯ್ಕೆಯ ಇಂಟರ್ ಸ್ಟೋರೇಜ್ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್ ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ + ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್ ಫೋನ್ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಇನ್ಫಿನಿಟಿ-ಯು ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 6GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 6,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನ ವನ್ನು ಬೆಂಬಲಿಸುತ್ತದೆ.
Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.