Home
Deal of the day

5000mAh ಬ್ಯಾಟರಿ ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಸಿಗುತ್ತೆ ಭಾರೀ ಡಿಸ್ಕೌಂಟ್‌!

ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್ ಒಂದಿಲ್ಲೊಂದು ಮಾರಾಟ ಮೇಳ ಆಯೋಜಿಸುತ್ತಲೆ ಮುನ್ನಡೆದಿದೆ. ಮಾರಾಟ ಮೇಳಗಳಲ್ಲಿ ಗ್ಯಾಡ್ಜೆಟ್ಸ್‌ಗಳಿಗೆ ಭರ್ಜರಿ ರಿಯಾಯಿತಿ ನೀಡವ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಅದರಲ್ಲಿಯೂ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ ಡಿವೈಸ್‌ಗಳಿಗೆ ಹೆಚ್ಚಿನ ಡಿಸ್ಕೌಂಟ್‌ ಲಭ್ಯ ಮಾಡುತ್ತದೆ. ಈ ನಿಟ್ಟಿನಲ್ಲಿ ಬಹುತೇಕ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಅಮೆಜಾನ್ ಫೇವರೇಟ್ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಆಗಿದೆ.

5000mAh ಬ್ಯಾಟರಿ ಫೋನ್‌ಗಳಿಗೆ ಅಮೆಜಾನ್‌ನಲ್ಲಿ ಸಿಗುತ್ತೆ ಭಾರೀ ಡಿಸ್ಕೌಂಟ್‌!

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ದೀಪಾವಳಿ ಈ ವಿಶೇಷ ಸೇಲ್‌ನಲ್ಲಿ ಫೋನ್‌ಗಳು ಸೇರಿದಂತೆ ಇತರೆ ಎಲೆಕ್ಟ್ರಾನಿಕ ಉತ್ಪನ್ನಗಳಿಗೆ ಹೆಚ್ಚಿನ ಡಿಸ್ಕೌಂಟ್‌ ತಿಳಿಸಲಾಗಿದೆ. ಆದರೆ ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ರಿಯಾಯಿತಿ ನೀಡಲಾಗಿದೆ. ಅದರಲ್ಲಿಯೂ ಇತ್ತೀಚಿಗೆ ಲೀಡಿಂಗ್‌ನಲ್ಲಿರುವ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಸ್ಮಾರ್ಟ್‌ಫೋನ್‌ಗಳು ಸಹ ಭರ್ಜರಿ ಕೊಡುಗೆಯ ದರದಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಅಮೆಜಾನ್ ನಲ್ಲಿ ಆಕರ್ಷಕ ಡಿಸ್ಕೌಂಟ್‌ ಪಡೆದ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಲಾವಾ ಅಗ್ನಿ 5G ಫೋನ್
ಲಾವಾ ಅಗ್ನಿ 5G ಸ್ಮಾರ್ಟ್‌ಫೋನ್ ಅಧಿಕ ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.78 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 90Hz ರೀಫೇಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ Dimensity 810 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಅವುಗಳಲ್ಲಿ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದ್ದುದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 30W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಪಡೆದಿದೆ.

ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 4GB RAM + 64GB ವೇರಿಯಂಟ್‌ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್‌ 8T ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64 GB ಮತ್ತು 6GB RAM + 128 GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

English summary
Amazon Sale 2022: Attractive Deals on These 5000mah Battery Mobiles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+