Home
Deal of the day

ಅಮೆಜಾನ್‌ನಲ್ಲಿ ಈ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ರಿಯಾಯಿತಿ ಲಭ್ಯ!

ಅಮೆಜಾನ್ ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಆಗಿ ಕಾಣಿಸಿಕೊಂಡಿದೆ. ಅಮೆಜಾನ್ ತಾಣವು ವಿಶೇಷ ಕೊಡುಗೆಗಳ ಮೂಲಕ ಶಾಪಿಂಗ್ ಪ್ರಿಯರನ್ನು ಸೆಳೆದಿದೆ. ಮುಖ್ಯವಾಗಿ ಸ್ಮಾರ್ಟ್‌ಫೋನ್, ಎಲೆಕ್ಟ್ರಾನಿಕ್ ಉತ್ಪನ್ನಗಳು ಸೇರಿದಂತೆ ಇತರೆ ಉತ್ಪನ್ನಗಳಿಗೂ ಅಧಿಕ ರಿಯಾಯಿತಿ ತಿಳಿಸುತ್ತದೆ. ಹಾಗೆಯೇ ಹಬ್ಬದ ಅಥವಾ ಮಂಥ್ ಎಂಡ್ ಸಂದರ್ಭದ ಮಾರಾಟಗಳಲ್ಲಿ ಆಕರ್ಷಕ ಆಫರ್‌ಗಳನ್ನು ಗ್ರಾಹಕರಿಗೆ ಲಭ್ಯ ಮಾಡುತ್ತದೆ.

ಅಮೆಜಾನ್‌ನಲ್ಲಿ ಈ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳಿಗೆ ಭಾರೀ ರಿಯಾಯಿತಿ ಲಭ್ಯ!

ವಿಶೇಷ ಆಫರ್ ಜೊತೆಗೆ ಅಮೆಜಾನ್‌ ಪ್ಲಾಟ್‌ಫಾರ್ಮ್ ಗ್ರಾಹಕರಿಗೆ ಅತ್ಯುತ್ತಮ ವಿನಿಮಯ ಕೊಡುಗೆಗಳನ್ನು ಸಹ ನೀಡುತ್ತದೆ. ಇನ್ನು ಅಮೆಜಾನ್ ಇ ಕಾಮರ್ಸ್‌ ಕಡಿಮೆ ಬೆಲೆಯಿಂದ ಹಿಡಿದಿ ಹೈ ಎಂಡ್ ಮಾದರಿ ಸ್ಮಾರ್ಟ್‌ಫೋನ್‌ಗಳಿಗೂ ಅಧಿಕ ಆಫರ್ ಲಭ್ಯ ಮಾಡಿರುತ್ತದೆ. ಆಫರ್‌ನಲ್ಲಿ ನೂತನವಾಗಿ ಬಿಡುಗಡೆ ಆಗಿರುವ ಫೋನ್‌ಗಳು ಸೇರಿರುತ್ತವೆ. ಸದ್ಯ ಪ್ರಿಮಿಯಂ ಮಾದರಿಯ ಕೆಲವು ಸ್ಮಾರ್ಟ್‌ಫೋನ್‌ಗಳಿಗೂ ಅಮೆಜಾನ್‌ ಭರ್ಜರಿ ಕೊಡುಗೆಯನ್ನು ನೀಡಿದೆ. ಹಾಗಾದರೇ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಅತ್ಯುತ್ತಮ ರಿಯಾಯಿತಿ ಪಡೆದ ಆಯ್ದ ಪ್ರಿಮಿಯಂ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮಿ 11X ಪ್ರೊ ಸ್ಮಾರ್ಟ್‌ಫೋನ್‌
ಶಿಯೋಮಿ ಮಿ 11X ಪ್ರೊ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ AMOLED 120Hz ರಿಫ್ರೆಶ್ ರೇಟ್‌, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ.ಇದಲ್ಲದೆ 20 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 4,520mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಮತ್ತು 2.5W ನಲ್ಲಿ ವೈರ್ಡ್ ರಿವರ್ಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000 mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ಒನ್‌ಪ್ಲಸ್‌ 9 ಪ್ರೊ 5G ಸ್ಮಾರ್ಟ್‌ಫೋನ್‌
ಒನ್‌ಪ್ಲಸ್‌ 9 ಪ್ರೊ 5G ಸ್ಮಾರ್ಟ್‌ಫೋನ್ 1,440 x 3,216 ಪಿಕ್ಸಲ್ ರೆಸಲ್ಯೂಶನ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದೆ. ಹಾಗೆಯೇ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಈ ಫೋನ್‌ 8GB/12GB RAM ಮತ್ತು 128GB/256GB ಆಗಿವೆ. ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಇದು 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M21 2021 ಸ್ಮಾರ್ಟ್‌ಫೋನ್‌
ಸ್ಯಾಮ್‌ಸಂಗ್ ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 11 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ತ್ರಿವಳಿ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಈ ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.

English summary
Amazon Sale 2022: Attractive Offers On These Premium Phones: Details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+