Home
Deal of the day

ಅಮೆಜಾನ್‌ನಲ್ಲಿ 'ಒಪ್ಪೋ' ಸ್ಮಾರ್ಟ್‌ಫೋನ್‌ಗಳಿಗೆ ಜಬರ್ದಸ್ತ್ ರಿಯಾಯಿತಿ ಲಭ್ಯ!

ಜನಪ್ರಿಯ ಇ ಕಾಮರ್ಸ್ ವೆಬ್‌ಸೈಟ್‌ ಅಮೆಜಾನ್ ವಿಶೇಷ ಮಾರಾಟ ಮೇಳಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತದೆ. ಅದರಲ್ಲಿಯೂ ಮುಖ್ಯವಾಗಿ ಅಮೆಜಾನ್ ಗ್ಯಾಡ್ಜೆಟ್ಸ್‌ ಸಾಧನಗಳಿಗೆ ಹೆಚ್ಚಿನ ರಿಯಾಯಿತಿ ನೀಡುತ್ತದೆ. ಈ ನಿಟ್ಟಿನಲ್ಲಿ ಅಮೆಜಾನ್ ಬಹುತೇಕ ಶಾಪಿಂಗ್ ಪ್ರಿಯರ ಫೇವರೇಟ್ ತಾಣ ಆಗಿದೆ. ಜನಪ್ರಿಯ ಸಂಸ್ಥೆಗಳ ನೂತನ ಫೋನ್‌ಗಳಿಗೂ ಆಫರ್‌ ಲಭ್ಯ ಮಾಡಿ, ಮೊಬೈಲ್ ಪ್ರಿಯರನ್ನು ಆಕರ್ಷಿಸುವ ಪ್ರಯತ್ನ ಮಾಡುತ್ತದೆ. ಹಬ್ಬದ ದಿನಗಳಂದು ಅಧಿಕ ಡಿಸ್ಕೌಂಟ್ ಸೇಲ್ ಆಯೋಜಿಸುತ್ತದೆ.

ಅಮೆಜಾನ್‌ನಲ್ಲಿ 'ಒಪ್ಪೋ' ಸ್ಮಾರ್ಟ್‌ಫೋನ್‌ಗಳಿಗೆ ಜಬರ್ದಸ್ತ್ ರಿಯಾಯಿತಿ ಲಭ್ಯ!

ಅಮೆಜಾನ್‌ ತಾಣವು ಯಾವುದೇ ವಿಶೇಷ ಮಾರಾಟ ಒಲ್ಲದೇ ವೇಳೆಯು ಆಯ್ದ ಫೋನ್‌ಗಳಿಗೆ ರಿಯಾಯಿತಿ ದೊರೆಯುವಂತೆ ಮಾಡಿರುತ್ತದೆ. ಇನ್ನು ಅಮೆಜಾನ್ ತಾಣದಲ್ಲಿ ಎಲ್ಲ ಶ್ರೇಣಿಯ ಫೋನ್‌ಗಳಿಗೂ ಭಾರೀ ಆಕರ್ಷಕ ಕೊಡುಗೆ ಲಭ್ಯ ಮಾಡಿರುತ್ತದೆ. ಇತ್ತೀಚಿಗೆ ಬಿಡುಗಡೆ ಆಗಿರುವ ಹೊಸ ಸ್ಮಾರ್ಟ್‌ಫೋನ್‌ಗಳಿಗೂ ಆಕರ್ಷಕ ಆಫರ್ ನೀಡಿರುತ್ತದೆ. ಹಾಗೆಯೇ ಸದ್ಯ ಅಮೆಜಾನ್‌ ಒಪ್ಪೋ ಕಂಪನಿಯ ಆಯ್ದ ಕೆಲವು ಸ್ಮಾರ್ಟ್‌ಫೋನ್‌ಗಳಿಗೂ ಬಿಗ್ ಡಿಸ್ಕೌಂಟ್‌ ನೀಡಿದೆ. ಹಾಗಾದರೇ ಅಮೆಜಾನ್ ತಾಣದಲ್ಲಿ ಆಕರ್ಷಕ ರಿಯಾಯಿತಿ ಪಡೆದ ಒಪ್ಪೋ ಕಂಪನಿಯ ಆಯ್ದ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A74 5G ಫೋನ್
ಒಪ್ಪೋ A74 5G ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ HD + ಗುಣಮಟ್ಟದ AMOLED ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, ಡಿಸ್‌ಪ್ಲೇಯು 20:9 ಅನುಪಾತ ವನ್ನು ಹೊಂದಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 409 ppi ಆಗಿದೆ. ಹಾಗೆಯೇ 800 nits ಬ್ರೈಟ್ನೆಸ್‌ ಸಾಮರ್ಥ್ಯ ವನ್ನು ಪಡೆದಿದೆ. ಹಾಗೆಯೇ ಈ ಪೋನ್ ಆಕ್ಟಾ ಕೋರ್ ಸ್ನ್ಯಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದರೊಂದಿಗೆ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅವುಗಳು ಕ್ರಮವಾಗಿ 48 ಮೆಗಾ ಪಿಕ್ಸಲ್, 8 ಮೆಗಾ ಪಿಕ್ಸಲ್, 2 ಮೆಗಾ ಪಿಕ್ಸಲ್ ಮತ್ತು 2 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಹಾಗೆಯೇ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸಾಮರ್ಥ್ಯ ದಲ್ಲಿದೆ. ಫೋನ್ 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 18W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ.

