ಪ್ರೀಮಿಯಂ ದರದ Vivo ಮೊಬೈಲ್‌ಗಳಿಗೆ ಇಲ್ಲಿದೆ ಅತ್ಯುತ್ತಮ ಕೊಡುಗೆ!
ಮುಂಚೂಣಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಆಗಿ ಕಾಣಿಸಿಕೊಂಡಿರುವ ಅಮೆಜಾನ್ ಗ್ರಾಹಕರನ್ನು ಸೆಳೆಯಲು ಒಂದಿಲ್ಲೊಂದು ವಿಶೇಷ ಸೇಲ್ ಮೇಳಗಳನ್ನು ಆಯೋಜಿಸುತ್ತ ಮುನ್ನಡೆದಿದೆ. ಈ ನಿಟ್ಟಿನಲ್ಲಿ ಅಮೆಜಾನ್ ತಾಣವು ಆನ್‌ಲೈನ್ ಶಾಪಿಂಗ್ ಗ್ರಾಹಕರ ನೆಚ್ಚಿನ ಮಾರುಕಟ್ಟೆ ಆಗಿ ಗುರುತಿಸಿಕೊಂಡಿದೆ. ಮುಖ್ಯವಾಗಿ ಸ್ಮಾರ್ಟ್‌ಫೋನ್ ಗಳಿಗೆ ಆಕರ್ಷಕ ಕೊಡುಗೆ ನೀಡಿ ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ಕೆಲವೊಮ್ಮೆ ಯಾವುದೇ ಮಾರಾಟ ಇಲ್ಲದ ವೇಳೆಯು ಭಾರೀ ರಿಯಾಯಿತಿ ನೀಡುತ್ತದೆ.

ಅಮೆಜಾನ್ ಪ್ಲಾಟ್‌ಫಾರ್ಮ್ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಹಿಡಿದು ದುಬಾರಿ ಬೆಲೆಯ ಫೋನ್‌ಗಳಿಗೂ ಬಿಗ್ ಆಫರ್ ಲಭ್ಯ ಮಾಡುತ್ತದೆ. ಹಾಗೆಯೇ ಈ ಪ್ಲಾಟ್‌ಫಾರ್ಮ್ ನಲ್ಲಿ ಇತ್ತೀಚಿಗೆ ಬಿಡುಗಡೆ ಆಗಿರುವ ನೂತನ ಮೊಬೈಲ್‌ಗಳು ಸೇಋಇದಂತೆ, ಪ್ರಮುಖ ಕಂಪನಿಗಳ ಫೋನ್‌ಗಳಿಗೂ ಅತ್ಯುತ್ತಮ ರಿಯಾಯಿತಿ ಇರುತ್ತದೆ. ಹಾಗೆಯೇ ವಿವೋ ಸಂಸ್ಥೆಯ ಆಯ್ದ ಫೋನ್ ಗಳಿಗೂ ದೊಡ್ಡ ಡಿಸ್ಕೌಂಟ್ ಲಭ್ಯ ಇದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಅಧಿಕ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡ ವಿವೋ ಸಂಸ್ಥೆಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ವಿವೋ Y73 ಸ್ಮಾರ್ಟ್‌ಫೋನ್
ವಿವೋ Y73 ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫೋನ್ ಫಂಟೌಚ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ 4,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ವಿವೋ X60 ಸ್ಮಾರ್ಟ್‌ಫೋನ್
ವಿವೋ X60 ಫೋನ್ 1,080 x 2,376 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.8:9 ಆಗಿದ್ದು, 120Hz ರೀಫ್ರೇಶ್ ರೇಟ್ ಪಡೆದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್ ಹೊಂದಿದ್ದು, 12GB RAM + 256 GB ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ವಿವೋ X60 ಫೋನ್ 4,300 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ.
ವಿವೋ Y33s ಸ್ಮಾರ್ಟ್‌ಫೋನ್
ವಿವೋ Y33s ಸ್ಮಾರ್ಟ್‌ಫೋನ್ 2,408 x 1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿರಲಿದೆ. ಡಿಸ್‌ಪ್ಲೇಯು Halo ಫುಲ್ ವ್ಯೂವ್ ಮಾದರಿಯನ್ನು ಪಡೆದಿದ್ದು, ಪಂಚ್‌ಹೋಲ್ ವಿನ್ಯಾಸ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಕ್ಕೆ ಬೆಂಬಲವಾಗಿ ಫನ್‌ಟಚ್ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಇದೆ. ಇನ್ನು ಈ ಸ್ಮಾರ್ಟ್‌ಫೋನ್ 8GB RAM ಸಾಮರ್ಥ್ಯ ಮತ್ತು 128 GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್ ಇದೆ. 16 ಎಂಪಿಯ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.
ವಿವೋ V21 5G ಸ್ಮಾರ್ಟ್‌ಫೋನ್
ವಿವೋ V21 5G ಸ್ಮಾರ್ಟ್‌ಫೋನ್ 1,080 x 2,404 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.44 ಇಂಚಿನ ಫುಲ್ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. 44 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ ಈ ಫೋನ್ 4,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ವಿವೋ Y21 ಸ್ಮಾರ್ಟ್‌ಫೋನ್
ವಿವೋ Y21 ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ HD + (ಗಳು) IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫನ್‌ಟಚ್ ಓಎಸ್ 11.1 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು ಸೈಡ್ ಮೌಂಟೆಡ್ ಫಿಂಗರ್ ಪ್ರಿಂಟ್ ಸೆನ್ಸರ್ ಹೊಂದಿದೆ.


Click it and Unblock the Notifications