Home
Deal of the day

48ಎಂಪಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಗೆ ಇಲ್ಲಿದೆ ಬೊಂಬಾಟ್ ರಿಯಾಯಿತಿ!

ದೈತ್ಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಎನಿಸಿಕೊಂಡಿರುವ ಅಮೆಜಾನ್ ಡಿಸ್ಕೌಂಟ್‌ ಮಾರಾಟ ಮೇಳಗಳ ಮೂಲಕ ಆನ್‌ಲೈನ್ ಶಾಪಿಂಗ್ ಗ್ರಾಹಕರನ್ನು ಸೆಳೆದಿದೆ. ಅಮೆಜಾನ್ ತಾಣವು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್‌ ಡಿವೈಸ್‌ಗಳಿಗೆ ಅಧಿಕ ಡಿಸ್ಕೌಂಟ್‌ ನೀಡುತ್ತದೆ. ಈ ನಿಟ್ಟಿನಲ್ಲಿ ಬಹುತೇಕ ಅಮೆಜಾನ್ ಅಚ್ಚುಮೆಚ್ಚಿನ ಶಾಪಿಂಗ್ ತಾಣ ಎನಿಸಿದೆ ಆಗಿದೆ. ಜನಪ್ರಿಯ ಕಂಪನಿಗಳ ನೂತನ ಫೋನ್‌ಗಳಿಗೂ ಆಫರ್‌ ನೀಡಿ, ಸ್ಮಾರ್ಟ್‌ಫೋನ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ.

48ಎಂಪಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಗೆ ಇಲ್ಲಿದೆ ಬೊಂಬಾಟ್ ರಿಯಾಯಿತಿ!

ಅಮೆಜಾನ್‌ ತಾಣವು ಯಾವುದೇ ವಿಶೇಷ ಮಾರಾಟ ಇಲ್ಲದ ವೇಳೆಯು ಕೆಲವು ಆಯ್ದ ಫೋನ್‌ಗಳಿಗೆ ಡಿಸ್ಕೌಂಟ್ ನೀಡುತ್ತದೆ. ಅಮೆಜಾನ್ ತಾಣದಲ್ಲಿ ಎಲ್ಲ ಮಾಡೆಲ್‌ಗಳ ಮೊಬೈಲ್‌ಗಳಿಗೂ ಆಕರ್ಷಕ ಕೊಡುಗೆ ಲಭ್ಯ ಮಾಡಿರುತ್ತದೆ. ಆ ಪೈಕಿ ಇತ್ತೀಚಿಗೆ ಬಿಡುಗಡೆ ಆಗಿರುವ ನೂತನ ಸ್ಮಾರ್ಟ್‌ಫೋನ್‌ಗಳಿಗೂ ಅತ್ಯುತ್ತಮ ಆಫರ್ ಲಭ್ಯ ಮಾಡಿದೆ. ಹಾಗೆಯೇ ಅಮೆಜಾನ್ 48 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸ್ಮಾರ್ಟ್‌ಫೋನ್‌ಗಳಿಗೂ ಭರ್ಜರಿ ರಿಯಾಯಿತಿ ನೀಡಿದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಭಾರೀ ರಿಯಾಯಿತಿ ಪಡೆದ 48 ಮೆಗಾ ಪಿಕ್ಸಲ್ ಕ್ಯಾಮೆರಾ ರಚನೆಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64 GB ಮತ್ತು 6GB RAM + 128 GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M12 ಸ್ಮಾರ್ಟ್‌ ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್‌ ಎಕ್ಸಿನೋಸ್‌ 850SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ನಲ್ಲಿ ಒನ್ ಯುಐ ಕೋರ್‌ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಇದು ಡ್ಯುಯಲ್ ಸಿಮ್ (ನ್ಯಾನೋ) ಸ್ಲಾಟ್‌ಗಳನ್ನು ಬೆಂಬಲಿಸುತ್ತದೆ. ಜೊತೆಗೆ 4GB RAM + 64 GB ಮತ್ತು 6GB RAM + 128 GB ವೇರಿಯೆಂಟ್‌ ಆಯ್ಕೆಯ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ವನ್ನು ಹೊಂದಿದೆ. ಹಾಗೆಯೇ ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಸ್ಮಾರ್ಟ್‌ ಫೋನ್‌ 6,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 8 ಪ್ರೊ ಸ್ಮಾರ್ಟ್‌ಫೋನ್‌ 1,080 x 2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಫುಲ್‌ HD + ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ HiOS v7.6 ನೊಂದಿಗೆ ಕಾರ್ಯ ನಿರ್ವಹಿಸುತ್ತದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

English summary
Amazon Sale 2022: Attractive Discounts On These 48MP Camera Phones.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+