ಹೊಸ ಮೊಬೈಲ್‌ ಖರೀದಿ ಮಾಡುವ ಗ್ರಾಹಕರೆ, ಈ ಕೊಡುಗೆ ಗಮನಿಸಿ!

|

ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಗಳು ಆಕರ್ಷಕ ಡಿಸ್ಕೌಂಟ್‌ಗಳನ್ನು ಘೋಷಿಸುತ್ತವೆ. ಈ ನಿಟ್ಟಿನಲ್ಲಿ ಸ್ಮಾರ್ಟ್‌ಫೋನ್‌ ಸೇರಿದಂತೆ ಯಾವುದೇ ಗ್ಯಾಡ್ಜೆಟ್ಸ್‌ ಸಾಧನ ಖರೀದಿ ಮಾಡುವ ಬಹುತೇಕ ಗ್ರಾಹಕರು ಇ ಕಾಮರ್ಸ್‌ಗಳತ್ತ ಮುಖ ಮಾಡುತ್ತಾರೆ. ಆ ಪೈಕಿ ಅಮೆಜಾನ್ ಪ್ಲಾಟ್‌ಫಾರ್ಮ್ ಅನೇಕ ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ತಾಣ ಎನಿಸಿದೆ. ಅಮೆಜಾನ್ ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ನೀಡುತ್ತದೆ.

ಹೊಸ ಮೊಬೈಲ್‌ ಖರೀದಿ ಮಾಡುವ ಗ್ರಾಹಕರೆ, ಈ ಕೊಡುಗೆ ಗಮನಿಸಿ!

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ಸ್ಪೆಷಲ್ ಮಾರಾಟ ಮೇಳಗಳನ್ನು ಆಯೋಜಿಸುವ ಮೂಲಕ ಮೊಬೈಲ್‌ಗಳಿಗೆ ಅಧಿಕ ಕೊಡುಗೆ ನೀಡುತ್ತದೆ. ಪ್ರಮುಖ ಮೊಬೈಲ್ ಸಂಸ್ಥೆಗಳ ಫೋನ್‌ಗಳು ಸೇರಿರುತ್ತವೆ. ಹಾಗೆಯೇ ಕೆಲವೊಮ್ಮೆ ನೂತನವಾಗಿ ಬಿಡುಗಡೆ ಆಗಿರುವ ಫೋನ್‌ಗಳಿಗೂ ಭರ್ಜರಿ ರಿಯಾಯಿತಿ ತಿಳಿಸುತ್ತದೆ. ಸದ್ಯ ಅಮೆಜಾನ್‌ನಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಆದ ಕೆಲವು ಆಯ್ದ ಮೊಬೈಲ್‌ಗಳಿಗೆ ಹೆಚ್ಚಿನ ಡಿಸ್ಕೌಂಟ್‌ ತಿಳಿಸಿದೆ. ಹಾಗಾದರೇ ಅಮೆಜಾನ್‌ ತಾಣದಲ್ಲಿ ಬೊಂಬಾಟ್ ರಿಯಾಯಿತಿ ಪಡೆದ ಕೆಲವು ನೂತನ ಮೊಬೈಲ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌
1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 4GB RAM + 64GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.

ಲಾವಾ ಅಗ್ನಿ 5G ಫೋನ್
ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90 Hz ರೀಫೇಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ Dimensity 810 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದುದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 30W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ.

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB RAM + 128 GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

Best Mobiles in India

English summary
Amazon Sale 2022: Amazing Discounts On These New Mobiles.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X