Home
Deal of the day

ಭಾರೀ ಡಿಸ್ಕೌಂಟ್‌ನಲ್ಲಿ ರೆಡ್ಮಿ ಸ್ಮಾರ್ಟ್‌ಫೋನ್‌ ಖರೀದಿಗೆ ಇದು ಸಕಾಲ!

ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳ ದೊಡ್ಡಣ್ಣ ಎಂದೇ ಗುರುತಿಸಿಕೊಂಡಿರುವ ಅಮೆಜಾನ್ ಒಂದಿಲ್ಲೊಂದು ಭರ್ಜರಿ ಮಾರಾಟ ಮೇಳ ಆಯೋಜಿಸುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯುತ್ತ ಮುನ್ನಡೆದಿದೆ. ಅಮೆಜಾನ್ ಇ ಕಾಮರ್ಸ್‌ ತಾಣವು ಆನ್‌ಲೈನ್‌ ಶಾಪಿಂಗ್ ಪ್ರಿಯರಿಗೆ ಫೇವರೇಟ್‌ ಶಾಪಿಂಗ್ ಅಡ್ಡಾ ಎನಿಸಿದೆ. ಇನ್ನು ಹಬ್ಬದ ಸಂದರ್ಭಗಳಲ್ಲಿ ಹಾಗೂ ವಿಶೇಷ ದಿನಗಳಲ್ಲಿ ಕೆಲವು ಆಯ್ದ ಮೊಬೈಲ್‌ಗಳಿಗೆ ಮತ್ತಷ್ಟು ಆಕರ್ಷಕ ರಿಯಾಯಿತಿ ನೀಡುತ್ತದೆ.

ಭಾರೀ ಡಿಸ್ಕೌಂಟ್‌ನಲ್ಲಿ ರೆಡ್ಮಿ ಸ್ಮಾರ್ಟ್‌ಫೋನ್‌ ಖರೀದಿಗೆ ಇದು ಸಕಾಲ!

ಅಮೆಜಾನ್ ಪ್ಲಾಟ್‌ಫಾರ್ಮ್ ಪ್ರಮುಖವಾಗಿ ಮೊಬೈಲ್‌ಗಳಿಗೆ ದೊಡ್ಡ ರಿಯಾಯಿತಿ ಲಭ್ಯ ಮಾಡುತ್ತದೆ. ಈ ಸೇಲ್‌ನಲ್ಲಿ ಗ್ಯಾಡ್ಜೆಟ್‌ ಉತ್ಪನ್ನಗಳಿಗೆ ಬೊಂಬಾಟ್ ಆಫರ್ ಲಭ್ಯ ಮಾಡಿದೆ. ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್‌ಗಳು, ಸ್ಪೀಕರ್‌ಗಳು ಹಾಗೂ ಸ್ಮಾರ್ಟ್‌ವಾಚ್‌ಗಳು ಸೇರಿದಂತೆ ಇತರೆ ಸ್ಮಾರ್ಟ್‌ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ತಿಳಿಸಿದೆ. ಹಾಗೆಯೇ ಆಯ್ದ ಕೆಲವು ಜನಪ್ರಿಯ ಶಿಯೋಮಿ ರೆಡ್ಮಿ ಮೊಬೈಲ್‌ ಫೋನ್‌ಗಳಿಗೆ ಬಿಗ್ ಡಿಸ್ಕೌಂಟ್‌ ಲಭ್ಯ ಇದೆ. ಹಾಗಾದರೇ ಅಮೆಜಾನ್ ಸೇಲ್‌ನಲ್ಲಿ ಆಕರ್ಷಕ ರಿಯಾಯಿತಿ ಪಡೆದ ಶಿಯೋಮಿ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್
ರೆಡ್ಮಿ 9 ಆಕ್ಟಿವ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಂಚ್ ಹೋಲ್ ಕ್ಯಾಮೆರಾ ಮಾದರಿಯಲ್ಲಿದ್ದು, 20:9 ಅನುಪಾತವನ್ನು ಪಡೆದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಫೋನ್ 4GB + 64 GB ಮತ್ತು 6GB + 128 GB ಸ್ಟೋರೇಜ್ ಸಾಮರ್ಥ್ಯದ ಎರಡು ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಹಾಗೆಯೇ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ.

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64 GB ಮತ್ತು 6GB RAM + 128 GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128 GB ಹಾಗೂ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌
ಶಿಯೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಹಾಗೆಯೇ 8 GB + 128 GB, 8 GB + 256 GB ಮತ್ತು 12 GB + 256 GB ಸಾಮರ್ಥ್ಯದ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

English summary
Amazon Sale 2022: Attractive Offers On these Redmi Mobiles.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+