Home
Deal of the day

ಭಾರೀ ಡಿಸ್ಕೌಂಟ್‌ನಲ್ಲಿ ಜನಪ್ರಿಯ ವಿವೋ ಫೋನ್‌ ಖರೀದಿಸಲು ಇಲ್ಲಿದೆ ಅವಕಾಶ!

ಇ ಕಾಮರ್ಸ್ ದೈತ್ಯ ಎನಿಸಿಕೊಂಡಿರುವ ಅಮೆಜಾನ್ ಭಾರೀ ರಿಯಾಯಿತಿ ಮಾರಾಟ ಮೇಳಗಳ ಮೂಲಕ ಶಾಪಿಂಗ್ ಗ್ರಾಹಕರನ್ನು ಸೆಳೆದಿದೆ. ಅಮೆಜಾನ್ ತಾಣವು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ ಸಾಧನಗಳಿಗೆ ಅಧಿಕ ಡಿಸ್ಕೌಂಟ್‌ ನೀಡುತ್ತದೆ. ಈ ನಿಟ್ಟಿನಲ್ಲಿ ಅನೇಕರಿಗೆ ಅಮೆಜಾನ್ ಅಚ್ಚುಮೆಚ್ಚಿನ ಶಾಪಿಂಗ್ ಅಡ್ಡಾ ಎನಿಸಿದೆ. ಪ್ರತಿಷ್ಠಿತ ಸಂಸ್ಥೆಗಳ ಹೊಸ ಮಾಡೆಲ್‌ ಫೋನ್‌ಗಳಿಗೂ ಕೊಡುಗೆ ಲಭ್ಯ ಮಾಡುತ್ತದೆ. ಈ ಮೂಲಕ ಗ್ರಾಹಕರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ.

ಭಾರೀ ಡಿಸ್ಕೌಂಟ್‌ನಲ್ಲಿ ಜನಪ್ರಿಯ ವಿವೋ ಫೋನ್‌ ಖರೀದಿಸಲು ಇಲ್ಲಿದೆ ಅವಕಾಶ!

ಆನ್‌ಲೈನ್ ಶಾಪಿಂಗ್ ಪ್ರಿಯರ ನೆಚ್ಚಿನ ಅಮೆಜಾನ್‌ ತಾಣವು ವಿಶೇಷ ಸೇಲ್ ಇರದ ವೇಳೆಯು ಕೆಲವು ಆಯ್ದ ಫೋನ್‌ಗಳಿಗೆ ರಿಯಾಯಿತಿ ಲಭ್ಯ ಮಾಡಿರುತ್ತದೆ. ಇನ್ನು ಅಮೆಜಾನ್ ತಾಣದಲ್ಲಿ ಎಲ್ಲ ಮಾದರಿ ಮೊಬೈಲ್‌ಗಳಿಗೂ ಆಕರ್ಷಕ ಕೊಡುಗೆ ಲಭ್ಯ ಮಾಡಿರುತ್ತದೆ. ಆ ಪೈಕಿ ಇತ್ತೀಚಿಗೆ ಬಿಡುಗಡೆ ಆಗಿರುವ ನೂತನ ಸ್ಮಾರ್ಟ್‌ಫೋನ್‌ಗಳಿಗೂ ಬೆಸ್ಟ್‌ ಆಫರ್ ನೀಡಿರುತ್ತದೆ. ಹಾಗೆಯೇ ಸದ್ಯ ಅಮೆಜಾನ್‌ ವಿವೋ ಕಂಪನಿಯ ಕೆಲವು ಆಯ್ದ ಮೊಬೈಲ್‌ಗಳಿಗೆ ರಿಯಾಯಿತಿ ತಿಳಿಸಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಬೊಂಬಾಟ್ ಡಿಸ್ಕೌಂಟ್‌ನಲ್ಲಿ ಕಾಣಿಸಿಕೊಂಡ ಕೆಲವು ವಿವೋ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ವಿವೋ Y73 ಸ್ಮಾರ್ಟ್‌ಫೋನ್‌
ವಿವೋ Y73 ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G95SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫೋನ್ ಫಂಟೌಚ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ವಿವೋ Y53s ಸ್ಮಾರ್ಟ್‌ಫೋನ್
ವಿವೋ Y53s ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.58 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಪಂಚ್‌ಹೋಲ್‌ ವಿನ್ಯಾಸವನ್ನ ಹೊಂದಿದ್ದು, 19.5: 9 ರಚನೆಯ ಅನುಪಾತವನ್ನ ಒಳಗೊಂಡಿದೆ. ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಓಎಸ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM + 128GB ಸ್ಟೋರೇಜ್ ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 33W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸುವುದಿಲ್ಲ.

ವಿವೋ V21 5G ಸ್ಮಾರ್ಟ್‌ಫೋನ್‌
ವಿವೋ V21 5G ಸ್ಮಾರ್ಟ್‌ಫೋನ್‌ 1,080 x 2,404 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.44 ಇಂಚಿನ ಫುಲ್‌ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಫಂಟೌಚ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. 44 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಹಾಗೆಯೇ ಈ ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ವಿವೋ Y33s ಸ್ಮಾರ್ಟ್‌ಫೋನ್‌
ವಿವೋ Y33s ಸ್ಮಾರ್ಟ್‌ಫೋನ್ 2,408 x 1,080 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ. ಡಿಸ್‌ಪ್ಲೇಯು Halo ಫುಲ್‌ ವ್ಯೂವ್ ಮಾದರಿಯನ್ನು ಪಡೆದಿದ್ದು, ಪಂಚ್‌ಹೋಲ್ ವಿನ್ಯಾಸ ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G80 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇದಕ್ಕೆ ಬೆಂಬಲವಾಗಿ ಫನ್‌ಟಚ್ ಆಂಡ್ರಾಯ್ಡ್ 11 ಓಎಸ್‌ ಸಪೋರ್ಟ್‌ ಇದೆ. ಇನ್ನು ಈ ಸ್ಮಾರ್ಟ್‌ಫೋನ್ 8GB RAM ಸಾಮರ್ಥ್ಯ ಮತ್ತು 128GB ಆಂತರಿಕ ಸ್ಟೋರೇಜ್‌ನ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಎಂಪಿ ಸೆನ್ಸಾರ್ ಇದೆ. 16 ಎಂಪಿಯ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.

ವಿವೋ X60 ಸ್ಮಾರ್ಟ್‌ಫೋನ್‌
ವಿವೋ X60 ಫೋನ್ 1,080 x 2,376 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.8:9 ಆಗಿದ್ದು, 120Hz ರೀಫ್ರೇಶ್‌ ರೇಟ್‌ ಪಡೆದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದ್ದು, 12GB RAM + 256GB ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಲ್ಫಿ ಕ್ಯಾಮೆರಾವು 32ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ವಿವೋ X60 ಫೋನ್ 4,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.

English summary
Amazon Sale 2022: Amazing Discounts on These Vivo Smartphones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+