ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ!
ಜನಪ್ರಿಯ ಇ ಕಾಮರ್ಸ್ ತಾಣ ಅಮೆಜಾನ್ ಏನಾದರೊಂದು ಮಾರಾಟ ಮೇಳ ಆಯೋಜಿಸುತ್ತಲೆ ಮುನ್ನಡೆದಿದೆ. ಮಾರಾಟ ಮೇಳಗಳಲ್ಲಿ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ಗಳಿಗೂ ಭರ್ಜರಿ ರಿಯಾಯಿತಿ ನೀಡುವ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಮುಖ್ಯವಾಗಿ ಸ್ಮಾರ್ಟ್‌ಫೋನ್ ಡಿವೈಸ್‌ಗಳಿಗೆ ಹೆಚ್ಚಿನ ಡಿಸ್ಕೌಂಟ್ ಲಭ್ಯ ಮಾಡುತ್ತದೆ. ಈ ನಿಟ್ಟಿನಲ್ಲಿ ಬಹುತೇಕ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ಅಮೆಜಾನ್ ನೆಚ್ಚಿನ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಆಗಿದೆ.

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ಆಯೋಜಿಸುವ ವಿಶೇಷ ಸೇಲ್‌ನಲ್ಲಿ ಎಲ್ಲ ಬಗೆಯ ಇಲೆಕ್ಟ್ರಾನಿಕ್ ಉತ್ಪನ್ನಗಳಿಗೆ ಹೆಚ್ಚಿನ ಡಿಸ್ಕೌಂಟ್ ತಿಳಿಸಲಾಗಿದೆ. ಆದರೆ ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೆ ಬೊಂಬಾಟ್ ರಿಯಾಯಿತಿ ನೀಡಲಾಗಿದೆ. ಅದರಲ್ಲಿಯೂ ಇತ್ತೀಚಿಗೆ ಟ್ರೆಂಡಿಂಗ್‌ನಲ್ಲಿರುವ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯದ ಸ್ಮಾರ್ಟ್‌ಫೋನ್ ಗಳು ಸಹ ಭರ್ಜರಿ ಕೊಡುಗೆಯ ದರದಲ್ಲಿ ಕಾಣಿಸಿಕೊಂಡಿವೆ. ಹಾಗಾದರೇ ಅಮೆಜಾನ್ ನಲ್ಲಿ ಆಕರ್ಷಕ ಡಿಸ್ಕೌಂಟ್ ಪಡೆದ ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯದ ಸ್ಮಾರ್ಟ್‌ಫೋನ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15 W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್
ರೆಡ್‌ಮಿ ನೋಟ್ 10s ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇ ಯನ್ನು ಹೊಂದಿದೆ. ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಕಾರ್ಯನಿರ್ವಹಿಸಲಿದೆ. ಈ ಫೊನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33 W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M12
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್ 720 x 1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಎಕ್ಸಿನೋಸ್ 850SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೇ ಈ ಫೊನ್ 8 ಮೆಗಾ ಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಟೆಕ್ನೋ ಸ್ಪಾರ್ಕ್ 8T ಸ್ಮಾರ್ಟ್‌ಫೋನ್
ಟೆಕ್ನೋ ಸ್ಪಾರ್ಕ್ 8T ಸ್ಮಾರ್ಟ್‌ಫೋನ್ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಪೂರ್ಣ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ಅನುಪಾತವನ್ನು ಒಳಗೊಂಡಿದ್ದು, 401ppi ಪಿಕ್ಸಲ್ ಸಾಂದ್ರತೆಯನ್ನು ಹೊಂದಿದೆ. ಜೊತೆಗೆ 500 nits ಬ್ರೈಟ್ನೆಸ್ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ G35 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಸಪೋರ್ಟ್ ಸಹ ಪಡೆದಿದೆ. ಜೊತೆಗೆ 4GB RAM + 64 GB ವೇರಿಯಂಟ್ ಆಯ್ಕೆಯನ್ನು ಹೊಂದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಹಾಗೆಯೇ ಟೆಕ್ನೋ ಸ್ಪಾರ್ಕ್ 8T ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದ್ದು, ಉತ್ತಮ ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯ ನೀಡಲಿದೆ.
ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080 x 2,400 ಪಿಕ್ಸಲ್ ರೆಸಲ್ಯೂಶನ್ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000 mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18 W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.


Click it and Unblock the Notifications