ಒಪ್ಪೊ A31 ಸ್ಮಾರ್ಟ್‌ಫೋನ್‌

ಒಪ್ಪೊ A31 ಸ್ಮಾರ್ಟ್‌ಫೋನ್ 1600 x 720 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಸಾಮರ್ಥ್ಯ ಹೊಂದಿದೆ. ಹಾಗೆಯೇ ಇದು 4GB + 64 GB ವೇರಿಯಂಟ್ ಮತ್ತು 6GB + 128 GB ವೇರಿಯಂಟ್ ಆಯ್ಕೆ ಹೊಂದಿದೆ. ಜೊತೆಗೆ ತ್ರಿವಳಿ ಕ್ಯಾಮೆರಾ ರಚನೆ ಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 12 ಎಂಪಿ ಸೆನ್ಸಾರ್‌ನಲ್ಲಿದೆ. ಈ ಸ್ಮಾರ್ಟ್‌ಫೋನ್ 4,230 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದ್ದು, ಉತ್ತಮ ಬ್ಯಾಟರಿ ಬ್ಯಾಕ್‌ಅಪ್ ಸಪೋರ್ಟ್ ಒದಗಿಸಲಿದೆ.

ಒಪ್ಪೋ A54 ಸ್ಮಾರ್ಟ್‌ಫೋನ್
ಒಪ್ಪೋ A54 ಸ್ಮಾರ್ಟ್‌ ಫೋನ್ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್ ಅನ್ನು ಹೊಂದಿದ್ದು, 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಒಪ್ಪೋ A16 ಸ್ಮಾರ್ಟ್‌ಫೋನ್‌
ಒಪ್ಪೋ A16 ಸ್ಮಾರ್ಟ್‌ಫೋನ್‌ 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD + LCD ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌, 60Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಹೊಂದಿದೆ. ಹಾಗೆಯೇ 480 ನಿಟ್ಸ್ ಗರಿಷ್ಠ ಬ್ರೈಟ್ನೆಸ್‌ ಅನ್ನು ಪಡೆದಿದೆ. ಈ ಫೋನ್ ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಕಲರ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. 4GB RAM ಮತ್ತು 64 GB ಇಂಟರ್‌ನಲ್ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಅನ್ನು ಹೊಂದಿದೆ. ಇದರೊಂದಿಗೆ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಒಪ್ಪೋ A15s ಸ್ಮಾರ್ಟ್‌ಫೋನ್‌
ಒಪ್ಪೋ A15s ಸ್ಮಾರ್ಟ್‌ಫೋನ್‌ 720 x 1520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.52 ಇಂಚಿನ ಡಿಸ್‌ಪ್ಲೇ ಯನ್ನು ಹೊಂದಿದ್ದು, ವಾಟರ್‌ಡ್ರಾಪ್ ಶೈಲಿಯ ನಾಚ್‌ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ರಚನೆಯ ಅನುಪಾತ 19:9 ಆಗಿದ್ದು, 258PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಈ ಫೋನ್ ಮೀಡಿಯಾ ಟೆಕ್‌ ಹಿಲಿಯೋ P35SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7.2 ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೇಯೇ 4GB + 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಾಗೆಯೇ ಸೆಲ್ಫಿಗಾಗಿ 8 ಎಂಪಿ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,230mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ.

English summary
Amazon Sale 2022: Best Deals On Oppo A74 5G, Oppo A31 and More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+