ರಿಯಲ್‌ಮಿ ಮತ್ತು ಟೆಕ್ನೋ ಫೋನ್‌ಗಳಿಗೆ ಭರ್ಜರಿ ರಿಯಾಯಿತಿ!
ಒಂದಿಲ್ಲೊಂದು ವಿಶೇಷ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ಗ್ರಾಹಕರ ಫೇವರೇಟ್ ಇ ಕಾಮರ್ಸ್ ಎನಿಸಿಕೊಂಡಿರುವ ಅಮೆಜಾನ್ ಮೊಬೈಲ್‌ಗಳಿಗೆ ಬೆಸ್ಟ್ ಕೊಡುಗೆ ನೀಡುತ್ತದೆ. ಮುಖ್ಯವಾಗಿ ಹಬ್ಬದ ಹಾಗೂ ವಿಶೇಷ ದಿನಗಳಲ್ಲಿ ಸ್ಮಾರ್ಟ್‌ಫೋನ್, ಮೊಬೈಲ್, ಲ್ಯಾಪ್‌ಟಾಪ್ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್ ಗಳಿಗೆ ಆಕರ್ಷಕ ಕೊಡುಗೆ ನೀಡುತ್ತದೆ. ಇನ್ನು ಆಫರ್ ಇಲ್ಲದ ವೇಳೆಯು ಅತ್ಯುತ್ತಮ ರಿಯಾಯಿತಿ ಲಭ್ಯ ಮಾಡಿರುತ್ತದೆ.

ಅಮೆಜಾನ್ ತಾಣವು ವಿಶೇಷ ಮಾರಾಟ ಮೇಳ ಆಯೋಜಿಸುವ ಮೂಲಕ ಪ್ರಮುಖ ಕಂಪನಿಗಳ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ ಮಾಡುತ್ತದೆ. ಹಾಗೆಯೇ ಬಜೆಟ್ ದರದ ಫೋನ್‌ಗಳಿಂದ ಹೈ ಎಂಡ್ ಫೋನ್‌ಗಳಿಗೂ ಕೊಡುಗೆ ಲಭ್ಯ. ಜೊತೆಗೆ ಇತ್ತೀಚಿಗೆ ಬಿಡುಗಡೆ ಆಗಿರುವ ಫೋನ್ ಗಳಿಗೂ ಭರ್ಜರಿ ರಿಯಾಯಿತಿ ಲಭ್ಯ ಇದೆ. ರಿಯಲ್‌ಮಿ ಮತ್ತು ಟೆಕ್ನೋ ಫೋನ್‌ಗಳಿಗೆ ಆಕರ್ಷಕ ಕೊಡುಗೆ ಲಭ್ಯ ಮಾಡಿದೆ. ಹಾಗಾದರೇ ಅಮೆಜಾನ್ ನಲ್ಲಿ ಸದ್ಯ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿರುವ ಜನಪ್ರಿಯ ರಿಯಲ್‌ಮಿ ಮತ್ತು ಟೆಕ್ನೋ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್ ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 2 GB RAM ಮತ್ತು 32 GB ಇಂಟರ್ ಸ್ಟೋರೇಜ್ ವೇರಿಯಂಟ್ ಆಯ್ಕೆ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಹೊಂದಿದೆ. ಇದರೊಂದಿಗೆ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.
ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್
ಟೆಕ್ನೋ ಪೋವಾ 5G ಸ್ಮಾರ್ಟ್‌ಫೋನ್ 1,080x2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.9 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಬೆಂಬಲಿಸಲಿದೆ. ಹಾಗೆಯೇ 8 GB RAM ಮತ್ತು 128 GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ f/1.6 ಅಪರ್ಚರ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು AI ಅನ್ನು ಕ್ವಾಡ್ ಫ್ಲ್ಯಾಷ್‌ನೊಂದಿಗೆ ಒಳಗೊಂಡಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದು 32 ದಿನಗಳ ಸ್ಟ್ಯಾಂಡ್‌ಬೈ ಮತ್ತು 183 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ಅನ್ನು ನೀಡುತ್ತದೆ.
ಟೆಕ್ನೋ ಸ್ಪಾರ್ಕ್ 8T ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 8T ಸ್ಮಾರ್ಟ್‌ಫೋನ್ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್ ಸಹ ಪಡೆದಿದೆ. ಜೊತೆಗೆ 4 GB RAM + 64 GB ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್ 8T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್
ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್ ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.
ರಿಯಲ್‌ಮಿ ನಾರ್ಜೊ 50i
ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ 8 ಮೆಗಾ ಪಿಕ್ಸೆಲ್ AI ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications