Home
Deal of the day

ಅಮೆಜಾನ್‌ನಲ್ಲಿ ಈ ಬಜೆಟ್‌ ಬೆಲೆಯ ಫೋನ್‌ಗಳಿಗೆ ಭಾರೀ ಡಿಸ್ಕೌಂಟ್!

ಅಮೆಜಾನ್ ಪ್ಲಾಟ್‌ಫಾರ್ಮ್ ಗ್ರಾಹಕರನ್ನು ಸೆಳೆಯಲು ವಿಶೇಷ ಮಾರಾಟ ಮೇಳಗಳನ್ನು ಆಯೋಜಿಸುತ್ತದೆ. ಸೇಲ್‌ನಲ್ಲಿ ಮುಖ್ಯವಾಗಿ ಗ್ಯಾಡ್ಜೆಟ್ಸ್‌ ಡಿವೈಸ್‌ಗಳಿಗೆ ಅಧಿಕ ಆಫರ್ ನೀಡುತ್ತದೆ. ಈ ನಿಟ್ಟಿನಲ್ಲಿ ಅಮೆಜಾನ್ ಬಹುತೇಕ ಶಾಪಿಂಗ್ ಪ್ರಿಯರಿಗೆ ಒನ್‌ಸ್ಟಾಪ್‌ ತಾಣ ಎನಿಸಿದೆ. ಜನಪ್ರಿಯ ಸಂಸ್ಥೆಗಳ ನೂತನ ಫೋನ್‌ಗಳಿಗೂ ಆಫರ್‌ ಲಭ್ಯ ಮಾಡಿ, ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ಹಬ್ಬದ ದಿನಗಳಂದು ಹೆಚ್ಚಿನ ಡಿಸ್ಕೌಂಟ್ ಸೇಲ್ ಆಯೋಜಿಸುತ್ತದೆ.

ಅಮೆಜಾನ್‌ ತಾಣವು ಯಾವುದೇ ವಿಶೇಷ ಮಾರಾಟ ಇಲ್ಲದೇ ವೇಳೆಯು ಆಯ್ದ ಫೋನ್‌ಗಳಿಗೆ ರಿಯಾಯಿತಿ ದೊರೆಯುವಂತೆ ಮಾಡಿರುತ್ತದೆ. ಇನ್ನು ಅಮೆಜಾನ್ ತಾಣದಲ್ಲಿ ಎಲ್ಲ ಶ್ರೇಣಿಯ ಫೋನ್‌ಗಳಿಗೂ ಭಾರೀ ಆಕರ್ಷಕ ಕೊಡುಗೆ ಲಭ್ಯ ಮಾಡಿರುತ್ತದೆ. ಇತ್ತೀಚಿಗೆ ಬಿಡುಗಡೆ ಆಗಿರುವ ಹೊಸ ಸ್ಮಾರ್ಟ್‌ಫೋನ್‌ಗಳಿಗೂ ಆಕರ್ಷಕ ಆಫರ್ ನೀಡಿರುತ್ತದೆ. ಹಾಗೆಯೇ ಅಮೆಜಾನ್‌ ತಾಣವು ಆಯ್ದ ಬಜೆಟ್‌ ದರದ ಸ್ಮಾರ್ಟ್‌ಫೋನ್‌ಗಳಿಗೂ ಭರ್ಜರಿ ಡಿಸ್ಕೌಂಟ್‌ ನೀಡಿದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದ ಬಜೆಟ್‌ ದರದ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಸ್ಮಾರ್ಕ್‌ 7 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 7 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. 2GB RAM ರೂಪಾಂತರವು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಹೊಂದಿದ್ದರೆ, 3GB RAM ರೂಪಾಂತರವು ಆಕ್ಟಾ ಕೋರ್ ಮೀಡಿಯಾಟೆಕ್ ಹಿಲಿಯೊ A25 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸಲಿದೆ. ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಈ ಫೋನ್ 6,000 mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದೆ.

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌
ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನ್‌ 6.52 ಹೆಚ್‌ಡಿ + ಡಾಟ್ ನಾಚ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120-Hz ಟಚ್ ರೆಸ್ಪಾನ್ಸ್‌ ರೇಟ್‌ ಅನ್ನು ಹೊಂದಿದೆ. ಫೋನ್ ಮೀಡಿಯಾ ಟೆಕ್ A25 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 16 ಮೆಗಾ ಪಿಕ್ಸೆಲ್‌ ಎಐ ಡ್ಯುಯಲ್ ಹೈ ರೆಸಲ್ಯೂಶನ್ ಕ್ಯಾಮೆರಾ ಹೊಂದಿದೆ. 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒಪ್ಪೋ A16 ಸ್ಮಾರ್ಟ್‌ಫೋನ್‌
ಒಪ್ಪೋ A16 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD + LCD ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌, 60Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ. ಹಾಗೆಯೇ 480 ನಿಟ್ಸ್ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 4GB RAM ಮತ್ತು 64 GB ಇಂಟರ್‌ನಲ್ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಅನ್ನು ಹೊಂದಿದೆ. ಇದರೊಂದಿಗೆ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಟೆಕ್ನೋ ಸ್ಪಾರ್ಕ್ ಗೋ 2021 ಫೋನ್‌
ಟೆಕ್ನೋ ಸ್ಪಾರ್ಕ್ ಗೋ 2021 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾ ಟೆಕ್ ಹಿಲಿಯೊ A20 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 (ಗೋ ಎಡಿಷನ್) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಹೊಂದಿದೆ. ಇದರೊಂದಿಗೆ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+